ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ಜಗದೀಶ್​ ಶೆಟ್ಟರ್​​ಗೆ ಅಮಿತ್​ ಶಾ ದೂರವಾಣಿ ಕರೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯಾಗಿತ್ತು. ಇದಾದ ನಂತರ ಶೆಟ್ಟರ್​​ ವಿರುದ್ಧ ಬಿಜೆಪಿ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರು ಕಿಡಿಕಾರುತ್ತಾ ಬಂದಿದ್ದರು. ಆದರೆ ಇದೀಗ ಬಿಜೆಪಿ ಹೈಕಮಾಂಡ್​ ನಾಯಕರು ಜಗದೀಶ್​ ಶೆಟ್ಟರ್​ ಅವರಿಗೆ ಕರೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ಜಗದೀಶ್​ ಶೆಟ್ಟರ್​​ಗೆ ಅಮಿತ್​ ಶಾ ದೂರವಾಣಿ ಕರೆ
ಅಮಿತ್​ ಶಾ (ಎಡಚಿತ್ರ) ಜಗದೀಶ್​ ಶೆಟ್ಟರ್​ (ಬಲಚಿತ್ರ)
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Aug 26, 2023 | 2:36 PM

ಹುಬ್ಬಳ್ಳಿ: ಕಾಂಗ್ರೆಸ್​​ನ (Congress) ಆಪರೇಷನ್​ ಹಸ್ತ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಬಿಜೆಪಿ (BJP) ಮತ್ತು ಜೆಡಿಎಸ್​ನ ಕೆಲ ನಾಯಕರು ಘರವಾಪಸಿ ಮಾಡುತ್ತಾರೆ ಎಂಬ ವಂದತಿ ಹರಡಿದೆ. ಈ ಮಧ್ಯೆ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಮತ್ತು ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​​ ಹೆಬ್ಬಾರ್​ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದ್ದು, ಬಿಜೆಪಿ ಪಾಳಯದಲ್ಲಿ ಕೋಲಾಹಲ ಎಬ್ಬಿಸಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಲಿಂಗಾಯತ ಮತಗಳೇ ಇದ್ದು, ಇಲ್ಲಿ ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರನ್ನು ಪಕ್ಷಕ್ಕೆ ಕರೆತರಲು ಕಾಂಗ್ರೆಸ್​​ ಹವಣಿಸುತ್ತಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಮುಂದಾಳತ್ವ ವಹಿಸುವ ಸಾಧ್ಯತೆಯೂ ಇದೆ.

ಕಳೆದ ವಿಧಾನಸಭೆಯಲ್ಲಿ ಟಿಕೆಟ್​ ಕೈ ತಪ್ಪಿದ್ದರಿಂದ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಜಗದೀಶ್​ ಶೆಟ್ಟರ್​ ಕಮಲ ನಾಯಕರ ವಿರುದ್ಧ ಸಮರಸಾರಿದ್ದಾರೆ. ಅಲ್ಲದೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಆಪ್ತ, ಮಾಜಿ ಶಾಸಕ ಎಸ್​​ಐ ಚಿಕ್ಕನಗೌಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಶೆಟ್ಟರ್​ ಗಾಳ ಹಾಕಿದ್ದು, ಇದು ಬಹುತೇಕ ಯಶಸ್ವಿಯಾಗಿದೆ. ಈ ನಡುವೆಯೇ ರಾಜಕೀಯ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಶೆಟ್ಟರ್​​ಗೆ ಕರೆ ಮಾಡಿದ್ದಾರೆ. ನಿನ್ನೆ (ಆ.25) ಸಂಜೆ ಅಮಿತ್​ ಶಾ ಕರೆ ಮಾಡಿದ್ದು, ಮನವೊಲಿಸಲು ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮಿತ್​ ಶಾ, ಜಗದೀಶ್​ ಶೆಟ್ಟರ್​ಗೆ ಕರೆ ಮಾಡಿ 10 ನಿಮಿಷ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶೆಟ್ಟರ್ ಆಪ್ತ ಮೂಲಗಳಿಂದ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್​

ಇನ್ನು ಏಳೆಂಟು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲ್ಲಿದ್ದು, ಇದಕ್ಕೂ ಮುನ್ನ ಪಕ್ಷ ಬಿಟ್ಟು ಹೋದ ನಾಯಕರ ಮನವೊಲಿಕೆಗೆ ಬಿಜೆಪಿ ಕೇಂದ್ರ ನಾಯಕರೇ ಮುಂದಾಗಿದ್ದಾರೆ. ಇತ್ತೀಚಿಗೆ ಸಂಸದೆ ಶೋಭಾ ಕರಂದ್ಲಾಜೆ ಕೂಡ ಜಗದೀಶ್​ ಶೆಟ್ಟರ್​ ಮತ್ತು ಶಾಸಕ ಲಕ್ಷ್ಮಣ ಸವದಿ ಅವರಿಗೆ ಪರೋಕ್ಷವಾಗಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು.

ಯಾರೇ ಪಕ್ಷ ಬಿಟ್ಟಿದ್ದರು ಅವರಿಗೆ ಪ್ರಧಾನಿ ಮೋದಿಗಾಗಿ ಸ್ವಾಗತವಿದೆ. ಪಕ್ಷ ಬಿಟ್ಟವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ. ನಮ್ಮ ದೇಶದ ನಾಯಕನನ್ನು ಇಂದು ಪ್ರಪಂಚ ಒಪ್ಪುತ್ತಿದೆ. ಅವರನ್ನು ಮತ್ತೆ ಪ್ರಧಾನಿ ಮಾಡಲು ಯಾರೇ ಪಾರ್ಟಿ ಬಿಟ್ಟಿದ್ದರೂ ವಾಪಸ್ ಬರಲು ವಿನಂತಿ ಮಾಡುತ್ತೇನೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:33 pm, Sat, 26 August 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?