ಕಾಂಗ್ರೆಸ್​ ತೊರೆದಿದ್ದ ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್

| Updated By: ರಮೇಶ್ ಬಿ. ಜವಳಗೇರಾ

Updated on: Nov 02, 2022 | 8:53 PM

ಕಾಂಗ್ರೆಸ್ ಹಿರಿಯ ನಾಯಕ, ತುಮಕೂರು ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಕಾಂಗ್ರೆಸ್​ ತೊರೆದಿದ್ದ ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್
muddahanumegowda
Follow us on

ಬೆಂಗಳೂರು: ಈಗಾಗಲೇ ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದ ತುಮಕೂರು ಮಾಜಿ ಸಂಸದ ಮುದ್ದಹನುಮೇಗೌಡ ಕೊನೆಗೂ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ. ನಾಳೆ( ನವೆಂಬರ್ 03) ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.

ಸಿಎಂ ಬೊಮ್ಮಾಯಿ‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದು, 2024 ರ ಲೋಕಸಭಾ ಚುನಾವಣೆಗೆ ಮುದ್ದಹನುಮೇಗೌಡ ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಸೂಚನೆ: ವಲಸೆ ಹೋದವರಿಗೂ ಮುಕ್ತ ಆಹ್ವಾನ ಕೊಟ್ಟ ಡಿಕೆಶಿ

ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಹಾಗೂ ಕಾಂಗ್ರೆಸ್ ಮೈತ್ರಿಯಿಂದಾಗಿ ಮುದ್ದಹನುಮೇಗೌಡ ಅವರಿಗೆ ತುಮಕೂರು ಟಿಕೆಟ್ ಕೈತಪ್ಪಿತ್ತು. ಅಂದು ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರು ಸ್ಪರ್ಧಿಸಿ ಸೋಲುಕಂಡಿದ್ದರು.  ಬಳಿಕ ಮುದ್ದಹನುಮೇಗೌಡರಿಗೆ ಯಾವುದು ಹುದ್ದೆ ಇಲ್ಲದೇ ಅವರು ರಾಜಕೀಯದಿಂದ ತೆರೆಮರೆಗೆ ಸರಿದಿದ್ದರು. ಬಳಿಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದರು. ಆದ್ರೆ, ಕುಣಿಗಲ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಬಂಧಿ ಡಾ.ರಂಗನಾಥ್ ಹಾಲಿ ಶಾಸಕರು ಇರುವುದರಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ಭರವಸೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ಕಾಂಗ್ರೆಸ್ ತೊರೆದಿದ್ದರು.

ಅಲ್ಲದೇ ಬಿಜೆಪಿ ಅಥವಾ ಜೆಡಿಎಸ್​ ಸೇರ್ಪಡೆಯಾಗುತ್ತಾರೆ ಎನ್ನುವ ಚರ್ಚೆಗಳು ನಡೆದಿದ್ದವು. ಅಲ್ಲದೇ ಬಿಜೆಪಿ ಬಂದರೆ ಅವರಿಗೆ ಸ್ವಾಗತ ಎಂದು ತುಮಕೂರು ಮಾಜಿ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿದ್ದರು. ಇದೀಗ ಅಂತಿಮವಾಗಿ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆಯಾಗುದು ಖಚಿತವಾಗಿದೆ.

ತಮಕೂರು ಟಿಕೆಟ್ ಫೈನಲ್?

ಇನ್ನು ಮುಖ್ಯವಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಟಿಕೆಟ್ ಕನ್ಫರ್ಮ್ ಮಾಡಿಕೊಂಡು ಬಿಜೆಪಿ ಸೇರುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇನ್ನು ಈಗಿರುವ ತುಮಕೂರು ಬಿಜೆಪಿ ಹಾಲಿ ಸಂಸದ ಜಿ.ಎಸ್.ಬಸವರಾಜು ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಬಹಿರಂಗವಾಗಿಯೇ ಹೇಳಿದ್ದಾರೆ. ಇದರಿಂದ ರಾಜ್ಯ ಬಿಜೆಪಿ ನಾಯಕರು ಮುದ್ದಹನುಮೇಗೌಡ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬಸವರಾಜ್

ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅವರು ಇಂದು ಹೇಳಿದ್ದಾರೆ. ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ ಅವರು (ದೇವೇಗೌಡ) ಸ್ಪರ್ಧಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿಲ್ಲ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೆ ಎಂದು ಬಸವರಾಜ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Published On - 8:52 pm, Wed, 2 November 22