AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸ್ಪರ್ಧೆಗೆ ಕೋಲಾರದಲ್ಲಿ ಎರಡು ಏಜೆನ್ಸಿಗಳಿಂದ ಸರ್ವೆ: ವರದಿ ಮಾಹಿತಿ ಬಿಚ್ಚಿಟ್ಟ MLC

ಸಿದ್ದರಾಮಯ್ಯ ಸ್ಪರ್ಧೆಗೆ ಕೋಲಾರದಲ್ಲಿ ಎರಡು ಏಜೆನ್ಸಿಗಳಿಂದ ಸರ್ವೆ ಮಾಡಿಸಲಾಗಿದ್ದು, ಸರ್ವೆಯ ವರದಿಯನ್ನು ಕಾಂಗ್ರೆಸ್​ ಎಂಎಲ್​​ಸಿ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ.

ಸಿದ್ದರಾಮಯ್ಯ ಸ್ಪರ್ಧೆಗೆ ಕೋಲಾರದಲ್ಲಿ ಎರಡು ಏಜೆನ್ಸಿಗಳಿಂದ ಸರ್ವೆ: ವರದಿ ಮಾಹಿತಿ ಬಿಚ್ಚಿಟ್ಟ MLC
ಸಿದ್ದರಾಮಯ್ಯ
TV9 Web
| Edited By: |

Updated on: Nov 11, 2022 | 8:29 PM

Share

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಗಾಗಿ (Karnataka Assembly Elections 2023) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (siddaramaiah) ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ. ಯಾವ ಕ್ಷೇತ್ರದಿಂದ ಅಖಾಡಕ್ಕಿಳಿಯಬೇಕೆಂದು ಫುಲ್ ಗೊಂದಲದಲ್ಲಿದ್ದಾರೆ. ಯಾಕಂದ್ರೆ ಇದು ಕೊನೆ ಚುನಾವಣೆ ಎಂದು ಹೇಳಿಕೊಂಡಿರುವ ಸಿದ್ದರಾಮಯ್ಯ, ಲಾಸ್ಟ್ ಇನ್ನೊಂದು ಸಲ ಮುಖ್ಯಮಂತ್ರಿ ಆಗಿ ಬಿಟ್ಟುಬಿಡೋಣ ಎನ್ನುವ ಆಸೆ ಇಟ್ಟುಕೊಂಡಿದ್ದಾರೆ. ಇದರಿಂದ ಸೇಫ್ ಇರುವ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಇನ್ನು ಕೋಲಾರದಲ್ಲಿ ಸ್ಪರ್ಧೆ ಮಾಡಬೇಕೆಂದು ಈಗಾಗಲೇ ಎರಡು ಏಜೆನ್ಸಿಗಳಿಂದ ಸರ್ವೆ ಮಾಡಿಸಲಾಗಿದೆ. ಸರ್ವೆ ವರದಿ ಬಗ್ಗೆ ಎಂ.ಎಲ್.ಸಿ ಅನಿಲ್ ಕುಮಾರ್ ಮಾಧ್ಯಮಗಳಗೆ ಮಾಹಿತಿ ನೀಡಿದ್ದಾರೆ.

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ: ಪೂರ್ವಭಾವಿ ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದ ಮುಖಂಡರು

ಕೋಲಾರದಲ್ಲಿ ಇಂದು(ನ.11) ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಲುವಾಗಿ, ಎರಡು ಖಾಸಗಿ ಏಜೆನ್ಸಿಗಳಿಂದ ಸರ್ವೆ ಮಾಡಿಸಲಾಗಿದೆ. ಸಿದ್ದರಾಮಯ್ಯ ಅವರು ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಮಾಡಿಸಿರುವಂತಹ ಎರಡು ಸರ್ವೆಯಲ್ಲಿ ಒಂದು 57% ಕೊಟ್ಟಿದ್ರೆ, ಇನ್ನೊಂದು 60% ನೀಡಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತುಂಬಾ ಸೇಫ್ ಎಂದು ವರದಿ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಅಲ್ಲದೆ ಅಕ್ಟೋಬರ್.2 ರಿಂದ 12 ನೇ ತಾರೀಖಿನವರೆಗೆ, ಸುಮಾರು 40 ಜನರನ್ನೊಳಗೊಂಡ ತಂಡ ಕ್ಷೇತ್ರಕ್ಕೆ ಬಂದು ಒಬ್ಬರು ಒಂದು ದಿನಕ್ಕೆ 125 ಜನರಂತೆ ಸರ್ವೆ ನಡೆಸಿ, ಸುಮಾರು 50 ಸಾವಿರ ಸ್ಯಾಂಪಲ್ಸ್ ಶೇಖರಣೆ ಮಾಡಿದ್ದು, ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲು ಪೂರಕವಾಗಿದೆ ಎಂದು ಹೇಳಲಾಗಿದೆ ಎಂದು ತಿಳಿಸಿದರು.

ಇನ್ನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದರೂ ಸಹ ಅವರು ಅವರದ್ದೇ ತಯಾರಿಯನ್ನು ಮಾಡಿಕೊಂಡಿದ್ದು, ಅಂತಿಮವಾಗಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುತ್ತಾರೆ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ