ಬಂಧಿತರನ್ನು ಈಗಲೇ ಉಗ್ರರು ಎನ್ನಲಾಗದು: ಗೃಹ ಸಚಿವ ಪರಮೇಶ್ವರ್ ಹೀಗೆಂದಿದ್ದು ಯಾಕೆ?

| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2023 | 5:04 PM

ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಬಂಧಿತ ಶಂಕಿತ ಐವರು ಉಗ್ರರನ್ನು ಈಗಲೇ ಟೆರರಿಸ್ಟ್ ಅಂತಾ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಯಾವ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂಬ ಬಗ್ಗೆ ತನಿಖೆ ತಿಳಿಯಬೇಕಿದೆ ಎಂದರು.

ಬಂಧಿತರನ್ನು ಈಗಲೇ ಉಗ್ರರು ಎನ್ನಲಾಗದು: ಗೃಹ ಸಚಿವ ಪರಮೇಶ್ವರ್ ಹೀಗೆಂದಿದ್ದು ಯಾಕೆ?
ಗೃಹ ಸಚಿವ ಡಾ.ಜಿ. ಪರಮೇಶ್ವರ್
Follow us on

ಬೆಂಗಳೂರು: ನಗರದಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಬಂಧಿತ ಶಂಕಿತ ಐವರು ಉಗ್ರರನ್ನು ಈಗಲೇ ಟೆರರಿಸ್ಟ್ ಅಂತಾ ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ (G Parameshwara) ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರನ್ನು CCB ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮಾಡಿ ಟೆರರ್​ ಲಿಂಕ್​​ ಇದೆಯಾ ಅಂತಾ ನೋಡುತ್ತಿದ್ದಾರೆ. ಕೇಂದ್ರ ಕಾರಾಗೃಹ ಕನೆಕ್ಷನ್ ಇಟ್ಟುಕೊಂಡಿರುವುದು ತಿಳಿದು ಬಂದಿದೆ ಎಂದರು.

ಕೆಲವು ಕೃತ್ಯವೆಸಗುವ ಬಗ್ಗೆ ಮಾಹಿತಿ ಸಿಕ್ಕಿದೆ. ಪೊಲೀಸರ ತನಿಖೆ ಆಗಲಿ, ಆಮೇಲೆ NIA ತನಿಖೆ ಬಗ್ಗೆ ನೋಡೋಣ. ಸದ್ಯ ಬಂಧಿತರಿಂದ 7 ಕಂಟ್ರಿಮೇಡ್​ ಪಿಸ್ತೂಲ್, ವಾಕಿಟಾಕಿ, ಆಯುಧ ಸಿಕ್ಕಿದೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರು 7 ದಿನ ಸಿಸಿಬಿ ವಶಕ್ಕೆ: ರಾಜ್ಯದೆಲ್ಲೆಡೆ ಹೈ ಅಲರ್ಟ್

ಕೆಲವರು ಬೇಲ್ ಮೇಲೆ ಬಿಡುಗಡೆಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಕೆಲವರು ಕೊಲೆ, ದರೋಡೆ ಸೇರಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಯಾವ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂಬ ಬಗ್ಗೆ ತನಿಖೆ ತಿಳಿಯಬೇಕಿದೆ ಎಂದರು.

ಐವರು ಶಂಕಿತ ಉಗ್ರರು 7 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ

ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಇಂದು ಕೋರ್ಟ್​ಗೆ ಹಾಜರುಪಡಿಸಿದ್ದು, 15 ದಿನ ವಶಕ್ಕೆ ನೀಡುವಂತೆ ಕೋರ್ಟ್​ಗೆ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು. ಆದರೆ ಪಬ್ಲಿಕ್ ಪ್ರಾಸಿಕ್ಯೂಟರ್​ ಕೋರ್ಟ್​ಗೆ ಹಾಜರಾಗದ ಹಿನ್ನೆಲೆ ಸ್ವಲ್ಪ ಸಮಯದ ನಂತರ ಪಿಪಿ ಜೊತೆ ಹಾಜರುಪಡಿಸಲು ಸಿಸಿಬಿ ಪೊಲೀಸರಿಗೆ ಎನ್​ಐಎ ವಿಶೇಷ ನ್ಯಾಯಾಲಯ ಸೂಚಿಸಿತ್ತು.

ಇದನ್ನೂ ಓದಿ: Bengaluru ಐವರು ಶಂಕಿತ ಉಗ್ರರ ಬಂಧನ: ಪ್ರಕರಣವನ್ನು ಎನ್​ಐಎಗೆ ನೀಡುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಸದ್ಯ ಐವರು ಶಂಕಿತ ಉಗ್ರರು 7 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಬೆಂಗಳೂರಿನ ಎನ್​ಐಎ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ. ಶಂಕಿತ ಉಗ್ರರಾದ ಸಯ್ಯದ್ ಸುಹೇಲ್, ಉಮರ್, ಜುನೈದ್​, ಮುದಾಸಿರ್, ಜಾಹಿದ್​ 7 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.