ಮತ್ತೆ ಧಾರವಾಡದಿಂದಲೇ ಸ್ಪರ್ಧೆ, ಕರ್ನಾಟಕದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ ಸಿಗಲಿದೆ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Pralhad Joshi on Karnataka Politics; ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಜೋಶಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪವರ್ ಕಟ್ ಶುರುವಾಗಿದೆ, ಇದರ ಬಗ್ಗೆ ಕೇಳಿದರೆ ಮಳೆಯಿಲ್ಲ, ಗಾಳಿಯಿಲ್ಲ ಅಂತಾರೆ. ಇವರ ಗಾಳಿಯೇ ಉಲ್ಟಾ ಆಗಿದೆ, ಹೀಗಾಗಿ ಕ್ಷುಲ್ಲಕ ರಾಜಕಾರಣ ಮಾಡಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಜೋಶಿ ಹೇಳಿದರು.

ಮತ್ತೆ ಧಾರವಾಡದಿಂದಲೇ ಸ್ಪರ್ಧೆ, ಕರ್ನಾಟಕದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ ಸಿಗಲಿದೆ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ
Follow us
TV9 Web
| Updated By: Ganapathi Sharma

Updated on: Aug 18, 2023 | 6:56 PM

ಹುಬ್ಬಳ್ಳಿ, ಆಗಸ್ಟ್ 18: ಪಕ್ಷವು ತಮಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದ್ದು, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಶುಕ್ರವಾರ ಹೇಳಿದರು. ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿಯು (BJP) ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ ಬಿಜೆಪಿಯ ಸಂಘಟನಾ ಶಕ್ತಿಯ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀಗಾಗಿ ಯಾರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಕಾವೇರಿ ವಿವಾದದ ವಿಷಯಾಂತರ ಮಾಡಲು ಪಕ್ಷಾಂತರ ವಿಚಾರ ಮುನ್ನೆಲೆಗೆ ತಂದಿದ್ದಾರೆ ಎಂದರು.

ಸಚಿವ ರಾಮಲಿಂಗಾರೆಡ್ಡಿಯವರು ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಹೀಗೆಲ್ಲ ಹೇಳಲು ಅವರು ನಮ್ಮ ಪಕ್ಷದಲ್ಲಿ ಇದ್ದರೇ ಎಂದು ಪ್ರಶ್ನಿಸಿದರು.

ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ ಎಂದ ಕೇಂದ್ರ ಸಚಿವರು, ಚಲುವರಾಯಸ್ವಾಮಿಯವರ ಮೇಲೆ ಗಂಭೀರ ಆರೋಪ ಬಂದಿದೆ. ಅವರು ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರದ ಮೇಲೆ ಗಂಭೀರ ಆರೋಪಗಳು ಕೇಳಿ ಬಂದಿವೆ ಹಾಗೂ ಈ ಆರೋಪಗಳು ಪ್ರಾಥಮಿಕವಾಗಿ ಮೇಲ್ನೋಟಕ್ಕೆ ಸತ್ಯ ಎಂಬಂತಿವೆ. ಹೀಗಾಗಿ ಚಲುವರಾಯಸ್ವಾಮಿಯವರು ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಜೋಶಿ ಒತ್ತಾಯಿಸಿದರು.

ದೂರು ಕೊಟ್ಟ ಗುತ್ತಿಗೆದಾರರನ್ನು ಮೊದಲು ಪೊಲೀಸ್ ಠಾಣೆಗೆ ಕರೆಸುತ್ತಿದ್ದಾರೆ. ಗುತ್ತಿಗೆದಾರರನ್ನು ಹೆದರಿಸಿ ಬೆದರಿಸಿ ಉಲ್ಟಾ ಹೊಡೆಯುವ ಹಾಗೆ ಮಾಡಿದ್ದಾರೆ ಎಂದು ಜೋಶಿ ಆರೋಪಿಸಿದರು.

ಕಾವೇರಿ ವಿಷಯದಲ್ಲೂ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದ ಪ್ರಲ್ಹಾದ ಜೋಶಿ, ಕಾಂಗ್ರೆಸ್ ನಾಯಕರು ಕಾವೇರಿ ವಿಚಾರದಲ್ಲಿ ಗಟ್ಟಿ ನಿಲುವು ತೆಗೆದುಕೊಂಡು ಹೇಳುವ ಪ್ರಯತ್ನ ಮಾಡುತ್ತಿಲ್ಲ. ದೇಶದಲ್ಲಿ ಮೈತ್ರಿ ಉಳಿಸಿಕೊಳ್ಳುವತ್ತ ಮಾತ್ರ ಕಾಂಗ್ರೆಸ್ ಗಮನ ನೆಟ್ಟಿದೆ ಎಂದರು.

ಕರ್ನಾಟಕದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ಜೋಶಿ ಕಿಡಿ

ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಜೋಶಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪವರ್ ಕಟ್ ಶುರುವಾಗಿದೆ, ಇದರ ಬಗ್ಗೆ ಕೇಳಿದರೆ ಮಳೆಯಿಲ್ಲ, ಗಾಳಿಯಿಲ್ಲ ಅಂತಾರೆ. ಇವರ ಗಾಳಿಯೇ ಉಲ್ಟಾ ಆಗಿದೆ, ಹೀಗಾಗಿ ಕ್ಷುಲ್ಲಕ ರಾಜಕಾರಣ ಮಾಡಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಜೋಶಿ ಹೇಳಿದರು.

ಈ ಹಿಂದೆ ಪತ್ರ ಬರೆದು ಕಾಂಗ್ರೆಸ್ ಪಾಳೆಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಬಿಆರ್ ಪಾಟೀಲರು ಈಗ ಮತ್ತೆ ಪತ್ರ ಬರಿತೀನಿ ಎಂದಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದಿದ್ದಾರೆ. ಕಾಂಗ್ರೆಸ್​ಗೆ ನೇತೃತ್ವವೂ ಇಲ್ಲ, ನಿಯತ್ತೂ ಇಲ್ಲ ಎಂದ ಪ್ರಲ್ಹಾದ ಜೋಶಿಯವರು, ಬಿಜೆಪಿ ಬಂಡೆಗಲ್ಲಿನಂತೆ ಗಟ್ಟಿಯಾಗಿದೆ ಎಂದರು.

ಇದನ್ನೂ ಓದಿ: ಆಪರೇಷನ್ ಹಸ್ತದಲ್ಲಿ ಕೆಲ ನಾಯಕರ ವಾಪಸಾತಿಗೆ ಬ್ರೇಕ್; ಯಾರಿಗೆಲ್ಲ ಸಿಕ್ಕಿದೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್?

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲಿದ್ದೇವೆ; ಜೋಶಿ

ಗಣೇಶ ಹಬ್ಬವನ್ನು ನಮ್ಮ ಭಾಗದಲ್ಲಿ ವಿಜೃಂಭಣೆಯಿಂದ ಮಾಡುತ್ತೇವೆ. ಈ ಸಂಧರ್ಭದಲ್ಲಿ ಡಿಜೆ ಸೇರಿದಂತೆ ಯಾವುದೇ ನಿರ್ಬಂಧ ಹೇರಬಾರದು. ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ, ಅಲ್ಲಿ ಕಳೆದ ಬಾರಿ‌ಯೂ ಗಣೇಶ ಕೂರಿಸಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಿದ್ದೇವೆ. ಈ ಬಾರಿಯೂ ಅಲ್ಲಿ ಅದೇ ಸಂಪ್ರದಾಯ ಮುಂದುವರಿಯಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯಾವುದೆ ಗೊಂದಲ ಮಾಡಲ್ಲ ಅಂದುಕೊಂಡಿದ್ದೇನೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಸೂಕ್ತ ತೀರ್ಮಾನ ಮಾಡಬೇಕು. ಅದು ಮುಸ್ಲಿಮರ ಜಾಗವಲ್ಲ, ಹೀಗಾಗಿ ಅವರು ಈ ಬಗ್ಗೆ ವಿವಾದ ಮಾಡಬಾರದು. ಅವರಿಗೂ ನಮಾಜ್‌ಗೆ ಅವಕಾಶವಿದೆ. ಹೀಗಿರುವಾಗ ಸರ್ಕಾರ ಅನಗತ್ಯ ವಿವಾದ ಮೈಮೇಲೆ ಎಳೆದುಕೊಳ್ಳಬಾರದು ಎಂದು ಪ್ರಲ್ಹಾದ ಜೋಶಿ ಹೇಳಿದರು.

ಇದನ್ನೂ ಓದಿ: ಆಪರೇಷನ್ ಹಸ್ತ: ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಡಿಕೆ ಶಿವಕುಮಾರ್

ಮಣಿಪುರದ ಬಗ್ಗೆ ಮಾತಾಡಿದ ಕೇಂದ್ರ ಸಚಿವರು, ಕಾಂಗ್ರೆಸ್ ಪಾರ್ಟಿ ಇತಿಹಾಸ ತಿಳಿದುಕೊಳ್ಳಲಿ. ಮಣಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಸಾಕಷ್ಟು ಗಲಭೆಗಳಾಗಿವೆ. ಒಬ್ಬರು ಸತ್ತರೂ ನಾವು ಸಂವೇದನಾಶೀಲವಾಗಿ ನೋಡುತ್ತೇವೆ. ಕೇಂದ್ರದ ಗೃಹ ಮಂತ್ರಿಗಳು ಮೂರು ದಿನ ಮಣಿಪುರದಲ್ಲೇ ಇದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಪ್ರಯತ್ನಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಯತ್ನಿಸಲಾಗುತ್ತಿದೆ. ಮಹತ್ವದ ಬಿಲ್‌ಗಳು ಇದ್ದಾಗ ಕಾಂಗ್ರೆಸ್ ಪಕ್ಷ ಚರ್ಚೆಯಲ್ಲಿ ಭಾಗವಹಿಸಿಲ್ಲ. ಈ ಬಾರಿಯ ಕಾಂಗ್ರೆಸ್ ನ ಮೈತ್ರಿಕೂಟವೆಂದರೆ ಅದು ಘಮಂಡಿಯಾ ಘಟಬಂಧನ ಎಂದು ಪ್ರಲ್ಹಾದ ಜೋಶಿಯವರು ವಿಪಕ್ಷದ ಮೈತ್ರಿಕೂಟದ ಬಗ್ಗೆ ವ್ಯಂಗ್ಯವಾಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ