ತುಮಕೂರು: ಜೆಡಿಎಸ್ ಉಚ್ಚಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ (JDS MLA S.R.Srinivas) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ (Resign) ನೀಡುವುದು ಖಚಿತ ಎಂದು ಹೇಳಿದ್ದಲ್ಲದೆ ಬೆಂಬಲಿಗರ ಸಮಾವೇಶವನ್ನೂ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ಆ ಮೂಲಕ ಶ್ರೀನಿವಾಸ್ ಅವರು ಜೆಡಿಎಸ್ ಪಕ್ಷದಿಂದ ಹೊರಬರುವುದು ಖಚಿತವಾಗಿದೆ. ಗುಬ್ಬಿ ಕ್ಷೇತ್ರದಲ್ಲಿ ಹೇಳಿಕೆ ನೀಡಿದ ಶಾಸಕರು, ಜನವರಿಯಲ್ಲಿ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ಕೊಡುತ್ತೇನೆ. ಇದಕ್ಕೂ ಮುನ್ನ ಡಿಸೆಂಬರ್ ತಿಂಗಳಿನಲ್ಲಿ ಕಾರ್ಯಕರ್ತರ ಸಮಾವೇಶ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.
ನಾನು ಬೇರೆ ಪಕ್ಷ ಸೇರಬೇಕೇ, ಸ್ವತಂತ್ರವಾಗಿ ಸ್ಪರ್ಧಿಸಬೇಕೇ ಎಂಬುದನ್ನು ನನ್ನ ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಮಾಡುತ್ತೇನೆ. ಇದಕ್ಕಾಗಿ ಡಿಸೆಂಬರ್ನಲ್ಲಿ ಕಾರ್ಯಕರ್ತರು ಮತ್ತು ಬೆಂಬಲಿಕರ ಸಮಾವೇಶವನ್ನು ನಡೆಸುತ್ತೇನೆ. ಈ ಸಮಾವೇಶದಲ್ಲಿ ಕಾರ್ಯಕರ್ತರು ಬಿಜೆಪಿ ಸೇರುವಂತೆ ಹೇಳಿದರೆ ಕೇಸರಿ ಪಕ್ಷಕ್ಕೆ ಸೇರುತ್ತೇನೆ, ಇಲ್ಲ ಕಾಂಗ್ರೆಸ್ ಪಕ್ಷಕ್ಕೆ ಹೋಗು ಎಂದು ಹೇಳಿದರೆ ಕೈ ಪಕ್ಷಕ್ಕೆ ಹೋಗುತ್ತೇನೆ ಎಂದರು.
ಇದನ್ನೂ ಓದಿ: ಬಿಜೆಪಿ ಸೇರಲು ಟಿಆರ್‌ಎಸ್ ಶಾಸಕರಿಗೆ ಹಣದ ಆಮಿಷ ಪ್ರಕರಣ: ಬಿ.ಎಲ್.ಸಂತೋಷ್‌ಗೆ ನೋಟಿಸ್
ಕರ್ನಾಟಕದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಜೊತೆ ಎಸ್.ಆರ್.ಶ್ರೀನಿವಾಸ್ ಅವರು ಕಾಣಿಸಿಕೊಂಡಿದ್ದರು. ಹೀಗಾಗಿ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರಯೇ ಎಂಬ ಅಂಶ ದಟ್ಟವಾಗಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಹಾಕುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಶ್ರೀನಿವಾಸ್ ಅವರ ಮುಂದಿನ ನಡೆ ಏನು ಎಂಬುದು ಕುತೂಹಲಕಾರಿಯಾಗಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:44 pm, Sat, 19 November 22