Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಯ ಯಶಸ್ಸು ನಿದ್ದೆಗೆಡಿಸಿರುವುದರಲ್ಲಿ ಎರಡು ಮಾತಿಲ್ಲ: ಬಿಜೆಪಿಗೆ ಟಾಂಗ್​ ಕೊಟ್ಟ ಕಾಂಗ್ರೆಸ್​

ಶಕ್ತಿ ಯೋಜನೆ ಇನ್ನೊಂದು ತಿಂಗಳಲ್ಲಿ ಸ್ಥಗಿತಗೊಳ್ಳಲಿದೆ ಎಂದಿರುವ ಬಿಜೆಪಿ ಮಾತು ಅತೃಪ್ತ ಆತ್ಮಗಳ ವ್ಯರ್ಥ ಪ್ರಲಾಪದಂತಿದೆ. 5 ತಿಂಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ಸರ್ಕಾರವನ್ನು ಹೇಗೆ ವಿರೋಧಿಸಬೇಕು, ಟೀಕಿಸಬೇಕು ಎಂದು ತಿಳಿಯದೆ ಅಕ್ಷರಶಃ ಮತಿಭ್ರಮಣೆಯಾದಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್​ ವಾಗ್ದಾಳಿ ಮಾಡಿದೆ.

ಶಕ್ತಿ ಯೋಜನೆಯ ಯಶಸ್ಸು ನಿದ್ದೆಗೆಡಿಸಿರುವುದರಲ್ಲಿ ಎರಡು ಮಾತಿಲ್ಲ: ಬಿಜೆಪಿಗೆ ಟಾಂಗ್​ ಕೊಟ್ಟ ಕಾಂಗ್ರೆಸ್​
ಸಾಂದರ್ಭಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Oct 29, 2023 | 8:10 PM

ಬೆಂಗಳೂರು, ಅಕ್ಟೋಬರ್​​​ 29: ಕಾಂಗ್ರೆಸ್​ ಸರ್ಕಾರದ ಪಂಚ ಯೋಜನೆಗಳ ಪೈಕಿ ಒಂದಾಗಿರುವ ಶಕ್ತಿ ಯೋಜನೆ (Shakti Scheme) ಇನ್ನೊಂದು ತಿಂಗಳಲ್ಲಿ ಸ್ಥಗಿತವಾಗಲಿದೆ ಎಂದು ಇತ್ತೀಚೆಗೆ ಬಿಜೆಪಿ ಟ್ವೀಟ್ ಮಾಡಿತ್ತು. ಇದೀಗ ಕಾಂಗ್ರೆಸ್​ ತಿರುಗೇಟು ನೀಡಿದ್ದು, ಶಕ್ತಿ ಯೋಜನೆಯ ಯಶಸ್ಸು ಬಿಜೆಪಿಯವರ ನಿದ್ದೆಗೆಡಿಸಿರುವುದರಲ್ಲಿ ಎರಡು ಮಾತಿಲ್ಲ. ಶಕ್ತಿ ಯೋಜನೆಗೆ ನಿಜವಾಗಲೂ ಶಕ್ತಿ ತುಂಬುತ್ತಿರುವ ಬಿಜೆಪಿಯವರಿಗೆ ಧನ್ಯವಾದಗಳು. ಶಕ್ತಿ ಯೋಜನೆ ಇನ್ನೊಂದು ತಿಂಗಳಿಗೆ ನಿಲ್ಲಲಿದೆ ಎಂದು‌ ಬಿಜೆಪಿಗರು ಬಡಬಡಾಯಿಸುತ್ತಿದ್ದಾರೆ ಎಂದು ಕಿಡಿಕಾರಿದೆ.

ಶಕ್ತಿ ಯೋಜನೆ ಅನುಷ್ಠಾನವೇ ಆಗುವುದಿಲ್ಲ, ಸಾರಿಗೆ ಸಂಸ್ಥೆಗಳು ದಿವಾಳಿಯಾಗಲಿವೆ ಎಂದು ಬೊಬ್ಬೆ ಇಡುತ್ತಿದ್ದವರು ಇಂದು ಈಗಾಗಲೇ ರೂ.2000 ಕೋಟಿ ರೂ. ವೆಚ್ಚವಾಗಿದೆ, ಬಜೆಟ್‌ನಲ್ಲಿ ಮೀಸಲಿಟ್ಟಿರುವ ಹಣ ಖಾಲಿಯಾಗುತ್ತಿದೆ ಎನ್ನುತ್ತಿದ್ದಾರೆ. ಬಜೆಟ್​ನಲ್ಲಿ ಮೀಸಲಿಟ್ಟಿರುವ ಹಣವನ್ನು ಹೆಚ್ಚಿಸಿ ಸಾರಿಗೆ ಸಂಸ್ಥೆಗಳಿಗೆ‌ ಹಣ ನೀಡುವ ಜವಾಬ್ದಾರಿ ನಮ್ಮದಿದೆ.

ಇದನ್ನೂ ಓದಿ: ಇಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ: ಸಿಎಂ ಸಿದ್ದರಾಮಯ್ಯ

ಕಳೆದ 5 ವರುಷಗಳ ಬಿಜೆಪಿ ಆಡಳಿತದಲ್ಲಿ ಒಂದೇ‌ ಒಂದು ನೇಮಕಾತಿ ಮಾಡದೆ, ಬಸ್ಸುಗಳನ್ನು ಖರೀದಿಸದೆ, ಸಾರ್ವಜನಿಕರು ಡಕೋಟ ಬಸ್ಸಿನಲ್ಲಿ ಓಡಾಡುವಂತೆ ಮಾಡಿ, ಸಾರಿಗೆ ಸಂಸ್ಥೆಗಳಲ್ಲಿ 31.03.2023 ಕ್ಕೆ ರೂ.3735 ಕೋಟಿ ಬಾಕಿ‌ ಹೊಣೆಗಾರಿಕೆ ಇಟ್ಟಿರುವ ಕೀರ್ತಿ ಬಿಜೆಪಿಯವರಿಗೆ ಸಲ್ಲಬೇಕು.

ಕಾಂಗ್ರೆಸ್​ ಟ್ವೀಟ್​ 

ಈಗಾಗಲೇ ನಾವು 5675 ಬಸ್ಸುಗಳ ಖರೀದಿಯ ಪ್ರಕ್ರಿಯೆ ಹಾಗೂ 8719 ಸಿಬ್ಬಂದಿಗಳ ನೇಮಕಾತಿಗೆ ಅನುಮತಿ‌ ನೀಡಿದ್ದೇವೆ. ನಮ್ಮ ಕೆಲಸವೇ‌ ನಮ್ಮ ಶಕ್ತಿ ಎಂದು ನಿರೂಪಿಸಿದ್ದೇವೆ. ಶಕ್ತಿ‌ ಯೋಜನೆಯು ಮುಂದಿನ 10 ವರುಷಗಳವರೆಗೆ ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆಯ ನಮ್ಮ ಪ್ರಯಾಣ ಗುರಿ‌ ಮುಟ್ಟಲಿದೆ.

ಶಕ್ತಿ ಯೋಜನೆ ಇನ್ನೊಂದು ತಿಂಗಳಲ್ಲಿ ಸ್ಥಗಿತಗೊಳ್ಳಲಿದೆ ಎಂದಿರುವ ಬಿಜೆಪಿ ಮಾತು ಅತೃಪ್ತ ಆತ್ಮಗಳ ವ್ಯರ್ಥ ಪ್ರಲಾಪದಂತಿದೆ. 5 ತಿಂಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ಸರ್ಕಾರವನ್ನು ಹೇಗೆ ವಿರೋಧಿಸಬೇಕು, ಟೀಕಿಸಬೇಕು ಎಂದು ತಿಳಿಯದೆ ಅಕ್ಷರಶಃ ಮತಿಭ್ರಮಣೆಯಾದಂತೆ ವರ್ತಿಸುತ್ತಿದೆ ಎಂದು ವಾಗ್ದಾಳಿ ಮಾಡಲಾಗಿದೆ.

ಇದನ್ನೂ ಓದಿ: ಸಿಎಂ, ಡಿಸಿಎಂ ಸಿದ್ಧಪಡಿಸಿದ ನಿಗಮ ಮಂಡಳಿ ಪಟ್ಟಿ ಟಿವಿ9ಗೆ ಲಭ್ಯ: ಯಾರಿಗೆಲ್ಲಾ ನಿಗಮ ಮಂಡಳಿ ಪಟ್ಟ?

ಶಕ್ತಿ ಯೋಜನೆ ಅತ್ಯಂತ ಯಶಸ್ವಿ ಹಾಗೂ ಜನಪ್ರಿಯ ಯೋಜನೆಯಾಗಿ ರಾಜ್ಯದ ಮಹಿಳೆಯರ ಸ್ವಾವಲಂಭಿ ಬದುಕಿಗೆ ಶಕ್ತಿ ತುಂಬುತ್ತಿದೆ. ಇಂತಹ ಅಪಪ್ರಚಾರಗಳಿಂದ ಬಿಜೆಪಿ ಮುಖಭಂಗ ಅನುಭವಿಸುತ್ತದೆಯೇ ಹೊರತು ಸಾಧನೆ ಮಾಡಲಾಗದು.

ಉಚಿತ ಪ್ರಯಾಣದಿಂದ ಸಾರಿಗೆ ನಿಗಮಗಳು ದಿವಾಳಿಯಾಗುತ್ತವೆ ಎಂದಿತ್ತು, ಆದರೆ ನಿಗಮಗಳಿಗೆ ಹೆಚ್ಚು ಆದಾಯ ಹರಿದು ಬಂದಿದೆ, ಶಕ್ತಿ ಯೋಜನೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ಹೆಚ್ಚಿಸಿ ಸಾರಿಗೆ ನಿಗಮಗಳಿಗೆ ಹಾಗೂ ಮಹಿಳೆಯರಿಗೆ ಇನ್ನಷ್ಟು ಶಕ್ತಿ ತುಂಬುತ್ತೇವೆ.

ಕಾಂಗ್ರೆಸ್​ ಟ್ವೀಟ್​

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಶಕ್ತಿ ಬಂದಿದೆ, ದೇವಾಲಯಗಳ ಆದಾಯಕ್ಕೆ ಶಕ್ತಿ ಬಂದಿದೆ, ಇಂತಹ ಯೋಜನೆ ನಿಲ್ಲಲಿದೆ ಎನ್ನುವ ಬಿಜೆಪಿಯದ್ದು ನನಸಾಗದ ಕನಸು ಮಾತ್ರ. ನಮ್ಮ ಸರ್ಕಾರ ಸಾರಿಗೆ ನೌಕರರಿಗೆ ಸರಿಯಾದ ಕಾಲಕ್ಕೆ ಸಂಬಳ ನೀಡುತ್ತಿದೆ, ನೌಕರರಿಗೆ ವಿಮೆ ಸೌಲಭ್ಯ ಹೆಚ್ಚಿಸಿದೆ, ನೌಕರರ ಮಕ್ಕಳ ವಿದ್ಯಾಭಾಸಕ್ಕೆ ಹಾಗೂ ಹೊಸ ಬಸ್​ಗಳ ಖರೀದಿಗೆ ಯೋಜನೆ ರೂಪಿಸಿದೆ, ಹೊಸ ನೌಕರರ ನೇಮಕಕ್ಕೆ ಮುಂದಾಗಿದ್ದೇವೆ.

ಆದರೆ ಬಿಜೆಪಿ ಆಡಳಿತದಲ್ಲಿ ಆಗಿದ್ದೇನು? ನೌಕರರಿಗೆ ಸಂಬಳ ನೀಡದ ಕಾರಣ ಪ್ರತಿಭಟನೆ ನಡೆಸಿದರು, ಪ್ರತಿಭಟಿಸಿದ ನೌಕರರಿಗೆ ವಜಾಗೊಳಿಸುವ ಶಿಕ್ಷೆ ನೀಡಿ ದ್ವೇಷ ಸಾಧಿಸಿತ್ತು ಬಿಜೆಪಿ. ಬಸ್​ಗಳು ನಿರ್ವಹಣೆ ಇಲ್ಲದೆ ಗುಜರಿಗೆ ಸೇರಿದ್ದವು, ಸಾರಿಗೆ ನಿಗಮಗಳು ಡೀಸೆಲ್ ತುಂಬಿಸಲೂ ಹಣವಿಲ್ಲದೆ ನಷ್ಟದ ಕೂಪಕ್ಕೆ ಬಿದ್ದಿದ್ದವು. ಇಂತಹ ಕರಾಳ ಇತಿಹಾಸ ಹೊಂದಿದ ಬಿಜೆಪಿ ಇಂದು ಕುಹುಕವಾಡಿದರೆ ನಂಬಲು ರಾಜ್ಯದಲ್ಲಿ ಬಿಜೆಪಿಯವರನ್ನು ಬಿಟ್ಟು ಬೇರೆ ಇನ್ಯಾರೂ ಮೂರ್ಖರಿಲ್ಲ ಎಂದು ಕಿಡಿಕಾರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:08 pm, Sun, 29 October 23

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ