ಸಿಎಂ ಸ್ಥಾನದಿಂದ ಸಿದ್ದರಾಮಯ್ಯನ್ನ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ: ಬಸನಗೌಡ ಪಾಟೀಲ್ ಯತ್ನಾಳ್​

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​​ ಭವಿಷ್ಯ ನುಡಿದರು.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯನ್ನ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ: ಬಸನಗೌಡ ಪಾಟೀಲ್ ಯತ್ನಾಳ್​
ಶಾಸಕ ಬಸಗೌಡ ಪಾಟೀಲ್​ ಯತ್ನಾಳ್
Follow us
| Updated By: ವಿವೇಕ ಬಿರಾದಾರ

Updated on: Nov 01, 2023 | 12:26 PM

ವಿಜಯಪುರ ನ.01: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ (Siddaramaiah) ಅವರನ್ನು ಕೆಳಗಿಳಿಸಲು ಷಡ್ಯಂತ್ರ ನಡೆದಿದೆ. ಸಚಿವರಾದ ಜಮೀರ್ ಅಹ್ಮದ್,​ ಎಂಬಿ ಪಾಟೀಲ್ ಮತ್ತು ಕೆಎನ್​ ರಾಜಣ್ಣ, ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್​ (Congress) ಒಳಗಡೆಯೇ ಕುತಂತ್ರ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ​ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಯುವನಿಧಿ ಯೋಜನೆ ಇನ್ನೂ ಜಾರಿ ಮಾಡಿಲ್ಲ. ಸರ್ಕಾರ ವೈಫಲ್ಯವಾಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ ಎಂದು ಯತ್ನಾಳ್​​ ಭವಿಷ್ಯ ನುಡಿದರು.

ಇದನ್ನೂ ಓದಿ: ಸರ್ಕಾರ ಉರುಳಿಸುವ ಶಕ್ತಿಯಿರುವುದು ನಮ್ಮಣ್ಣಂಗೆ ಮಾತ್ರ: ರಮೇಶ್​ ಜಾರಕಿಹೊಳಿ ಕಾಲೆಳೆದ ಸತೀಶ್​ ಜಾರಕಿಹೊಳಿ

ಆಪರೇಷನ್ ಕಮಲ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್​ ನೀಡಲಾಗುತ್ತಿದೆ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಅವರು ಆಫರ್​ ನೀಡಿದ ಬಗ್ಗೆ ವಿಡಿಯೋ, ಆಡಿಯೋ ಇದ್ದರೇ ಬಹಿರಂಗಪಡಸಲಿ. ಏನೇ ಆರೋಪ ಇದ್ದರೂ ಅದನ್ನು ಬಹಿರಂಗಪಡಿಸಬೇಕು. ಕಾಂಗ್ರೆಸ್​ನವರು ತಾವೇ ಜಗಳಾಡಿ ಹಾಳಾಗುವಾಗ ನಮ್ಮದೇನು ಕೆಲಸ ಎಂದರು.

ನಕಲಿ ವಿಡಿಯೋ ಸೃಷ್ಟಿಕರ್ತರೇ ಕಾಂಗ್ರೆಸ್​ನ ಮಹಾನಾಯಕರಿದ್ದಾರೆ. ನಕಲಿ ಸಿಡಿ ಮಾಡುವ ಕಂಪನಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇದೆ. ನಕಲಿ ಸಿಡಿ ಮಾಡುವ ಶಕ್ತಿ ಕಾಂಗ್ರೆಸ್​ ಬಂಡೆಗಲ್ಲಿಗಿದೆ. ಬಂಡೆಗಲ್ಲು ಮಾಡಿದ್ದರೆ ಬಹಿರಂಗಪಡಿಸಿ ತನಿಖಾ ಸಂಸ್ಥೆಗೆ ಕೊಡಲಿ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಬಸನಗೌಡ ಪಾಟೀಲ್ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು