ಸಾವರ್ಕರ್ ಫೋಟೋ ವಿವಾದ: ಸ್ಪೀಕರ್ ಯುಟಿ ಖಾದರ್​ ನಿಲುವಿಗೆ ಪ್ರಲ್ಹಾದ್​ ಜೋಶಿ ಅಭಿನಂದನೆ

Veer Savarkar Photo Row: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ನಡೆಯುತ್ತಿರುವ ಮಧ್ಯೆಯೇ ವೀರ ಸಾವರ್ಕರ್ ಫೋಟೋ ಬಗ್ಗೆಅಲ್ಲಲ್ಲಿ ಚರ್ಚೆಗಳು ನಡೆದಿದೆ. ಆದ್ರೆ, ಸ್ಪೀಕರ್ ಯುಟಿ ಖಾದರ್ ಮಧ್ಯೆ ಪ್ರವೇಶಿಸಿ ರಾಜಕೀಯ ಕಿತ್ತಾಟಕ್ಕೆ ಬ್ರೇಕ್​ ಹಾಕಿದ್ದಾರೆ. ಸಾರ್ವಕರ್ ಫೋಟೋ ಬಗ್ಗೆ ಇದ್ದ ಗೊಂದಲ ನಿವಾರಿಸಿದ ಖಾದರ್ ಅವರ ನಿಲುವಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅಭಿನಂದನೆ ತಿಳಿಸಿದ್ದಾರೆ.

ಸಾವರ್ಕರ್ ಫೋಟೋ ವಿವಾದ: ಸ್ಪೀಕರ್ ಯುಟಿ ಖಾದರ್​ ನಿಲುವಿಗೆ ಪ್ರಲ್ಹಾದ್​ ಜೋಶಿ ಅಭಿನಂದನೆ
ಪ್ರಲ್ಹಾದ್ ಜೋಶಿ, ಯುಟಿ ಖಾದರ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ರಮೇಶ್ ಬಿ. ಜವಳಗೇರಾ

Updated on:Dec 10, 2023 | 1:11 PM

ಧಾರವಾಡ, (ಡಿಸೆಂಬರ್ 10): ಬೆಳಗಾವಿಯ ಸುವರ್ಣ ವಿಧಾನಸೌಧದ ಸಾವರಕರ್ ಫೋಟೋ ವಿವಾದ (veer savarkar Photo_ ವಿಚಾರದಲ್ಲಿ ಸ್ಪೀಕರ್ ಯುಟಿ ಖಾದರ್‌ (Speaker UT Khader) ತೆಗೆದುಕೊಂಡ ನಿಲುವಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ(pralhad joshi ಅಭಿನಂದನೆ ಸಲ್ಲಿಸಿದ್ದಾರೆ. ಇಂದು (ಭಾನುವಾರ) ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಜೋಶಿ, ಸಾವರ್ಕರ್ ಫೋಟೋ ವಿಷಯದಲ್ಲಿ ವಿಧಾನಸಭೆ ಸ್ಪೀಕರ್ ನಿಲುವಿಗೆ ಅಭಿನಂದಿಸುತ್ತೇನೆ. ನಾನು ಕಿತ್ತು ಒಗೆಯಲು ಬಂದಿಲ್ಲ, ಜೋಡಿಸಲು ಬಂದಿದ್ದೇನೆ ಎಂದಿದ್ದಾರೆ. ಈ ನಿಲುವು ಹಾಗೆಯೇ ಇರಬೇಕು ಆಗ ಸದನ ಯಾವುದೇ ವಿವಾದ ಇಲ್ಲದೇ ನಡೆಯುತ್ತದೆ ಎಂದಿದ್ದಾರೆ.

ವಿಚಾರಧಾರೆ ಒಪ್ಪುವುದು ಬಿಡುವುದು ನಿಮಗೆ ಬಿಟ್ಟಿದ್ದು. ಆದರೆ ಸಾವರ್ಕರ್ ವಿಚಾರಧಾರೆ ಅನುಸರಿಸುವವರು ಅನೇಕರಿದ್ದಾರೆ. ಹೀಗಾಗಿ ಅಂಥ ವಿಚಾರಧಾರೆಯವರ ಫೋಟೋ ಕಿತ್ತು ಒಗೆಯುತ್ತೇನೆ ಎನ್ನುವುದು ಅಹಂಕಾರ. ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ಕೊಟ್ಟಿದ್ದರು. ಅದಕ್ಕೆ ಕಾಂಗ್ರೆಸ್ ಬೆಂಬಲಿಸಿತ್ತು. ಅದರ ಪರಿಣಾಮ ಮೂರು ರಾಜ್ಯದಲ್ಲಿ ಅನುಭವಿಸಿದ್ದಾರೆ. ಈಗ ಪ್ರಿಯಾಂಕ ಖರ್ಗೆ ಅಂಥ ಮಾತುಗಳನ್ನು ಹೇಳುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಜನ ಇನ್ನೂ ಹೆಚ್ಚು ಇವರನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: Belagavi session: ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ: ಸ್ಪೀಕರ್ ಯುಟಿ ಖಾದರ್

ನೆಹರೂ ವಿಚಾರಗಳ ಬಗ್ಗೆ ನಮಗೆ ಭಿನ್ನಾಭಿಪ್ರಾಯ ಇದೆ. ಹಾಗಂತ ನಾವು ನೆಹರೂ ಫೋಟೊ ತೆಗೆಯುತ್ತೇನೆ ಎನ್ನಲಾಗುತ್ತದೆಯೇ? ನೆಹರು ಅವರನ್ನು ಒಪ್ಪುವವರು ಅನೇಕರಿದ್ದಾರೆ. ಹೀಗಾಗಿ ಫೋಟೋ ತೆಗೆಯುವ ವಿಚಾರ ಸರಿಯಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿವಿದರು.

ಪ್ರಿಯಾಂಕ್ ಖರ್ಗೆ, ಖಾದರ್ ಹೇಳಿದ್ದನು?

ಬೆಳಗಾವಿಯ ಸುವರ್ಣಸೌಧದ ವಿಧಾನಸಭೆ ಸಭಾಂಗಣದಿಂದ ಸಾವರ್ಕರ್ ಫೋಟೋ ತೆಗೆಯುವುದು ಸೂಕ್ತವಾಗಿದ್ದು, ಒಂದು ವೇಳೆ ನನಗೆ ಬಿಟ್ಟರೆ ಇವತ್ತೇ ತೆರವು ಮಾಡುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಆದ್ರೆ, ಇದಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿ, ಸುವರ್ಣ ವಿಧಾನಸೌಧದಲ್ಲಿರುವ ವಿ.ಡಿ. ಸಾವರ್ಕರ್‌ ಭಾವಚಿತ್ರ ತೆಗೆಸುವ ಪ್ರಸ್ತಾಪ ತಮ್ಮ ಮುಂದೆ ಇಲ್ಲ. ಜತೆಗೆ, ಇಂತಹ ವಿಚಾರ ಪ್ರಸ್ತಾಪ ಮಾಡುವ ಬದಲು ಸಚಿವರು, ಹಾಗೂ ಶಾಸಕರು ತಮ್ಮ ಕೆಲಸವನ್ನು ಚೆನ್ನಾಗಿ ಮಾಡಲಿ. ನಾನು ನನ್ನ ಕೆಲಸವನ್ನು ಮಾಡುತ್ತೇನೆ ಎನ್ನುವ ಮೂಲಕ ಸಾವರ್ಕರ್‌ ಫೋಟೋ ತೆಗೆಸುವ ವಿಚಾರ ಪ್ರಸ್ತಾಪಿಸಿದ ಸಚಿವ ಪ್ರಿಯಾಂಕ್ ಖರ್ಗೆ ಧೋರಣೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಫೋಟೋ ಬದಲಿಸಬೇಕು ಎಂಬ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಈ ಹೇಳಿಕೆಗೆ ತಾವು ಬದ್ಧ ಎಂದು ಸ್ಪಷ್ಟಪಡಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:09 pm, Sun, 10 December 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್