ಶೋಷಿತರೇ ಟಾರ್ಗೆಟ್​, ಚಿತ್ರದುರ್ಗದಲ್ಲಿ 1 ಬಿರಿಯಾನಿ ಕೊಟ್ಟು ಮತಾಂತರ ಮಾಡುತ್ತಿದ್ದಾರೆ ಎಂದ ಕೇಂದ್ರ ಸಚಿವ ಎ ನಾರಾಯಣಸ್ವಾಮಿ

ಆಂಧ್ರ, ತೆಲಂಗಾಣದಲ್ಲಿ ಕ್ರಮವಾಗಿ ಶೇ.90, 30ರಷ್ಟು ಮತಾಂತರ ನಡೆಯುತ್ತಿದ್ದು, ಬಡತನವನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ಅದೇ ರೀತಿಯಾಗಿ ಚಿತ್ರದುರ್ಗದಲ್ಲಿ 1 ಬಿರಿಯಾನಿ ಕೊಟ್ಟು ಮತಾಂತರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೋಷಿತರೇ ಟಾರ್ಗೆಟ್​, ಚಿತ್ರದುರ್ಗದಲ್ಲಿ 1 ಬಿರಿಯಾನಿ ಕೊಟ್ಟು ಮತಾಂತರ ಮಾಡುತ್ತಿದ್ದಾರೆ ಎಂದ ಕೇಂದ್ರ ಸಚಿವ ಎ ನಾರಾಯಣಸ್ವಾಮಿ
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Updated on: Jun 19, 2023 | 4:20 PM

ಚಿತ್ರದುರ್ಗ: ನನ್ನ ಮಾದಿಗ ಸಮಾಜದ ಜನರ ಮತಾಂತರ ನಡೆಯುತ್ತಿದೆ. ಚಿತ್ರದುರ್ಗದಲ್ಲಿ 1 ಬಿರಿಯಾನಿ ಕೊಟ್ಟು ಮತಾಂತರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (A Narayanaswamy) ಹೇಳಿದ್ದಾರೆ. ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಆಂಧ್ರ ಪ್ರದೇಶದಲ್ಲಿ ಶೇ.90ರಷ್ಟು ಮತ್ತು ತೆಲಂಗಾಣದಲ್ಲಿ ಶೇ.30ರಷ್ಟು ಮತಾಂತರ ನಡೆಯುತ್ತಿದೆ. ಬಡತನವನ್ನು ಟಾರ್ಗೆಟ್ ಮಾಡಿ‌ ಮತಾಂತರ ನಡೆಯುತ್ತಿದೆ ಎಂದು ಹೇಳಿದರು.

ಮತಾಂತರದಿಂದ ನಮ್ಮ ಐಡೆಂಟಿಟಿ ಸಾಧ್ಯವಾಗುತ್ತಿಲ್ಲ. ಬಲವಂತದ ಮತಾಂತರ ತಡೆಗೆ ಕಾನೂನು ನಾವು ರೂಪಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ವಿರುದ್ಧ ಹೋಗುವುದಾದರೆ ಹೋಗಲಿ. ಏಕರೂಪ ನಾಗರಿಕ ಸಂಹಿತೆಯನ್ನು ಮುಸ್ಲಿಂರು ಸ್ವಾಗತಿಸಿದ್ದಾರೆ. ಸಂವಿಧಾನಕ್ಕೆ ಗೌರವ ಸಿಗುತ್ತದೆ, ಅಂಬೇಡ್ಕರ್ ಅಪೇಕ್ಷೆಯಾಗಿತ್ತು ಎಂದರು.

ಇದನ್ನೂ ಓದಿ: ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ; ಪ್ರತಾಪ್ ಸಿಂಹ ಹೇಳಿಕೆಗೆ ಹೀಗಿತ್ತು ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ

ಕಾಂಗ್ರೆಸ್ ಸಿದ್ಧಾಂತದ ಮೂಲಕ ಅಧಿಕಾರಕ್ಕೆ ಬಂದಿಲ್ಲ

ಕಾಂಗ್ರೆಸ್ ‘ಗ್ಯಾರಂಟಿ’ ಮೂಲಕ ಅಧಿಕಾರಕ್ಕೆ ಬಂದಿದೆ. ಸಿದ್ಧಾಂತದ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಮಾತು ಕೊಟ್ಟಂತೆ ರಾಜ್ಯದ ಜನರಿಗೆ ಅಕ್ಕಿ ನೀಡಬೇಕು. ಕೇಂದ್ರ ಅಕ್ಕಿ ಸ್ಟಾಕ್, ಉತ್ಪಾದನೆ ವರದಿ ಆಧರಿಸಿ ರಾಜ್ಯಗಳಿಗೆ ಅಕ್ಕಿ ನೀಡುತ್ತದೆ. ರಾಜ್ಯ ಸರ್ಕಾರದ ಬಳಿ ಯಾವ ರಿಪೋರ್ಟ್ ಇದೆಯೋ ಗೊತ್ತಿಲ್ಲ ಎಂದು ತಿಳಿಸಿದರು.

ಶಕ್ತಿ ಯೋಜನೆ ಬಗ್ಗೆ ವ್ಯಂಗ್ಯ

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಬಗ್ಗೆ ರೆಡ್ ಬಸ್ ಎಂದು ವ್ಯಂಗ್ಯವಾಡಿದ್ದಾರೆ. ಕೆಲವೆಡೆ ಮಕ್ಕಳು, ತಾಯಂದಿರು ನೆಲಕ್ಕೆ ಬಿದ್ದಿದ್ದಾರೆ. ಚಾಲಕ, ನಿರ್ವಾಹಕರ ಜತೆ ಮಹಿಳೆಯರು ಜಗಳವಾಡುತ್ತಿದ್ದಾರೆ. ನಿಯಮ ಮೀರಿ ಸಾರಿಗೆ ಬಸ್​ಗಳಲ್ಲಿ ಸಂಚಾರ ಮಾಡಲಾಗುತ್ತಿದೆ. ರಸ್ತೆಗಳ ಸ್ಥಿತಿ ಹೇಗಿದೆ, ಪುಣ್ಯ ಕ್ಷೇತ್ರಗಳ ವ್ಯವಸ್ಥೆ ಹೇಗಿದೆ ನೋಡಿಲ್ಲ.

ಇದನ್ನೂ ಓದಿ: ಧೈರ್ಯವಿದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ನಾನೆ ಅಂತ ಹೇಳಲಿ: ಪ್ರತಾಪ್​ ಸಿಂಹ

ಚಾಲಕ, ನಿರ್ವಾಹಕರಿಗೆ ಯಾವುದೇ ಭದ್ರತೆ ಇಲ್ಲ. ಸಾರಿಗೆ ಬಸ್​ಗಳ ಕಂಡಿಷನ್ಸ್ ಹೇಗಿದೆ ಪರಿಶೀಲಿಸಿಲ್ಲ. ಭವಿಷ್ಯದ ಗತಿ ಏನೆಂಬುದರ ಬಗ್ಗೆ ಚಿಂತನೆ ಮಾಡಬೇಕು. 75 ವರ್ಷ ದೇಶದಲ್ಲಿ ಆಡಳಿತ ನಡೆಸಿದರೂ ಬಡವರು ಬಡವರಾಗಿಯೇ ಉಳಿದಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us