AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಬಸ್ ಪ್ರಯಾಣ ಗ್ಯಾರಂಟಿಗೆ ಕಿಮೀ ಮಿತಿ ನಿಗದಿಗೆ ಚಿಂತನೆ; ಫಲಾನುಭವಿಗಳ ಪಟ್ಟಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಉಚಿತ ಬಸ್​​ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣದ ಮೀತಿ ಮಾನದಂಡ ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಾಹಿತಿ ಪಡೆದುಕೊಂಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:May 29, 2023 | 4:21 PM

Share

ಬೆಂಗಳೂರು: ಉಚಿತ ಬಸ್​​ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣದ ಮಿತಿಗೆ (ಕಿಲೋ ಮೀಟರ್) ಮಾನದಂಡ ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ (Siddaramaiah) ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಉಚಿತ ಬಸ್​ ಪಾಸ್​, ಫಲಾನುಭವಿಗಳ ಪಟ್ಟಿ ನೀಡಿ ಎಂದು ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಯುವ ನಿಧಿ ಗ್ಯಾರಂಟಿ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ.

ವಿದ್ಯಾರ್ಥಿಗಳಿಗೆ 7 ಕೋಟಿ ರೂ. ಅಂದಾಜು ವೆಚ್ಚ

ಪ್ರತಿ ವರ್ಷ ಸುಮಾರು 4.5 ಲಕ್ಷ ಪದವೀಧರರು ಪಾಸ್ ಔಟ್ ಆಗುತ್ತಾರೆ. ಪದವಿ ಪಾಸ್ ಆದವರಿಗೆ 135 ಕೋಟಿ ರೂಪಾಯಿ ಅಂದಾಜು (ಮಾಸಿಕ) ವೆಚ್ಚ ಆಗಲಿದೆ. ಇನ್ನು ಸುಮಾರು 45 ಸಾವಿರ ಡಿಪ್ಲೊಮಾ ವಿದ್ಯಾರ್ಥಿಗಳು ವಾರ್ಷಿಕವಾಗಿ ಪಾಸ್ ಔಟ್ ಆಗುತ್ತಾರೆ. ಡಿಪ್ಲೊಮಾ 1,500 ರೂಪಾಯಿ ಅಂದರೆ ವಿದ್ಯಾರ್ಥಿಗಳಿಗೆ ಮಾಸಿಕ ಸುಮಾರು 7 ಕೋಟಿ ರೂ. ಅಂದಾಜು ವೆಚ್ಚ ತಗುಲುತ್ತೆ. ಅನ್ನಭಾಗ್ಯ 1.27 ಕೋಟಿ ಬಿಪಿಎಲ್ ಕಾರ್ಡ್​​ದಾರರಿಗೆ ಪ್ರಯೋಜನವಾಗಲಿದ್ದು, 10 ಕೆ‌.ಜಿ ಅಕ್ಕಿ ಅನ್ನಭಾಗ್ಯದಡಿ ಸಿಗಲಿದೆ.

ಇದನ್ನೂ ಓದಿ: ಸಚಿವ ಸ್ಥಾನ ವಂಚಿತ ಶಾಸಕರಿಂದ ಬಿಡಿಎ ಚೇರ್ಮನ್ ಹುದ್ದೆಗೆ ಶುರುವಾಯ್ತು ಲಾಬಿ: ರೇಸ್​ನಲ್ಲಿ ಯಾರ್ಯಾರು?

5 ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ರೂ. ವೆಚ್ಚ ಸಾಧ್ಯತೆ

5 ಗ್ಯಾರಂಟಿಗಳಿಗೆ ವಾರ್ಷಿಕ ಒಟ್ಟು 50 ಸಾವಿರ ಕೋಟಿ ವೆಚ್ಚ ಸಾಧ್ಯತೆ ಎಂದು ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್​ರಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ. BPL ಕಾರ್ಡ್​ದಾರರಿಗೆ ‘ಗೃಹಲಕ್ಷ್ಮೀ’ ಯೋಜನೆಗೆ ವಾರ್ಷಿಕ 12 ಸಾವಿರ ಕೋಟಿ ವೆಚ್ಚ ಸಾಧ್ಯತೆ ಇದೆ.

ಇದನ್ನೂ ಓದಿ: ಸಾಮಾಜಿಕ ನ್ಯಾಯ! ಸಿದ್ದರಾಮಯ್ಯ ಸಂಪುಟ ಸಚಿವರ ಸರಾಸರಿ ಆದಾಯ 119 ಕೋಟಿ ರೂ, 24 ಮಂದಿಗೆ ಕ್ರಿಮಿನಲ್ ಹಿನ್ನೆಲೆ

ತೆರಿಗೆ ಹೆಚ್ಚಳ ಸಂಬಂಧ ಸಭೆಯಲ್ಲಿ ಸಮಾಲೋಚನೆ ಮಾಡಲಾಗಿದ್ದು, ಸಂಪನ್ಮೂಲ ಕ್ರೋಡೀಕರಣ ಹೇಗೆ ಎಂಬುದರ ಮಾಹಿತಿ ಸಂಗ್ರಹಿಸಲಾಗಿದೆ.

ಉಚಿತ ವಿದ್ಯುತ್​ ಯೋಜನೆಯಿಂದ 2.14 ಕೋಟಿ ಕುಟುಂಬಗಳಿಗೆ ಅನುಕೂಲ

ಸಭೆಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಬಗ್ಗೆ ವಿಸ್ತೃತವಾಗಿ ಚರ್ಚೆ ಆಗಿದ್ದು, ಉಚಿತ ವಿದ್ಯುತ್​ ಯೋಜನೆಯಿಂದ 2.14 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ. ವಾರ್ಷಿಕ ಬಳಕೆ ಅಂದಾಜು 13,575 ಮಿಲಿಯನ್ ಯೂನಿಟ್ ಅಗತ್ಯವಾಗಿದೆ. ಈ ಯೋಜನೆಗೆ ಅಂದಾಜು 8,008 ಕೋಟಿ ರೂ. ಇಂಧನ ಶುಲ್ಕ ತಗುಲಿಲಿದ್ದು, ಯೋಜನೆ ಜಾರಿಗೆ ಒಟ್ಟು 12,038 ಕೋಟಿ ರೂಪಾಯಿ ಅಗತ್ಯವಿದೆ ಎನ್ನಲಾಗುತ್ತಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:14 pm, Mon, 29 May 23