AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥವುಗಳಿಗೆಲ್ಲ ಪ್ರತಿಕ್ರಿಯಿಸುವ ಸಮಯ ಇದಲ್ಲ: ಮಮತಾ ಬ್ಯಾನರ್ಜಿ ಹೇಳಿಕೆಗೆ ಮಾರ್ಗರೇಟ್ ಆಳ್ವ ಪ್ರತಿಕ್ರಿಯೆ

ಇದು ಆರೋಪ, ಪ್ರತ್ಯಾರೋಪ, ಅಹಂಕಾರ ಅಥವಾ ಸಿಟ್ಟಿಗೆ ಪ್ರತಿಕ್ರಿಯಿಸುವ ಸಮಯವಲ್ಲ. ಇದು ಧೈರ್ಯ, ನಾಯಕತ್ವ ಮತ್ತು ಐಕ್ಯತೆಯ ಹೊತ್ತು. ಧೈರ್ಯದ ದ್ಯೋತಕವಾಗಿರುವ ಮಮತಾ ಬ್ಯಾನರ್ಜಿ ವಿಪಕ್ಷಗಳ ಜತೆ ನಿಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದ ಮಾರ್ಗರೇಟ್ ಆಳ್ವ.

ಇಂಥವುಗಳಿಗೆಲ್ಲ ಪ್ರತಿಕ್ರಿಯಿಸುವ ಸಮಯ ಇದಲ್ಲ: ಮಮತಾ ಬ್ಯಾನರ್ಜಿ ಹೇಳಿಕೆಗೆ ಮಾರ್ಗರೇಟ್ ಆಳ್ವ ಪ್ರತಿಕ್ರಿಯೆ
TV9 Web
| Edited By: |

Updated on:Jul 22, 2022 | 5:56 PM

Share

ದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯ (Vice Presidential election) ಮತದಾನದಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಗುರುವಾರ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಉಪ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ(Margaret Alva), ಇಂಥಾ ವಿಷಯಗಳಿಗೆ, ಅಹಂಕಾರ ಅಥವಾ ಸಿಟ್ಟಿಗೆ ಪ್ರತಿಕ್ರಿಸುವ ಸಮಯ ಇದಲ್ಲ ಎಂದು ಹೇಳಿದ್ದಾರೆ. ಉಪರಾಷ್ಟ್ರಪತಿ ಚುನಾವಣಾ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂಬ ಟಿಎಂಸಿಯ (TMC) ನಿರ್ಧಾರ ಬೇಸರದ ಸಂಗತಿ. ಇದು ಆರೋಪ, ಪ್ರತ್ಯಾರೋಪ, ಅಹಂಕಾರ ಅಥವಾ ಸಿಟ್ಟಿಗೆ ಪ್ರತಿಕ್ರಿಯಿಸುವ ಸಮಯವಲ್ಲ. ಇದು ಧೈರ್ಯ, ನಾಯಕತ್ವ ಮತ್ತು ಐಕ್ಯತೆಯ ಹೊತ್ತು. ಧೈರ್ಯದ ದ್ಯೋತಕವಾಗಿರುವ ಮಮತಾ ಬ್ಯಾನರ್ಜಿ ವಿಪಕ್ಷಗಳ ಜತೆ ನಿಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಆಳ್ವ ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಂಗಾಳದ ಮಾಜಿ ಗವರ್ನರ್ ಜಗದೀಪ್ ಧನ್ ಖರ್ ಕಣದಲ್ಲಿದ್ದಾರೆ, ಮಮತಾ ಬ್ಯಾನರ್ಜಿ ಇತ್ತೀಚೆಗೆ ಧನ್​​ಖರ್ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರನ್ನು ಭೇಟಿಯಾಗಿದ್ದರು. ವಿಪಕ್ಷಗಳಾಗ ಶಿವಸೇನಾ ಮತ್ತು ಜೆಎಂಎಂ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದ ಬೆನ್ನಲ್ಲೇ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷ ಅಭ್ಯರ್ಥಿಗೆ ತಮ್ಮ ಬೆಂಬಲವಿಲ್ಲ ಎಂಬ ಧಾಟಿಯಲ್ಲಿ ಟಿಎಂಸಿ ಮತದಾನದಿಂದ ದೂರವಿರಲು ನಿರ್ಧರಿಸಿದೆ.

Published On - 5:40 pm, Fri, 22 July 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?