ಅತ್ತ ಜಗನಾಥ್ ಭವನದಲ್ಲಿ ವಿಜಯೇಂದ್ರ ಅಧಿಕಾರ ಸ್ವೀಕಾರ, ಇತ್ತ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ

|

Updated on: Nov 15, 2023 | 9:40 AM

ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (BY Vijayendra) ಅವರು ಬುಧವಾರ (ನವೆಂಬರ್‌ 15) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅತ್ತ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಯರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದರೆ, ಇತ್ತ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಂಡಿದೆ

ಅತ್ತ ಜಗನಾಥ್ ಭವನದಲ್ಲಿ ವಿಜಯೇಂದ್ರ ಅಧಿಕಾರ ಸ್ವೀಕಾರ,  ಇತ್ತ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ
Follow us on

ಬೆಂಗಳೂರು, (ನವೆಂಬರ್ 15): ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (BY Vijayendra) ಅವರು ಬುಧವಾರ (ನವೆಂಬರ್‌ 15) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಬಿ.ವೈ.ವಿಜಯೇಂದ್ರ ಅವರು ಪದಗ್ರಹಣ (Karnataka BJP President) ಮಾಡಲಿದ್ದು, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ (BJP Office) ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್​, ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಂಡಿದೆ.

ಹೌದು..ಇಂದು (ನವೆಂಬರ್ 15) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇತ್ತ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಇಬ್ಬರು ಮಾಜಿ‌ ಶಾಸಕರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ: Karnataka Breaking Kannada News Live: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಇಂದು ವಿಜಯೇಂದ್ರ ಪದಗ್ರಹಣ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಗಪಡೆಯಾಗಲು ಹಲವು ಮಾಜಿ ಶಾಸಕರು ಮಾತುಕತೆ ನಡೆಸಿದ್ದಾರೆ.‌ ಆದರೆ ಇಂದು (ಬುಧವಾರ) ಅಧಿಕೃತವಾಗಿ ಜೆಡಿಎಸ್​ನ ಮಾಜಿ ಶಾಸಕಾರದ ಆರ್. ಮಂಜುನಾಥ್ ಮತ್ತು ಗೌರಿ ಶಂಕರ್ ಕಾಂಗ್ರೆಸ್ ಸೇರುತ್ತಿದ್ದಾರೆ. ಮಂಜುನಾಥ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಾಸರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಇನ್ನು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ.  ಮತ್ತೊಂದೆಡೆ ಜೆಡಿಎಸ್​ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರಿಂದ ಅಸಮಧಾನಗೊಂಡಿರುವ ಈ ಇಬ್ಬರು ನಾಯಕರು ತಮ್ಮ ಅಪಾರ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

ಇನ್ನು ಬಿಜೆಪಿಯ ಕೆಲ ನಾಯಕರಿಗೂ ಸಹ ಕಾಂಗ್ರೆಸ್ ಗಾಳ ಹಾಕಿದೆ. ಅದರಲ್ಲೂ ಮುಖ್ಯವಾಗಿ ಹಾಲಿ ಶಾಸಕಾರದ ಎಸ್​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್​ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಇವರು ಮಾತ್ರವಲ್ಲದೇ ಇನ್ನೂ ಹಲವು ಮಾಜಿ ಶಾಸಕರಿಗೂ ಸಹ ಕಾಂಗ್ರೆಸ್ ಆಹ್ವಾನ ನೀಡಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ