Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪುಢಾರಿಗಳು ನನ್ನನ್ನು ಹೆದರಿಸಿ, ಬೆದರಿಸುವ ಕೆಲಸ ಮಾಡುತ್ತಿದ್ದಾರೆ: ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಕಾಂಗ್ರೆಸ್​​ನ ಪುಡಾರಿಗಳು ನನಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ಹೆಚ್​ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗಣಿಗಾರಿಕೆ ಅಕ್ರಮ ಆರೋಪ ಮಾಡಿದ್ದಾರೆ. ಹಾಗೇ, ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ.

ಕಾಂಗ್ರೆಸ್ ಪುಢಾರಿಗಳು ನನ್ನನ್ನು ಹೆದರಿಸಿ, ಬೆದರಿಸುವ ಕೆಲಸ ಮಾಡುತ್ತಿದ್ದಾರೆ: ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on:Apr 12, 2025 | 6:28 PM

ಬೆಂಗಳೂರು, ಏಪ್ರಿಲ್​ 12: ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ ಎಂಬುದು ನಿಜ. ಆದರೆ ಕೆಲವರು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ದನಿಯನ್ನು ಅಡಗಿಸುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ. ಹೆದರುವ ವ್ಯಕ್ತಿಯೂ ನಾನಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಗುಡುಗಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಪುಢಾರಿಗಳು ನನ್ನನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ನಾನು ಹೆದರುವ ವ್ಯಕ್ತಿ ಅಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡಿ ಲಾರಿಯಲ್ಲಿ ದಾಖಲೆಗಳನ್ನು ತಂದು ಕೊಡುತ್ತಾರಂತೆ. ತಂದು ಕೊಡಲಿ, ನಾನೂ ನೋಡುತ್ತೇನೆ. ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಕಾಂಗ್ರೆಸ್ ಪುಡಾರಿಗಳು ಎನ್ನುವುದು ನನಗೆ ಗೊತ್ತಿದೆ. ನನ್ನಲ್ಲಿರುವ ದಾಖಲೆಗಳನ್ನು ಬಿಚ್ಚಿಟ್ಟರೆ ಜನರೇ ಇವರನ್ನು ಓಡಿಸುತ್ತಾರೆ ಎಂದು ಕೇಂದ್ರ ಸಚಿವರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ
Image
ಎಚ್ಡಿಕೆಗೆ ಸುಪ್ರೀಂ ತಾತ್ಕಾಲಿಕ ರಿಲೀಫ್​: ಹೈಕೋರ್ಟ್‌ಗೆ ಮೇಲ್ಮನವಿಗೆ ಅವಕಾಶ
Image
ಭೂ ಒತ್ತುವರಿ ಆರೋಪ: ನೋಟಿಸ್‌ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಎಚ್​ಡಿಕೆ
Image
ಕೇತಗಾನಹಳ್ಳಿ ಭೂ ಒತ್ತುವರಿ: ಕುಮಾರಸ್ವಾಮಿ ಮುಂದಿನ ಪ್ಲಾನ್ ಹೀಗಿದೆಯಂತೆ!
Image
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ

ಕಾಂಗ್ರೆಸ್​ನವರು ನನಗೆ ಕಿರುಕುಳ ನೀಡುತ್ತಿದ್ದಾರೆ

ಟನ್ ಗಟ್ಟಲೆ ದಾಖಲೆ ಇದೆ ಅಂತ ಹೇಳಿದ್ದೆ, ಅದೇನು ಸುಳ್ಳಲ್ಲ. ಅಕ್ಷರಶಃ ಸತ್ಯ. ಹಿಂದೆ ಅಧಿಕಾರದಲ್ಲಿದ್ದಾಗ ನನ್ನ ಧ್ವನಿ ಅಡಗಿಸುವ ಕೆಲಸ ಮಾಡಿದ್ದರು. ನನ್ನ ತೊಡವಿಕೊಂಡರೆ ಅವರಿಗೆ ಕಷ್ಟ. ನಾನು ಯಾವುದೇ ಕಾನೂನು ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ನ್ಯಾಯ, ಕೋರ್ಟ್ ಇದೆ ಎಂದು ಹೋರಾಟ ಮಾಡುತ್ತಿದ್ದೇನೆ. ನನ್ನಲ್ಲಿ ಅಧಿಕಾರ ಇದ್ದಾಗಲೂ ನಾನು ನನ್ನ ಕೆಲಸ ಮಾಡಿಕೊಳ್ಳಲಿಲ್ಲ. ಈಗ ಕೇಂದ್ರ ಸಚಿವನಾಗಿದ್ದಾಗಲೂ ಕಾಂಗ್ರೆಸ್​ನವರು ನನಗೆ ಕಿರುಕುಳ ನೀಡುತ್ತಿದ್ದಾರೆ. ಅದಕ್ಕೆ ಹೆದರಲ್ಲ ನಾನು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಮೇಲೆ ಗಣಿ ಆರೋಪ ಬಂದಿದೆ

ನನ್ನ ಮೇಲೆ ಗಣಿ ಗುತ್ತಿಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಅವರು, ಈಗ ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮದ ಬಗ್ಗೆ ಮಾತನಾಡಲಿ. ತಮ್ಮ ವಿರುದ್ಧ ಬಂದಿರುವ ಆರೋಪಕ್ಕೆ ಅವರು ಏನು ಹೇಳುತ್ತಾರೆ? ರಾಮಮೂರ್ತಿ ಗೌಡ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆಗೆ ಪ್ರಾಸಿಕ್ಯೂಷನ್ ಕೊಡಿ ಅಂತ ರಾಜ್ಯಪಾಲರ ಕೇಳಿದ್ದಾರೆ.

ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಸಿಎಂ ಆಗಿದ್ದ ಸಂದರ್ಭದಲ್ಲಿ ಗಣಿ ಗುತ್ತಿಗೆ ನವೀಕರಣಕ್ಕೆ ₹500 ಕೋಟಿ ಕಿಕ್‌ಬ್ಯಾಕ್‌ ಪಡೆದಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಗಣಿ ಗುತ್ತಿಗೆ ನವೀಕರಣದಿಂದ ಸರಕಾರದ ಬೊಕ್ಕಸಕ್ಕೆ 5,000 ಕೋಟಿ ರೂ. ನಷ್ಟ ಉಂಟು ಮಾಡಿರುವ ಗಂಭೀರ ಆಪಾದನೆಯನ್ನು ಸಿದ್ದರಾಮಯ್ಯ ಎದುರಿಸುತ್ತಿದ್ದಾರೆ. ವಿಚಾರಣೆಗೆ ಅನುಮತಿ ನೀಡುವಂತೆ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆನಪ್ಪ ಉತ್ತರ ಕೊಡುತ್ತೀರಿ ಎಂದು ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಅಲ್ಲಿ ನಾನು ಅಕ್ರಮವನ್ನೇ ಮಾಡಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಒಂದಿಚೂ ಮಣ್ಣು ಎತ್ತಿಲ್ಲ ಅಂತ ಹೇಳಿದ್ದಾರೆ. ಅವರು ಅಕ್ರಮ ಮಾಡಿದ್ದಾರೋ ಸಕ್ರಮ ಮಾಡಿದ್ದಾರೋ ಎನ್ನುವುದು ನನಗೆ ಗೊತ್ತಿದೆ. ಅದರ ಬಗ್ಗೆ ದಾಖಲೆಗಳೂ ನನ್ನಲ್ಲಿ ಇವೆ. ಮುಂದೆ ಅವರೆಲ್ಲವೂ ಮಾತನಾಡುತ್ತವೆ ಎಂದು ಕೇಂದ್ರ ಸಚಿವರು ಮಾರ್ಮಿಕವಾಗಿ ಹೇಳಿದರು. ಈ ಮಹಾನುಭಾವರು ನನ್ನ ಬಗ್ಗೆ ಗಣಿ ಗುತ್ತಿಗೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಅನುಮತಿ ನೀಡುವುದು ಇರಲಿ, ಅಲ್ಲಿ ಚನಿಕೆಯಷ್ಟು ಮಣ್ಣನ್ನೇ ಅವರು ಎತ್ತಿಲ್ಲ. ಅವರಿಗೆ ಆ ಗಣಿ ಮಂಜೂರಾಗಿಯೂ ಇಲ್ಲ. ರಾಜ್ಯದ ಬೊಕ್ಕಸಕ್ಕೆ ನಯಾಪೈಸೆ ನಷ್ಟ ಆಗಿಲ್ಲ. ಹಾಗಿದ್ದ ಮೇಲೆ ನನ್ನ ವಿರುದ್ಧ ವಿಚಾರಣೆ ಯಾಕೆ ನಡೆಯುತ್ತಿದೆ? ಯಾಕೆ ಆರೋಪ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ನನ್ನ ಬಾಯಿ ಮುಚ್ಚಿಸೋ ಕೆಲಸ ಮಾಡ್ತಿದ್ದಾರೆ ಇವರು. ಇವರ ಜನ್ಮದಲ್ಲಿ ನನ್ನನ್ನು ಹೆದರಿಸುವ ಶಕ್ತಿ ಇಲ್ಲ. ಎರಡು ಸಲ ಸಿಎಂ ಆಗಿದ್ದೆ. ನಾನೇನಾದ್ರೂ ಅಕ್ರಮ ಮಾಡಿದ್ದಿದ್ದರೆ ಐದೇ ನಿಮಿಷದಲ್ಲಿ ಸರಿ ಮಾಡಿಕೊಳ್ಳಲು ಆಗುತ್ತಿರಲಿಲ್ಲವೇ? ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ ಎಂದು ತಿರುಗೇಟು ಕೊಟ್ಟರು ಸಿಎಂ.

ನಮ್ಮ ಪಕ್ಷದ ಕಾರ್ಯಕರ್ತರು ಎದೆಗುಂದಬೇಕಿಲ್ಲ:

ನಮ್ಮ ಪಕ್ಷ ಬಲವಾಗಿದೆ. ಕಾರ್ಯಕರ್ತರು ಹೆದರಬೇಕಿಲ್ಲ. ನಾವು ಮುಂದೆ ಅಧಿಕಾರಕ್ಕೆ ಬರುತ್ತೇವೆ. ಈ ಸರ್ಕಾರ, ಇವರ ಮಂತ್ರಿಗಳು ಬೆಂಗಳೂರು ನಗರದಲ್ಲಿ ಏನೆಲ್ಲಾ ಅಕ್ರಮ ಮಾಡ್ತಿದ್ದಾರೆ ಎಂದು ನೋಡಿದ್ದೇವೆ. ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಹಲವಾರು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ. ಸರ್ಕಾರ ಮಾತ್ರ ರೈತರ ನೆರವಿಗೆ ಧಾವಿಸಿದೆ ಪ್ರತಿಪಕ್ಷಗಳನ್ನು ಹತ್ತಿಕ್ಕುವ ರಾಜಕೀಯ ಮಾಡುತ್ತಿದೆ. ನಾವು ಈ ಸರ್ಕಾರದ ವಿರುದ್ಧ ಹೋರಾಟ ನಡೆಸೋಣ ಎಂದು ಕೇಂದ್ರ ಸಚಿವರು ಕರೆ ನೀಡಿದರು.

ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಹೋರಾಟ ಆರಂಭಿಸಿದ್ದೀರಿ. ಸಾಕಪ್ಪ ಸಾಕು ಕಾಂಗ್ರೆಸ್ ಸಾಕು ಈ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದೀರಿ. ಇದೊಂದು ಒಳ್ಳೆಯ ಹೋರಾಟ. ಪ್ರತೀ ಇಲಾಖೆಯಲ್ಲಿಯು ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದಕ್ಕೆ ಮೂಲ ಪುರುಷರು ನಿಮ್ಮ ಮುಖ್ಯಮಂತ್ರಿಗಳು ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.

ಇದನ್ನೂ ಓದಿ: ನಮ್ಮ ಹೋರಾಟದ ವಿಷಯ ಕೇಳಿ ಸರ್ಕಾರಕ್ಕೆ ತಳಮಳ ಶುರುವಾಗಿದೆ: ನಿಖಿಲ್ ಕುಮಾರಸ್ವಾಮಿ

ಕಾರ್ಯಕರ್ತರಲ್ಲಿ ನಾನು ಮನವಿ ಮಾಡುವುದು ಇಷ್ಟೇ. ಕೇಂದ್ರದಲ್ಲಿ ನಾನು ಮಂತ್ರಿ ಆಗಿರಬಹುದು. ನಿಮ್ಮ ಜತೆ ನಾನು ಬಂದು ಪಕ್ಷ ಸಂಘಟನೆ ಮಾಡುತ್ತೇನೆ. ಹೊಸ ಬದಲಾವಣೆ ತರಲು ನಾವು ಜವಾಬ್ದಾರಿ ವಹಿಸಿಕೊಳ್ಳಬೇಕಿದೆ. ನಮ್ಮ ರಾಜ್ಯ ಸಂಪತ್ಬರಿತ ರಾಜ್ಯವಾಗಿತ್ತು. ಅದನ್ನ ಲೂಟಿ ಮಾಡುತ್ತಿದ್ದಾರೆ ಎಂದು ಅವರು ನೇರ ಆರೋಪ ಮಾಡಿದರು.

ಇದು ಅತ್ಯಂತ ಕೆಟ್ಟ ಸರಕಾರ

ಇನ್ನೆರಡು ತಿಂಗಳಲ್ಲಿ ಈ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಲಿದೆ. ಕರ್ನಾಟಕದಲ್ಲಿ.ಇಂತ ಕೆಟ್ಟ ಸರ್ಕಾರ ಎಂದೂ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ. ನಮ್ಮ ಪಕ್ಷದ 16 ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇಂಥ ಪಕ್ಷವನ್ನು ಸರ್ವನಾಶ ಮಾಡಲು ಸಂಚು ಮಾಡಿದ್ದರು. ಆ ಸಂಚನ್ನು ವಿಫಲ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ.

ಬೆಲೆ ಏರಿಕೆಗೆ ಒಂದು ಮಿತಿ ಬೇಡವೇ? ದರ ಏರಿಕೆ ಎಂದರೆ ಸುಲಿಗೆ. ಕೆಂಪೇಗೌಡರು ದೂರದೃಷ್ಟಿಯಿಂದ ಕಟ್ಟಿದ್ದ ಈ ನಗರವನ್ನು ಸುಲಿಗೆಗೆ ಕೇಂದ್ರ ಸ್ಥಾನ ಮಾಡಿಕೊಂಡಿದ್ದಾರೆ. ದೇವರೇ ಬಂದರೂ ಈ ನಗರವನ್ನು ಸರಿಮಾಡಲು ಆಗಲ್ಲ ಎಂದು ಸ್ವತಃ ಡಿಸಿಎಂ ಅವರೇ ಹೇಳಿದ್ದಾರೆ. ಗ್ಯಾರಂಟಿ ಹೆಸರು ಹೇಳಿಕೊಂಡು ಬಂದ ಇವರು, ಈಗ ಜನರನ್ನು ಕಿತ್ತು ತಿನ್ನುತ್ತಿದ್ದಾರೆ. ನುಡಿದಂತೆ ನಡೆದಿದ್ದೇವೆ ಅಂತಾರೆ, ಹಾಗೆಂದರೆ ಜನರನ್ನು ಕಿತ್ತು ತಿನ್ನುವುದಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೈತ್ರಿ ಸರ್ಕಾರದ ಅವಧಿಯಲ್ಲಿ ಸಾಲಮನ್ನಾ ಮಾಡಿದೆ. ನಾನು ಜನರ ಮೇಲೆ ತೆರಿಗೆ ಹಾಕಲಿಲ್ಲ. ಗ್ಯಾರಂಟಿ ಹಣವನ್ನು ಉಪ ಚುನಾವಣೆ ಬಂದಾಗ ಕೊಟ್ಟರು. ಈಗ ಪ್ರತಿ ತಿಂಗಳು ಆ ಹಣ ಬರುತ್ತಿಲ್ಲ. ಪುಕ್ಕಟೆ ವಿದ್ಯುತ್ ಎಂದರು. ಮತ್ತೊಂದು ಕಡೆ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ರೈತರು TC ಹಾಕಬೇಕಾದ್ರೆ, ಎರಡು ಲಕ್ಷ ಕೊಡಬೇಕಿದೆ. ಅಧಿಕಾರಿಗಳು ಈ ಜಾಗಕ್ಕೆ ಬರಲು ಹಣ ಕೊಟ್ಟಿದ್ದೇವೆ, ನಮಗೆ ಕೊಡದಿದ್ದರೆ ಕೆಲಸ ಮಾಡಲ್ಲ ಅಂತಿದ್ದಾರೆ. ಕೆಂಪೇಗೌಡರ ನಗರವನ್ನು ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ಸರ್ಕಾರ ಬಂದ ಬಳಿಕ, ಎರಡು ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದೇ ಸರ್ಕಾರ ಮುಂದುವರಿದರೆ ರಾಜ್ಯದ ಸಾಲ ₹10 ಲಕ್ಷ ಕೋಟಿ ಆಗುತ್ತದೆ. ಪ್ರತೀ ದಿನ ಬೆಲೆ ಏರಿಕೆ ಮಾಡ್ತಿದ್ದೀರಿ. ಜನರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರದ ಮುಂದೆ ಹೋಗಿ ಭಿಕ್ಷೆ ಬೇಡಲಿಲ್ಲ. ನೀವು ಕೊಟ್ಟ ತೆರಿಗೆ ಹಣವನ್ನೇ ಬಳಸಿದೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Sat, 12 April 25

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ