ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಹುದೊಡ್ಡ ತಪ್ಪು ಮಾಡಿದೆ: ಬಿಜೆಪಿ ವಿರುದ್ಧವೇ ಉರಿಗೌಡ-ನಂಜೇಗೌಡ ಬಾಣ ಬಿಟ್ಟ ಕುಮಾರಸ್ವಾಮಿ

ಕಪೋಲಕಲ್ಪಿತ ಪಾತ್ರ ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದು ಬೆಳೆಯಲು ತನು ಮನ ಧನವನ್ನೆಲ್ಲ ಅರ್ಪಿಸುವುದೇ ಬಿಜೆಪಿ ಎಂದು ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಹುದೊಡ್ಡ ತಪ್ಪು ಮಾಡಿದೆ: ಬಿಜೆಪಿ ವಿರುದ್ಧವೇ ಉರಿಗೌಡ-ನಂಜೇಗೌಡ ಬಾಣ ಬಿಟ್ಟ ಕುಮಾರಸ್ವಾಮಿ
ಹೆಚ್​.ಡಿ ಕುಮಾರಸ್ವಾಮಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 14, 2023 | 11:47 AM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಉರಿಗೌಡ ಹಾಗೂ ದೊಡ್ಡ ಮಂಜೇಗೌಡ ಮಹಾದ್ವಾರ ಎಂದು ಕಟೌಟ್​ ಹಾಕಲಾಗಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಂಡ್ಯದಲ್ಲೇ ಇದಕ್ಕೆ ತೀವ್ರ ಆಕ್ರೋಶ, ಟೀಕೆಗಳು ವ್ಯಕ್ತವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನಲೆ ವಿವಾದಿತ ಬ್ಯಾನರ್​​ ದ್ವಾರವನ್ನು ರಾತ್ರೋ ರಾತ್ರಿ ತೆರವುಗೊಳಿಸಲಾಗಿತ್ತು. ಈ ಹಿನ್ನಲೆ ಇದೀಗ ‘ಕಪೋಲಕಲ್ಪಿತ ಪಾತ್ರ ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದು ಬೆಳೆಯಲು ತನು ಮನ ಧನವನ್ನೆಲ್ಲ ಅರ್ಪಿಸುವುದೇ ಬಿಜೆಪಿ ಎಂದು ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಇದನ್ನೂ ಓದಿ:ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಮಂಡ್ಯದಲ್ಲಿ ಮೋದಿ ಸ್ವಾಗತಕ್ಕೆ ಹಾಕಲಾಗಿದ್ದ ಉರಿಗೌಡ-ದೊಡ್ಡನಂಜೇಗೌಡ ಕಟೌಟ್​ ತೆರವು

ಮಂಡ್ಯದಲ್ಲಿ ಉರಿಗೌಡ, ದೊಡ್ಡ ನಂಜೇಗೌಡ ಬ್ಯಾನರ್ ಅಳವಡಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದು, ‘ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಸುಳ್ಳಿನ ಕಥೆ ಸೃಷ್ಟಿಸಿ, ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ಟಿಪ್ಪುವನ್ನು ಕೊಂದವರೆಂದು ಉರಿಗೌಡ, ನಂಜೇಗೌಡ ಹೆಸರು ಸೃಷ್ಟಿ ಮಾಡಲಾಗಿದೆ. ಒಕ್ಕಲಿಗ ಕಾಲ್ಪನಿಕ ಹೆಸರು ಸೃಷ್ಟಿಸಿ ಮಹಾದ್ವಾರಕ್ಕೆ ಇಟ್ಟಿದ್ದು ಅಪಮಾನ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದಿದ್ದಾರೆ.

ಜೊತೆಗೆ ಮಹಾದ್ವಾರದಲ್ಲಿ ಇದ್ದ ಬಾಲಗಂಗಾಧರನಾಥಶ್ರೀ ಹೆಸರು ಮುಚ್ಚಿಟ್ಟು. ಆ ಜಾಗದಲ್ಲಿ ಕಾಲ್ಪನಿಕ ಪಾತ್ರಗಳ ಹೆಸರು ಹಾಕಿದ ದುರುದ್ದೇಶವೇನು? ಇದು ಬಾಲಗಂಗಾಧರನಾಥ ಸ್ವಾಮೀಜಿಗೆ ಮಾಡಿದ ಅಪಮಾನ ಎಂದಿದ್ದಾರೆ. ದ್ವೇಷದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದೆಂಬ ಭ್ರಮೆಯಲ್ಲಿದೆ. ಇಂತಹ ಲಜ್ಜಗೇಡಿ ನಡೆ ಬಿಜೆಪಿ ಸರ್ಕಾರದ ನೀಚ ರಾಜಕಾರಣಕ್ಕೆ ಸಾಕ್ಷಿ. ಮೋದಿ ಮೆಚ್ಚಿಸಲು ಉರಿಗೌಡ, ನಂಜೇಗೌಡ ಹೆಸರು ಸೃಷ್ಟಿಸಲಾಯ್ತಾ? ಆ ಷಡ್ಯಂತ್ರಕ್ಕೆ ರಾಜ್ಯ ಸರ್ಕಾರದ ಒಪ್ಪಿಗೆಯೂ ಇತ್ತಾ? ಇಲ್ಲವೇ? ಇಂಥ ಹೊಣೆಗೇಡಿ ಕೃತ್ಯದ ಬಗ್ಗೆ ಪ್ರಧಾನಿ ಕಚೇರಿಗೂ ಮಾಹಿತಿ ಇತ್ತಾ? ಸುಳ್ಳಿಗೆ ಆಯಸ್ಸು ಕಡಿಮೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:44 am, Tue, 14 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ