ಕೆಎಸ್​ ಈಶ್ವರಪ್ಪ ಬಂಡಾಯ ಶಮನ ಆಗುತ್ತೆ: ಪ್ರಹ್ಲಾದ್​ ಜೋಶಿ

ಈಶ್ವರಪ್ಪ ಮನವೊಲಿಕೆ ಮಾಡುವುದಕ್ಕೆ ಬಹಳ ಸಮಯ ಇದೆ. ಮತದಾನಕ್ಕೆ 40 ದಿನ ಇದೆ, ನಾಮಿನೇಷನ್​ಗೆ 20 ದಿನ ಇದೆ. ಅಷ್ಟರಲ್ಲಿ ನಾವೆಲ್ಲ ಸರಿ ಮಾಡುತ್ತೇವೆ. ನಾಳೆಯ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರಬಹುದು ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳಿದರು.

ಕೆಎಸ್​ ಈಶ್ವರಪ್ಪ ಬಂಡಾಯ ಶಮನ ಆಗುತ್ತೆ: ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Mar 17, 2024 | 11:48 AM

ಹುಬ್ಬಳ್ಳಿ, ಮಾರ್ಚ್​​ 17: ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Ehwarappa) ಬಂಡಾಯವೆದ್ದಿದ್ದು, ಸ್ವಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ (Lok Sbha Election) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಅವರ ಬಂಡಾಯ ಶಮನಕ್ಕೆ ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಈ ನಡುವೆ ನಾಳೆ (ಮಾ.18) ರಂದು ಶಿವಮೊಗ್ಗ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಬಿಜೆಪಿ (BJP) ನಾಯಕರು ಕೆಎಸ್​ ಈಶ್ವರಪ್ಪ ಅವರ ದುಂಬಾಲು ಬಿದ್ದಿದ್ದಾರೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮಾತನಾಡಿ, ಕೆ.ಎಸ್.ಈಶ್ವರಪ್ಪ ಅವರ ಬಂಡಾಯ ಶಮನ ಆಗುತ್ತೆ. ನಾಳೆಯ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರಬಹುದು ಎಂದು ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಮನವೊಲಿಕೆ ಮಾಡುವುದಕ್ಕೆ ಬಹಳ ಸಮಯ ಇದೆ. ಮತದಾನಕ್ಕೆ 40 ದಿನ ಇದೆ, ನಾಮಿನೇಷನ್​ಗೆ 20 ದಿನ ಇದೆ. ಅಷ್ಟರಲ್ಲಿ ನಾವೆಲ್ಲ ಸರಿ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಕೆಎಸ್ ಈಶ್ವರಪ್ಪ ಸಂಧಾನ ವಿಫಲ; ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು

ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ. ರಾಷ್ಟ್ರೀಯ ನಾಯಕರ ತೀರ್ಮಾನ ಮಾಡುತ್ತಾರೆ. ಹೆಚ್​ಡಿ ಕುಮಾರಸ್ವಾಮಿ ಅವರು ಅಮಿತ್​ ಶಾ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಮೂರು ಕ್ಷೇತ್ರಗಳ ಟಿಕೆಟ್​ ಕೇಳುವುದು ಸಹಜ. ಅಲ್ಲಿ ಏನ ಚರ್ಚೆ ಆಗಿದೆ ಅನ್ನೋದ ಗೊತ್ತಾಗಿಲ್ಲ. ನಾನು ಕುಮಾರಸ್ವಾಮಿ ಅವರ ಜೊತೆ ಮಾತಾಡಿಲ್ಲ ಎಂದು ತಿಳಿಸಿದರು.

ನಾನು ಅಧಿಕೃತವಾಗಿ ಇಂದು ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ಇವತ್ತು ಬಸವರಾಜ ಬೊಮ್ಮಾಯಿ ನಾವು ಸಭೆ ಮಾಡುತ್ತೇವೆ. ಮುಂಬೈ ಕರ್ನಾಟಕದಲ್ಲಿ ಎಲ್ಲ ಕ್ಷೇತ್ರ ಗೆಲ್ಲಬೇಕು. ಇವತ್ತು ಒಟ್ಟು ನಾಲ್ಕು ಸಭೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕೆಎಸ್​ ಈಶ್ವರಪ್ಪ ಬಂಡಾಯವೇಕೆ

ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿ ನಾನು ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ಸ್ಪರ್ಧೆ ಮಾಡುತ್ತೇನೆ. ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ಸ್ಪತಂತ್ರವಾಗಿ ನಿರ್ಧರಿಸುವೆ ಎಂದು ಹೇಳಿದ್ದರು.

ಗೆದ್ದರೆ ಮೋದಿಯನ್ನೇ ಬೆಂಬಲಿಸುತ್ತೇನೆ

ನನ್ನಿಂದಲೇ ಎನ್ನುವವರ ವಿರುದ್ಧ ಚುನಾವಣಾ ಕಣಕ್ಕೆ ಇಳಿಯುತ್ತಿದ್ದೇನೆ. ಸಭೆಯಲ್ಲಿ ಭಾಗಿಯಾಗಿರುವವರೆಲ್ಲೂ ನನ್ನ ಪರ ಕೆಲಸ ಮಾಡಬೇಕು. ಪಕ್ಷದ ಸಿದ್ಧಾಂತ ಪರವಿರುವ ನನ್ನನ್ನು ಬೆಂಬಲಿಸಬೇಕು. ಚುನಾವಣೆ ವೇಳೆ ಜಾತಿ ವಿಚಾರ ಪ್ರಬಲವಾಗಿ ಚರ್ಚೆಯಾಗುತ್ತದೆ, ಎಲ್ಲಾ ಸಮುದಾಯದ ಮುಖಂಡರನ್ನು ಸಂಪರ್ಕಿಸಿ ನಿರ್ಧರಿಸಿದ್ದು, ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಗೆದ್ದರೆ ಮೋದಿಯನ್ನೇ ಬೆಂಬಲಿಸುತ್ತೇನೆ, ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಶ್ರಮಿಸೋಣ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ