ಕೊನೆಗೂ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರ್ಪಡೆಗೆ ಸಿಕ್ತು ಗ್ರೀನ್ ಸಿಗ್ನಲ್

ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ಆಘಾತವಾಗಿದೆ. ತುಮಕೂರು ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್​ ಸೇರ್ಪಡೆ ಖಚಿತವಾಗಿದೆ. ಜಿಲ್ಲೆಯ ಕಾಂಗ್ರೆಸ್​ ನಾಯಕರೂ ಸಹ ಸೇರಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೀಗಾಗಿ ಮುದ್ದಹನುಮೇಗೌಡ ಅವರು​ ಮಾತೃ ಪಕ್ಷಕ್ಕೆ ವಾಪಸ್​ ಆಗುವುದು ಪಕ್ಕಾ ಆದಂತಾಗಿದೆ. ಹಾಗಾದ್ರೆ, ಸೇರ್ಪಡೆ ಯಾವಾಗ?

ಕೊನೆಗೂ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರ್ಪಡೆಗೆ ಸಿಕ್ತು ಗ್ರೀನ್ ಸಿಗ್ನಲ್
ಮುದ್ದಹನುಮೇಗೌಡ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 21, 2024 | 9:46 PM

ಬೆಂಗಳೂರು, (ಫೆಬ್ರವರಿ 21): ಮಾಜಿ ಸಂಸದ ಮುದ್ದಹನುಮೇಗೌಡ (muddahanumegowda) ಅವರನ್ನು ಕಾಂಗ್ರೆಸ್​​ಗೆ (Congress) ಸೇರಿಸಿಕೊಳ್ಳಲು ನಾಯಕರು ಗ್ರೀನ್​ ಸಿಗ್ನಲ್ ನೀಡಿದ್ದಾರೆ. ಬಿಜೆಪಿ ತೊರೆದು ವಾಪಸ್ ಮಾತೃ ಪಕ್ಷ ಕಾಂಗ್ರೆಸ್ ಸೇರ್ಪಡೆಗೆ ಮುದ್ದಹನುಮೇಗೌಡ ಹಲವು ದಿನಗಳಿಂದ ಕಸರತ್ತು ನಡೆಸಿದ್ದರು. ಆದ್ರೆ, ತುಮಕೂರು ಜಿಲ್ಲೆಯ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮುದ್ದಹನುಮೇಗೌಡ ಅವರ ಸೇರ್ಪಡೆಗೆ ಕಾಂಗ್ರೆಸ್​ ನಾಯಕರಲ್ಲೇ ಹಗ್ಗಜಗ್ಗಾಟ ನಡೆದಿದ್ದು, ಇದೀಗ ಅಂತಿಮವಾಗಿ ಮುದ್ದಹನುಮೇಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ. ಇದರಿಂದ ಮುದ್ದಹನುಮೇಗೌಡ ಅವರು ನಾಳೆ(ಫೆಬ್ರವರಿ 22) ಸಂಜೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar), ಸಿಎಂ ಸಿದ್ದರಾಮಯ್ಯ(Siddaramaiah), ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ‌ ಸಮ್ಮುಖದಲ್ಲಿ ಮುದ್ದಹನುಮೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಇತ್ತ ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಸುಳಿವು ನೀಡಿದ ಸಚಿವ, ಅತ್ತ ಖರ್ಗೆ ಭೇಟಿಯಾದ ಬಿಜೆಪಿ ನಾಯಕ

2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿಯಾಗಿದ್ದರಿಂದ ತುಮಕೂರು ಕ್ಷೇತ್ರ ಜೆಡಿಎಸ್​ ಪಾಲಾಗಿತ್ತು. ಮಾಜಿ ಪ್ರಧಾನಿ ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ ಅವರು ಕಣಕ್ಕಿಳಿದಿದ್ದರು. ಇದರಿಂದ ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡ ಅಸಮಾಧಾನಗೊಂಡು ಬಿಜೆಪಿ ಸೇರ್ಪಡೆಯಾಗಿದ್ದರು. ಆದ್ರೆ, 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಲ್ಲೂ ಟಿಕೆಟ್ ವಂಚಿತರಾಗಿದ್ದರು. ಹೀಗಾಗಿ ಈ ಬಾರಿ ತುಮಕೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್​ನತ್ತ ಮುಖಮಾಡಿದ್ದಾರೆ.

ಕೆಎನ್​ ರಾಜಣ್ಣ ಅವರು ಮುದ್ದಹನುಮೇಗೌಡ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಮುಂದಾಗಿದ್ದರು. ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಸಹ ಮನವೊಲಿಸಿದ್ದರು. ಆದ್ರೆ, ಟಿಬಿ ಜಯಚಂದ್ರ ಸೇರಿದಂತೆ ಇನ್ನು ಕೆಲ ತುಮಕೂರು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮುದ್ದಹನುಮೇಗೌಡ ಅವರು ಸಚಿವ ಪರಮೇಶ್ವರ್​ ಅವರ ದುಂಬಾಲು ಬಿದ್ದಿದ್ದರು. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು. ಇದೀಗ ಅಂತಿಮವಾಗಿ ಮುದ್ದಹನುಮೇಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ.

ಇನ್ನು ಮೂಲಗಳ ಪ್ರಕಾರ ತುಮಕೂರಿನಲ್ಲಿ ಕಾಂಗ್ರೆಸ್​ನಿಂದ ಮುದ್ದಹನುಮೇಗೌಡ ಅವರನ್ನೇ ಕಣಕ್ಕಿಳಿಸುವ ಬಗ್ಗೆಯೂ ಚರ್ಚೆಯಾಗಿದೆ. ಮತ್ತೊಂದೆಡೆ ದೆಹಲಿ ಪ್ರತಿನಿಧಿ ಟಿಬಿ ಜಯಚಂದ್ರ ಅವರ ಹೆಸರುಗಳು ಸಹ ಕೇಳಿಬರುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ