ಸೋತು ಸುಣ್ಣವಾದವರು, ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕೂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ.

ಸೋತು ಸುಣ್ಣವಾದವರು, ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 19, 2023 | 9:56 PM

ಬೆಂಗಳೂರು: ತಿಂಗಳಲ್ಲೇ ಗದ್ದುಗೆಗಾಗಿ ಎಟಿಎಂ ಸರ್ಕಾರದ ಗುದ್ದಾಟ ಬೀದಿಗೆ ಬಂದಿದೆ. ಎಂ.ಬಿ.ಪಾಟೀಲ್​​​-ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿತ್ತು. ಸದ್ಯ ಇದೇ ವಿಚಾರವನ್ನು ಇಟ್ಟುಕೊಂಡು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ (Congress) ಘಟಕ ವ್ಯಂಗ್ಯವಾಡಿದೆ. ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕೂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಒಬ್ಬನೇ ಒಬ್ಬ ವ್ಯಕ್ತಿ ವಿಪಕ್ಷ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ? ನಾಯಕರೇ ಇಲ್ಲದ ಬಿಜೆಪಿಗೆ ವಿಪಕ್ಷ ನಾಯಕ ಸಿಗುವುದಾದರೂ ಎಲ್ಲಿಂದ ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ.

ಇದನ್ನೂ ಓದಿ: ಗೋ ಹತ್ಯೆ, ಮತಾಂತರ ಕಾಯ್ದೆ ವಾಪಾಸ್ ಹಿಂಪಡೆಯುವ ದುಸ್ಸಾಹಸ ಬೇಡ: ಪೇಜಾವರ ಶ್ರೀ

ಮುಂದಿನ 5 ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರೆ: ಸಚಿವ ಕೆ.ಎನ್‌.ರಾಜಣ್ಣ

ಇತ್ತೀಚೆಗೆ ದಾವಣಗೆರೆಯಲ್ಲಿ ಮಾತನಾಡಿದ್ದ ಸಚಿವ ಕೆ.ಎನ್‌.ರಾಜಣ್ಣ, ಸಿದ್ದರಾಮಯ್ಯ ಮುಂದಿನ 5 ವರ್ಷವೂ ಸಿಎಂ ಆಗಿ ಅವರೇ ಇರುತ್ತಾರೆ ಎಂದು ಹೇಳಿದ್ದರು. ಅಧಿಕಾರ ಹಂಚಿಕೆ ಬಗ್ಗೆ ಎಐಸಿಸಿ ನಾಯಕರು ಚರ್ಚೆ ಮಾಡುತ್ತಾರೆ. ರಾಜ್ಯದ ಜನರ ವಿಶ್ವಾಸ ಏನಿದೆಯೋ ನನ್ನದು ಸಹ ಅದೇ ವಿಶ್ವಾಸ. ಮುಖ್ಯಮಂತ್ರಿ ಆಗಿ ಬಡವರ ಕಣ್ಣೀರು ಹೊರೆಸುವ ನಂಬಿಕೆ ಇಟ್ಟಿದ್ದಾರೆ. ನಂಬಿಕೆಗೆ ಅನುಗುಣವಾಗಿ ಧ್ವನಿ ಇಲ್ಲದವರಿಗೆ ಧ್ವನಿ ನೀಡುತ್ತಾರೆ. ಇಂತಹವರು ಸಿಎಂ ಆಗಿ ಹೆಚ್ಚು ಕಾಲ ಇರಬೇಕೆನ್ನುವುದು ನಮ್ಮ ಆಸೆ ಎಂದು ಹೇಳಿದ್ದರು.

ಸಿದ್ದರಾಮಯ್ಯನವರೇ ಹೆಗ್ಗಣ ಬಿದ್ದಿರುವುದು ನಿಮ್ಮ ತಟ್ಟೆಯಲ್ಲಿ ಎಂದ ಸಚಿವ ಆರ್​ ಅಶೋಕ

ಅಧಿಕಾರ ಸಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಟೀಕೆಗೆ ಮಾಜಿ ಸಚಿವ ಆರ್​ ಅಶೋಕ ತಿರುಗೇಟು ನೀಡಿದ್ದು, ಕುರ್ಚಿಗಾಗಿ ಕಿತ್ತಾಡಿ ಎಂದು ನಾವು ಯಾರಿಗೂ ಹೇಳಿಲ್ಲ. ಸಿದ್ದರಾಮಯ್ಯನವರೇ ಹೆಗ್ಗಣ ಬಿದ್ದಿರುವುದು ನಿಮ್ಮ ತಟ್ಟೆಯಲ್ಲಿ. ನಿಮ್ಮ ಆಪ್ತರನ್ನು ಕರೆದು ಬುದ್ಧಿವಾದ ಹೇಳಿ ಎಂದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ; ಶುರುವಾಯ್ತು ರೆಸಾರ್ಟ್ ರಾಜಕಾರಣ

ಡಿ.ಕೆ.ಸುರೇಶ್ ಒಳ್ಳೆಯವರು, ಎಲ್ಲಾ ಕಡೆ ಕಣ್ಣೀರಿಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್​ ಈಗಾಗಲೇ ಗಡ್ಡ ಬಿಟ್ಟಿದ್ದಾರೆ, ತಲೆಕೂದಲು ಬಿಳಿಯಾಗಿದೆ. ಸಿದ್ದರಾಮಯ್ಯ ಟೀಮ್ ಡಿ.ಕೆ.ಶಿವಕುಮಾರ್​ರನ್ನು ಸನ್ಯಾಸಿ ಮಾಡಲು ಹೊರಟಿದೆ ಎಂದು ಹೇಳಿದ ಆರ್ ಅಶೋಕ, ಹೀಗೆಲ್ಲ ಆಗುತ್ತಿದೆ ಎಂದರೆ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ