AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸ್ಯಾಂಟ್ರೋ ರವಿ ಅರೆಸ್ಟ್ ಆಗಿದ್ದಾನೆ, ನಾಳೆ ಸಿ ಟಿ ರವಿ ಅರೆಸ್ಟ್ ಆಗುತ್ತಾರೆ: ಎಂ ಲಕ್ಷ್ಮಣ ಅಚ್ಚರಿ ಹೇಳಿಕೆ

ಇಂದು ಸ್ಯಾಂಟ್ರೋ ರವಿ ಅರೆಸ್ಟ್ ಆಗಿದ್ದಾನೆ. ನಾಳೆ ಸಿ.ಟಿ ರವಿ ಅರೆಸ್ಟ್ ಆಗುತ್ತಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಇಂದು ಸ್ಯಾಂಟ್ರೋ ರವಿ ಅರೆಸ್ಟ್ ಆಗಿದ್ದಾನೆ, ನಾಳೆ ಸಿ ಟಿ ರವಿ ಅರೆಸ್ಟ್ ಆಗುತ್ತಾರೆ: ಎಂ ಲಕ್ಷ್ಮಣ ಅಚ್ಚರಿ ಹೇಳಿಕೆ
ಸಿ.ಟಿ ರವಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 15, 2023 | 3:16 PM

Share

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಸ್ಯಾಂಟ್ರೋ ರವಿ(Santro Ravi) ಕೊನೆಗೂ 11 ದಿನಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇನ್ನು ಈ ಬಗ್ಗೆ ಕಾಂಗ್ರೆಸ್ (Congress) ವಕ್ತಾರ ಎಂ ಲಕ್ಷ್ಮಣ ಪ್ರತಿಕ್ರಿಯಿಸಿದ್ದು, ಇಂದು ಸ್ಯಾಂಟ್ರೋ ರವಿ ಅರೆಸ್ಟ್ ಆಗಿದ್ದಾನೆ. ನಾಳೆ ಸಿ ಟಿ ರವಿ(CT Ravi) ಅರೆಸ್ಟ್ ಆಗುತ್ತಾರೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ 15) ಸುದ್ದಿಗಾರರೊಂದಿಗೆ ಮಾತನಾಡಿದ ಎಂ ಲಕ್ಷ್ಮಣ, ಸ್ಯಾಂಟ್ರೋ ರವಿಗೂ ಸಿಟಿ ರವಿಗೂ ಏನು ವ್ಯತ್ಯಾಸವಿಲ್ಲ. ಇಂದು ಸ್ಯಾಂಟ್ರೋ ರವಿ ಅರೆಸ್ಟ್ ಆಗಿದ್ದಾನೆ. ನಾಳೆ ಸಿ ಟಿ ರವಿ ಅರೆಸ್ಟ್ ಆಗುತ್ತಾರೆ. ನನ್ನ ಮೇಲೂ ಮಾನನಷ್ಟ ಮೊಕದ್ದಮೆ ಹಾಕಿದರೆ ಹಾಕಲಿ ನಾವೇನು ಹೆದರಿಕೊಳ್ಳುವುದಿಲ್ಲ ಎಂದರು.

ನ್ಯಾಯಾಲಯದಲ್ಲಿ ಆತನ ಆಸ್ತಿ ಎಷ್ಟಿದೆ ? ಏನು ಎಂಬುದು ಗೊತ್ತಾಗಲಿದೆ. ಬಿಜೆಪಿ ವಿರುದ್ದ ಮಾತನಾಡಿದರೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ ಎಂದಯ ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ಸಿ ಪಿ ಯೋಗೇಶ್ವರ್ ಆಡಿಯೋ ವೈರಲ್ ವಿಚಾರದ ಬಗ್ಗೆ ಪ್ರಕ್ರಿಯಿಸಿ, ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಜನಾದೇಶ ಬರಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ. ಹಳೇ ಮೈಸೂರು ಪ್ರಾಂತ್ಯದಲ್ಲಿ 20ಕ್ಕೂ ಹೆಚ್ಚು ಮಂದಿ ಸೇರಿಸಿಕೊಳ್ಳುತ್ತೇವೆ ಎಂದು ಆಡಿಯೋನಲ್ಲಿ ಹೇಳಿದ್ದಾರೆ. ಅಮಿತ್ ಶಾ ಅವರೇ ಇದಕ್ಕೆಲ್ಲ ರೂವಾರಿ ಹಾಗೂ ಆತ ಒಬ್ಬ ರೌಡಿ ಎಂದು ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಇಲ್ಲಿಯವರೆಗೂ ಬಿಜೆಪಿ ನಾಯಕರು ಯಾಕೆ ಸ್ಪಷ್ಟನೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.

ಅಮಿತ್ ಶಾ ತಿಹಾರ್ ಜೈಲಿನಲ್ಲಿದ್ದರು. ಸಕ್ರಿಯ ರಾಜಕಾರಣಿಯಾಗುವ ಮುನ್ನ ಆತ ರೌಡಿ ಶೀಟರ್ ಆಗಿದ್ದವರು ಎಂದು ಸಿಪಿ ಯೋಗೇಶ್ವರ್ ಅವರೇ ಹೇಳಿದ್ದಾರೆ. ಸಿ ಪಿ ಯೋಗೇಶ್ವರ್ ಸತ್ಯವನ್ನು ಹೇಳಿದ್ದಾರೆ. ಮುಂಚಿತವಾಗಿ ಅಪೇರೇಷನ್ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯ. ಚುನಾವಣಾ ಆಯೋಗ ಈ ಬಗ್ಗೆ ಗಮನವಹಿಸಬೇಕು. ಸುಮೋಟೋ ಕೇಸ್ ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಹಳೇ ಮೈಸೂರು ಭಾಗದಲ್ಲಿ 20ಮಂದಿ ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದೆ. ಈ ಪೈಕಿ ಮೈಸೂರಿನಲ್ಲಿ ಒಬ್ಬ ಹಾಗೂ ಕೋಲಾರದಲ್ಲಿ ಒಬ್ಬ ಕಾಂಗ್ರೆಸ್ ಮುಖಂಡನು ಸೇರುತ್ತಾನೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಮೈಸೂರು ಭಾಗದಲ್ಲಿ ಜೆಡಿಎಸ್ ಶಾಸಕ ಸಾರಾ ಮಹೇಶ್, ಅಶ್ವಿನ್ ಕುಮಾರ್ ಜೊತೆ 20 ಮಂದಿ ಸೋಲುತ್ತಾರೆ ಎಂದು ಹೇಳಿದ್ದಾರೆ. ಬಿಜೆಪಿ ಸರ್ವೆ ನಿಜಾಂಶವನ್ನು ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ ಎಂದು ಹೇಳಿದರು.

ಇ.ಡಿ ಮುಖಾಂತರ ಹೆದರಿಸಿ ಕೆಲವರನ್ನು ತಮ್ಮತ್ತ ಸೆಳೆಯುವಂತೆ ಬಿಜೆಪಿ ಪ್ಲಾನ್ ಮಾಡಿದೆ. ಆಪರೇಷನ್ ಗಾಗಿಯೇ 300 ಕೋಟಿ ರೂ ಅಮಿತ್ ಶಾ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಿಂದ 30 ಮಂದಿ ಶಾಸಕರು ಕಾಂಗ್ರೆಸ್ ಸೇರಲು ಅಪ್ಲಿಕೇಶನ್ ಹಾಕಿದ್ದಾರೆ. ಎರಡೂ ಪಕ್ಷದಿಂದ 30 ಮಂದಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ