ಸಂಸದರ ಬಂಡಾಯದ ಭೀತಿಯಿಂದ ಲೋಕಸಭೆಗೆ ನೂತನ ಮುಖ್ಯ ಸಚೇತಕರನ್ನು ನೇಮಿಸಿದ ಉದ್ಧವ್‌ ಠಾಕ್ರೆ ಬಣ

ಪಕ್ಷದ ಹಿರಿಯ ನಾಯಕ ಸಂಜಯ್ ರಾವುತ್ ಅವರು ಬುಧವಾರ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದು, ಭಾವನಾ ಗಾವ್ಲಿ ಅವರ ಸ್ಥಾನಕ್ಕೆ ರಾಜನ್ ವಿಚಾರೆ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಸದರ ಬಂಡಾಯದ ಭೀತಿಯಿಂದ ಲೋಕಸಭೆಗೆ ನೂತನ ಮುಖ್ಯ ಸಚೇತಕರನ್ನು ನೇಮಿಸಿದ ಉದ್ಧವ್‌ ಠಾಕ್ರೆ ಬಣ
ಏಕನಾಥ್ ಶಿಂಧೆ- ಉದ್ಧವ್ ಠಾಕ್ರೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 06, 2022 | 8:43 PM

ದೆಹಲಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಲ್ಪಮತಕ್ಕೆ ಕುಸಿದಿರುವ ಶಿವಸೇನಾದ ಉದ್ಧವ್‌ ಠಾಕ್ರೆ (Uddhav Thackeray) ಬಣ, ಪಕ್ಷದ ಸಂಸದರ ಬಂಡಾಯದ ಭೀತಿಯಿಂದ ಲೋಕಸಭೆಗೆ (Lok Sabha) ನೂತನ ಮುಖ್ಯ ಸಚೇತಕರನ್ನು ನೇಮಿಸಿದೆ. ಪಕ್ಷದ ಹಿರಿಯ ನಾಯಕ ಸಂಜಯ್ ರಾವುತ್ ಅವರು ಬುಧವಾರ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದು, ಭಾವನಾ ಗಾವ್ಲಿ ಅವರ ಸ್ಥಾನಕ್ಕೆ ರಾಜನ್ ವಿಚಾರೆ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. ಲೋಕಸಭೆಯಲ್ಲಿ 19 ಮತ್ತು ರಾಜ್ಯಸಭೆಯಲ್ಲಿ ಮೂರು ಸದಸ್ಯರನ್ನು ಹೊಂದಿರುವ ಶಿವಸೇನಾಗೆ ಸಂಸದರ ಬಂಡಾಯ ದೊಡ್ಡ ನಷ್ಟವನ್ನುಂಟು ಮಾಡಿದೆ. ಕಳೆದ ತಿಂಗಳು ಏಕನಾಥ್ ಶಿಂಧೆ (Eknath Shinde) ಅವರ ಬಂಡಾಯದ ನಂತರ, ಉದ್ಧವ್ ಠಾಕ್ರೆ ಅವರು ತಮ್ಮ 55 ಶಾಸಕರ ಪೈಕಿ 40 ಶಾಸಕರನ್ನು ಕಳೆದುಕೊಂಡರು. ಇದರಿಂದಾಗಿ ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಳ್ಳಬೇಕಾಯಿತು.

ಕಳೆದ ವಾರ ಉದ್ಧವ್  ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಒಂದು ದಿನದ ನಂತರ, ಶಿಂಧೆ ಬಣ ಅಧಿಕೃತವಾಗಿ ಬಿಜೆಪಿಯೊಂದಿಗೆ ಕೈಜೋಡಿಸಿತು ಮತ್ತು ಸರ್ಕಾರ ರಚಿಸಲು ಹಕ್ಕು ಸಾಧಿಸಿತು. ಸೋಮವಾರ ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತ ಯಾಚನೆಯಲ್ಲಿ, 288 ಸದಸ್ಯರ ವಿಧಾನಸಭೆಯಲ್ಲಿ ಏಕನಾಥ್ ಶಿಂಧೆ ಪಾಳಯವು 164 ಮತಗಳನ್ನು ಪಡೆದು ಬಹುಮತ ಸಾಬೀತು ಮಾಡಿತು. ಹೊಸ ಮೈತ್ರಿಕೂಟವು ಈಗಾಗಲೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸ್ಪೀಕರ್ ಮತ್ತು ಮುಖ್ಯ ಸಚೇತಕರನ್ನು ಆಯ್ಕೆ ಮಾಡಿದೆ. ವಿಧಾನಸಭೆಯಲ್ಲಿ ವಿಶ್ವಾಸ ಮತದ ವೇಳೆ ವಿಪ್ ಧಿಕ್ಕರಿಸಿದ ಠಾಕ್ರೆ ತಂಡದ ಶಾಸಕರನ್ನು ಅನರ್ಹಗೊಳಿಸುವಂತೆಯೂ ಇವರು ಮನವಿ ಮಾಡಿದ್ದಾರೆ.

ಮೂರನೇ ಎರಡರಷ್ಟು ಬಹುಮತದ ಆಧಾರದ ಮೇಲೆ ತಮ್ಮ ಬಣವೇ ನಿಜವಾದ ಶಿವಸೇನಾ ಎಂದು ಶಿಂಧೆ ಹೇಳಿಕೊಂಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಮೊದಲು ಹಕ್ಕು ಮಂಡಿಸಿದ ಅವರು, ಉದ್ಧವ್ ಠಾಕ್ರೆ ಅವರು ಅಧಿಕಾರಕ್ಕೆ ಅಂಟಿಕೊಳ್ಳಲು ಪ್ರಯತ್ನಿಸುತ್ತಿರುವ “ಹತಾಶ ಅಲ್ಪಸಂಖ್ಯಾತರ” ನಾಯಕ ಎಂದು ಹೇಳಿದ್ದಾರೆ.

ಆದಾಗ್ಯೂ, ಶಾಸಕರ ದಂಗೆಯ ಹೊರತಾಗಿಯೂ  ಠಾಕ್ರೆ ಅವರಿಗೆ ಇನ್ನೂ ತಳಮಟ್ಟದ ಕಾರ್ಯಕರ್ತರು ಮತ್ತು ಜನರ ಬೆಂಬಲವಿದೆ ಎಂದು ಭಾವಿಸಲಾಗಿದೆ.

Published On - 8:36 pm, Wed, 6 July 22

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ