ಫೆಬ್ರವರಿ 9, 10 ರಂದು 2 ದಿನ ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ
ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು ಮತ್ತು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರು, ಫೆಬ್ರವರಿ 04: ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು (Mysore) ಮತ್ತು ದಾವಣಗೆರೆಗೆ (Davangere) ಭೇಟಿ ನೀಡಲಿದ್ದಾರೆ. ಇದೆ ವೇಳೆ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಅಮಿತ್ ಶಾ ರಾಜ್ಯ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ.
ಬಿಜೆಪಿ ನಾಯಕರು ಈಗಾಗಲೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕಾರಿಣಿ ಸಭೆಗಳನ್ನು ನಡೆಸಿದ್ದಾರೆ. ಈ ಸಭೆಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ವಿಚಾರವಾಗಿ ನಾಯಕರು ಕಾರ್ಯಕರ್ತರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿಸ್ದಾರೆ. ಫೆಬ್ರವರಿ 9 ಮತ್ತು 10 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಅವರ ಮುಂದೆ ವರದಿ ಒಪ್ಪಿಸಲಿದ್ದಾರೆ.
ಅಮಿತ್ ಶಾ ಸಭೆಯಲ್ಲಿ ರಾಜ್ಯ ನಾಯಕರ ನಡುವಿನ ವೈಮನಸ್ಸು ಕೂಡ ಶಮನಗೊಳ್ಳುವ ಸಾಧ್ಯತೆಯೂ ಇದೆ. ಹಾಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗು ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ