ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಚಿವ ಹೆಚ್​ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸರಾದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಚಿವ ಹೆಚ್​ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ
Follow us
| Updated By: ವಿವೇಕ ಬಿರಾದಾರ

Updated on:Jun 15, 2024 | 1:54 PM

ಬೆಂಗಳೂರು, ಜೂನ್​ 15: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ (Channapatna) ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸರಾದ ಬಳಿಕ ಚನ್ನಪಟ್ಟಣ  ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಇಂದು (ಶನಿವಾರ ಜೂ.15) ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಅವರು. ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಬಂದ ಕುಮಾರಸ್ವಾಮಿ; ರಾಜ್ಯದ ಜನರಿಗೆ ಕೊಟ್ಟ ಭರವಸೆ ಏನು?

ಹೆಚ್​​​ಡಿ ಕುಮಾರಸ್ವಾಮಿ ಅವರು ತಮ್ಮ ಲೋಕಸಭಾ ಕ್ಷೇತ್ರ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಕುಮಾರಸ್ವಾಮಿ, ಸಂಸದರ ಕಚೇರಿ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿ ಉದ್ಘಾಟನೆಗೆ ಬರುತ್ತಿರುವ ಕುಮಾರಸ್ವಾಮಿ ಸ್ವಾಗತಕ್ಕೆ ನಿಡಘಟ್ಟ ಗ್ರಾಮದಿಂದ ಮಂಡ್ಯವರೆಗೂ ತಯಾರಿ ಮಾಡಿಕೊಳ್ಳಲಾಗಿದೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಅದ್ಧೂರಿ ಸ್ವಾಗತ ದೊರೆಯಲಿದೆ. ಮಂಡ್ಯ ಜಿಲ್ಲಾ ಗಡಿಯಿಂದ ಹೆಚ್​​ಡಿಕೆ ಅದ್ಧೂರಿ ಸ್ವಾಗತಕ್ಕೆ ಮಂಡ್ಯ ಜಿಲ್ಲಾ ಜೆಡಿಎಸ್ ಘಟಕ ಸಿದ್ಧತೆ ನಡೆಸಿದೆ.

ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ‌ 15,215 ಮತಗಳಿಂದ ಗೆದ್ದಿದ್ದರು. ಒಟ್ಟು 95,892 ಮತಗಳನ್ನು ಪಡೆದಿದ್ದರು. ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ 80,677 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಇನ್ನು, ಕಾಂಗ್ರೆಸ್​ ನ‌ ಗಂಗಾಧರ್ ಎಸ್ 15,344 ಮತ‌ಗಳನ್ನು ಪಡೆದಿದ್ದರು.

ಚನ್ನಪಟ್ಟಣ ಕ್ಷೇತ್ರ ಅಭ್ಯರ್ಥಿ ಯಾರು?  ​

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಹೆಚ್​ಡಿ ಕುಮಾರಸ್ವಾಮಿ​, ಸಂಸದರಾಗಿ ಆಯ್ಕೆಯಾದ ಮೇಲೆ ಒಂದೇ ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುಂದೆ ಮಾತನಾಡೋಣ. ಡಿಕೆ ಸುರೇಶ್ ದೊಡ್ಡವರು ಏನಾದರೂ ಮಾತನಾಡಿಕೊಳ್ಳಲಿ ಬಿಡಿ ಎಂದರು.

ಬಸವರಾಜ ಬೊಮ್ಮಾಯಿ ರಾಜಿನಾಮೆ

ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ.ಎರಡು ಸ್ಥಾನಗಳ ಪೈಕಿ ಒಂದಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಜನತೆಗೆ ನನ್ನ ಅಭಿನಂದನೆ. ನಿರಂತರವಾಗಿ ನಾಲ್ಕು ಬಾರಿ ಆಶೀರ್ವಾದ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಕೊಟ್ಟಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2008 ರಲ್ಲಿ ನಂಜುಂಡಪ್ಪ ವರದಿಯಲ್ಲಿ ಹಿಂದುಳಿದ ಪ್ರದೇಶ ಅಂತ ಆಗಿತ್ತು. ಆ ಹಣೆಪಟ್ಟಿಯಿಂದ ಹೊರ ಬರಲು ನಾನು ಕೆಲಸ ಮಾಡಿದ್ದೇನೆ. ಶಾಲೆ, ರಸ್ತೆ, ಕಾಲೇಜು, ಮೆಡಿಕಲ್ ಕಾಲೇಜು, ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಹಲವಾರು ಯೋಜನೆಗಳು ಪ್ರಗತಿಯಲ್ಲಿ ಇವೆ. ಆ ಯೋಜನೆಗಳನ್ನು ಪೂರ್ಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೂ ಮಾತನಾಡಿದ್ದೇನೆ. ಅವರು ಬೆಂಗಳೂರಿಗೆ ಬಂದ ಬಳಿಕ ಭೇಟಿ ಮಾಡುತ್ತೇನೆ ಎಂದರು.

ಈಗ ಸಂಸದನಾಗಿ ಕೆಲಸ ಮಾಡಲು ಮುಂದಾಗಿದ್ದೇನೆ. ಸಂಸತ್​​ನಲ್ಲಿ ಕರ್ನಾಟಕದ ವಿಚಾರವಾಗಿ ಪ್ರಸ್ತಾಪ ಮಾಡುತ್ತೇನೆ. ನೀರಾವರಿ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ. ಕರ್ನಾಟಕದ ಪರವಾಗಿ ಅತ್ಯಂತ ಪರಿಣಾಮಕಾರಿಯಾಗಿ ಮಾತನಾಡುತ್ತೇನೆ.ಕರ್ನಾಟಕದ ರಾಜಕಾರಣದಲ್ಲೂ ನಾನು ಸಕ್ರೀಯವಾಗಿ ಇರುತ್ತೇನೆ. ಅದಕ್ಕಾಗಿಯೇ ನಮ್ಮ ವರಿಷ್ಟರು ನನಗೆ ಕೆಲವು ಜವಾಬ್ದಾರಿ ಕೊಟ್ಟಿದ್ದಾರೆ. ಕೇಂದ್ರದ ಅನುದಾನ ಪಡೆಯಲು ಒಂದು ರೀತಿ ನೀತಿ ಇದೆ. ಅದರ ಮೂಲಕ ರಾಜ್ಯ ಸರ್ಕಾರ ಪ್ರಪೋಸಲ್ ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಹಿಂದಿನ ಒಂದಿಷ್ಟು ಅನುಭವ ನನಗೆ ಇದೆ. ಅದನ್ನು ಕೇಂದ್ರದಲ್ಲಿ ಚರ್ಚೆ ಮಾಡಲು ಬಳಸಿಕೊಳ್ಳುತ್ತೇವೆ. ಘೋಷಿತ ಐದು ಸಾವಿರ ಕೋಟಿ ಹಣ ಪಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:12 pm, Sat, 15 June 24

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು