Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ದಿಢೀರ್ 3 ಡಿಸಿಎಂ ಹುದ್ದೆ ಸೃಷ್ಟಿಗೆ ಬೇಡಿಕೆ ಹೆಚ್ಚುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಲೆಕ್ಕಾಚಾರವೇನು?

ಕಳೆದ ಎರಡ್ಮೂರು ದಿನದಿಂದ ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ನಡೆಯುತ್ತಿರುವ ಮೂರು ಡಿಸಿಎಂ ಕಾಳಗಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಹಾಗಿದ್ರೆ ಮೂವರು ಡಿಸಿಎಂ ಹುದ್ದೆಗೆ ಸಚಿವರ ಇಂಗಿತ ವ್ಯಕ್ತಪಡಿಸಿರುವ ಹಿಂದೆ ಪಕ್ಷದ ಹಿತವೋ ಅಥವಾ ಕಾಂಗ್ರೆಸ್ ಹಿರಿಯ ನಾಯಕರು ಸೇರಿ ಡಿಕೆ ಶಿವಕುಮಾರ್ ಕೈ ಕಟ್ಟಿ ಹಾಕುವ ತಂತ್ರವೋ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಅಷ್ಟಕ್ಕೂ ಕಾಂಗ್ರೆಸ್‌ನಲ್ಲಿ ದಿಢೀರ್ ಅಂತಾ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಗೆ ಬೇಡಿಕೆ ಹೆಚ್ಚುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಲೆಕ್ಕಾಚಾರವೇನು ಎನ್ನುವುದು ಈ ಕೆಳಗಿನಂತಿದೆ ನೋಡಿ.

ಕರ್ನಾಟಕದಲ್ಲಿ ದಿಢೀರ್ 3 ಡಿಸಿಎಂ ಹುದ್ದೆ ಸೃಷ್ಟಿಗೆ ಬೇಡಿಕೆ ಹೆಚ್ಚುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಲೆಕ್ಕಾಚಾರವೇನು?
ಸಿದ್ದರಾಮಯ್ಯ-ಡಿಕೆ ಶಿವಕುಮಾರ್
Follow us
Pramod Shastri G
| Updated By: ರಮೇಶ್ ಬಿ. ಜವಳಗೇರಾ

Updated on: Sep 18, 2023 | 8:20 PM

ಬೆಂಗಳೂರು, (ಸೆಪ್ಟೆಂಬರ್ 18): ಮೂರು ಸಮುದಾಯಕ್ಕೆ ಮೂರು ಉಪಮುಖ್ಯಮಂತ್ರಿ(three deputy cm) ಸೃಷ್ಟಿಸಬೇಕು.ಇದರಿಂದ ಲೋಕಸಭೆಯಲ್ಲೂ ನೆರವಾಗುತ್ತೆ. ಹೈಕಮಾಂಡ್​ಗೂ ಇದನ್ನ ಮನವರಿಕೆ ಮಾಡಿಕೊಡುವುದಾಗಿ ಸಚಿವ ಕೆ.ಎನ್​, ರಾಜಣ್ಣ ಹೇಳಿದ್ದು, ರಾಜ್ಯ ಕಾಂಗ್ರೆಸ್​ನಲ್ಲಿ(Congress) ಸಂಚಲನ ಮೂಡಿಸಿದೆ. ರಾಜಣ್ಣ ಹೇಳಿಕೆ ಬಳಿಕ ರಾಜ್ಯ ಕಾಂಗ್ರೆಸ್(Karnataka Congress)​ನಲ್ಲಿ ಡಿಸಿಎಂ ದಂಗಲ್ ಶುರುವಾಗಿತ್ತು. ಕೆಲವೊಬ್ಬರು ಮೂವರು ಡಿಸಿಎಂ ಬೇಕು ಅಂದ್ರೆ, ಇನ್ನು ಕೆಲವರು ಬೇಡ ಎಂದಿದ್ದಾರೆ. ಇದೀಗ ಖುದ್ದು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಸಿಎಂ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಇದಕ್ಕೆ ಮುಖ್ಯಮಂತ್ರಿಗಳೇ ಉತ್ತರ ಕೊಡಬೇಕು ಎಂದಿದ್ದಾರೆ. ಆದ್ರೆ, ಮೂವರು ಡಿಸಿಎಂ ಸೃಷ್ಟಿಸಬೇಕು ಎನ್ನುವ ಬೇಡಿಕೆ ಸಂಬಂಧ ಸಿಎಂ ಈಗಾಗಲೇ ಉತ್ತರ ನೀಡಿಬಿಟ್ಟಿದ್ದಾರೆ. ಹೈಕಮಾಂಡ್ ಒಪ್ಪುವುದಾದರೆ ನನ್ನದೇನು ಅಭ್ಯಂತರ ಇಲ್ಲ ಎನ್ನುವ ಮೂಲಕ ಹೆಚ್ಚುವರಿ ಡಿಸಿಎಂ ವಾದದ ಪರವಾಗಿ ಪರೋಕ್ಷವಾಗಿ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ಮತ್ತೊಮ್ಮೆ ತಮ್ಮ ರಾಜಕೀಯ ದಾಳ ಉರುಳಿಸಿದ್ದಾರೆ. ಇದರಿಂದ ಸದ್ಯಕ್ಕೆ ಕೈ ಪಾಳಯದಲ್ಲಿ ಡಿಸಿಎಂ ಗಲಾಟೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬದಲಾಗಿ ಈ ಕಿಚ್ಚು ಗಣೇಶ ಹಬ್ಬದ ಬಳಿಕ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಡಿಸಿಎಂ ಕೂಗಿನ ಹಿಂದಿನ ಮರ್ಮವೇನು?

ಕೆಪಿಸಿಸಿ ಸಾರಥಿಯೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ನಲ್ಲಿ ದಿನೇ ದಿನೇ ಗಟ್ಟಿಯಾಗುತ್ತಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿದ್ದಾರೆ. ಸಿಎಂಗೆ ಪರ್ಯಾಯವಾಗಿ ತಮ್ಮ ನಾಯಕತ್ವ ಮತ್ತು ವರ್ಚಸ್ಸು ಸ್ಥಾಪಿಸಲು ಡಿ.ಕೆ. ಶಿವಕುಮಾರ್ ಹೆಜ್ಜೆ ಇಟ್ಟಿದ್ದಾರೆ. ಆದರೆ ಈ ಬೆಳವಣಿಗೆ ಕಾಂಗ್ರೆಸ್ ಪಾಳಯದ ಕೆಲ ಹಿರಿಯ ನಾಯಕರಿಗೆ ಇಷ್ಟವಾಗಲಿಲ್ಲ. ಜತೆಗೆ ಮುಂದೊಂದು ದಿನ ಡಿಕೆ ಶಿವಕುಮಾರ್ ಸಿಎಂ ಆದರೆ ಇತರೆ ನಾಯಕರ ಅಸ್ತಿತ್ವಕ್ಕೂ ಪ್ರಶ್ನೆ ಮೂಡಲಿದೆ. ಹೀಗಾಗಿಯೇ ಹಾಲಿ ಡಿಸಿಎಂ ಜತೆ ಮೂವರು ಡಿಸಿಎಂ ಎಂಬ ದನಿ ಎದ್ದಿದೆ ಎನ್ನುವ ಚರ್ಚೆ ಶುರುವಾಗಿದೆ. ಆದರೆ ರಾಜಕೀಯ ಪ್ರತಿ ಪಟ್ಟುಗಳನ್ನ ಅರಿತಿರುವ ಡಿಕೆ ಶಿವಕುಮಾರ್, ಯಾವ ಸಮಯದಲ್ಲಿ ಯಾರಿಗೆ ಮತ್ತು ಎಲ್ಲಿ ಏಟು ಕೊಡಬೇಕು ಎನ್ನುವುದನ್ನ ಅರಿತಿದ್ದಾರೆ. ಇದೇ ಕಾರಣಕ್ಕೆ ನನ್ನದು ಒಂದೇ ಬಣ, ಅದು ಕಾಂಗ್ರೆಸ್ ಬಣ ಎನ್ನುವ ಮೂಲಕ ಬಣ ರಾಜಕೀಯ ಮಾಡುತ್ತಿರುವವರಿಗೆ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಮೂವರನ್ನು ಡಿಸಿಎಂ ಮಾಡುವ ಕೆಎನ್​ ರಾಜಣ್ಣ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿದೆ

ಇನ್ನು ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಎರಡನೇ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವಂತಿಲ್ಲ ಎಂಬ ಷರತ್ತು ವಿಧಿಸಿ ಸಿಎಂ ಆಗಲೇಬೇಕು ಎಂಬ ಪಟ್ಟಿನಿಂದ ಹಿಂದೆ ಸರಿದಿದ್ದನ್ನು ಇಲ್ಲಿ ಸ್ಮರಿಸಬಹುದು.

ಎದುರಾಳಿಗಳು ತಮ್ಮ ವಿರುದ್ಧ ದಾಳ ಉರುಳಿಸಿದ್ರೆ ಡಿಕೆ. ಶಿವಕುಮಾರ್ ಕೈ ಚೆಲ್ಲಿ ಕುರುವ ಮಾತೇ ಇಲ್ಲ. ಅತ್ತ ಇನ್ನಿತರ ನಾಯಕರು ಸಹ ಪಟ್ಟು ಬಿಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ ಒಳಗೆ ರಾಜಕೀಯದ ಸುಂಟರಗಾಳಿಯೊಂದು ಸದ್ದಿಲ್ಲದೇ ಸುರಳಿ ಸುತ್ತುತ್ತಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ