ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ

ಗ್ಯಾರಂಟಿ ಕಾರ್ಡ್​ನಲ್ಲಿ ಸಹಿಹಾಕುವಾಗ ಯೋಚನೆ ಮಾಡಬೇಕಿತ್ತು. ಸುಳ್ಳು ಹೇಳುವುದು ಕಾಂಗ್ರೆಸ್ ಡಿಎನ್​​ಎನಲ್ಲಿದೆ. ಹಿಮಾಚಲಪ್ರದೇಶ, ರಾಜಸ್ಥಾನದಲ್ಲಿ ಗ್ಯಾರಂಟಿ ಈಡೇರಿಸಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ
ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​​ ಜೋಶಿ
Edited By:

Updated on: Jun 28, 2023 | 7:01 PM

ದೆಹಲಿ: ಯಾರನ್ನೂ ಕೇಳದೆ ಸಿದ್ದರಾಮಯ್ಯ ಅಕ್ಕಿ ಘೋಷಣೆ ಮಾಡಿದ್ದಾರೆ. ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೂ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ. ನೈಸರ್ಗಿಕ ವಿಕೋಪ, ತುರ್ತು ಪರಿಸ್ಥಿತಿಯಲ್ಲಿ ಅಕ್ಕಿ ಕೊಡಬೇಕು. ಕೇಂದ್ರದ ಬಳಿ ಅಕ್ಕಿ ಇದ್ದರೆ ಕೊಡುತ್ತಿದ್ದೆವು ಎಂದಿದ್ದಾರೆ.

ಬೇರೆ ರಾಜ್ಯಗಳು ಕೂಡ ಅಕ್ಕಿ ಕೇಳಿದರೆ ಎಲ್ಲಿಂದ ಕೊಡುವುದು. ಕೇಂದ್ರ ಸರ್ಕಾರದ ಬಳಿ ಅಕ್ಕಿ ಸ್ಟಾಕ್ ಇರಲೇಬೇಕು. ಗ್ಯಾರಂಟಿ ಕಾರ್ಡ್​ನಲ್ಲಿ ಸಹಿಹಾಕುವಾಗ ಯೋಚನೆ ಮಾಡಬೇಕಿತ್ತು. ಸುಳ್ಳು ಹೇಳುವುದು ಕಾಂಗ್ರೆಸ್ ಡಿಎನ್​​ಎನಲ್ಲಿದೆ. ಹಿಮಾಚಲಪ್ರದೇಶ, ರಾಜಸ್ಥಾನದಲ್ಲಿ ಗ್ಯಾರಂಟಿ ಈಡೇರಿಸಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: ವಿಪಕ್ಷ ನಾಯಕರ ಜೊತೆ ಒಳ ಒಪ್ಪಂದ: ಶಾಸಕ ಯತ್ನಾಳ್​ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ

10 ಕೆಜಿ ಅಕ್ಕಿಗೆ ಹಣ ಕೊಟ್ಟಿದ್ರೆ ಮರ್ಯಾದಸ್ಥರ ಲಕ್ಷಣ 

ಕಾಂಗ್ರೆಸ್​ ಕೊಟ್ಟ ಮಾತಿನಂತೆ 10 ಕೆಜಿ ಅಕ್ಕಿಗೆ ಹಣ ಕೊಡಬೇಕು. ಚುನಾವಣೆಗೂ ಮುನ್ನ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಕೇಂದ್ರ ಸರ್ಕಾರ 5 KG ಅಕ್ಕಿ ಕೊಡುತ್ತಿದೆ ಎಂದು ಒಪ್ಪಿಕೊಂಡಂತಾಗಿದೆ. ಇಂದು ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ನಾವೇ ಅಕ್ಕಿಕೊಟ್ಟಿದ್ದು ಎಂದು ದಾರಿ ತಪ್ಪಿಸುತ್ತಿದ್ದರು.

ಹೇಳಿದಂತೆ 10 ಕೆಜಿ ಅಕ್ಕಿಗೆ ಸಿದ್ದರಾಮಯ್ಯ ಹಣ ಕೊಡಬೇಕು. ಕನಿಷ್ಠ ಪಕ್ಷ 5 ಕೆಜಿ ಅಕ್ಕಿಗೆ ಹಣ ಕೊಟ್ರಲ್ಲ ಅನ್ನೋದು ಸಮಾಧಾನ. 10 ಕೆಜಿ ಅಕ್ಕಿಗೆ ಹಣ ಕೊಟ್ಟಿದ್ರೆ ಮರ್ಯಾದಸ್ಥರ ಲಕ್ಷಣ ಆಗುತ್ತಿತ್ತು ಎಂದು ಹರಿಯಿದ್ದಾರೆ.

ಇದನ್ನೂ ಓದಿ: ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ ಟೀಕೆ

ಪಕ್ಷದ ನಾಯಕರ ವಿರುದ್ಧ ರೇಣುಕಾರ್ಯ ಅಸಮಧಾನ ವಿಚಾರವಾಗಿ ಮಾತನಾಡಿದ ಅವರು, ನಾವು ಸೋತಿರಬಹುದು, ನಮ್ಮದು ಐಡಿಯಾಲಜಿ ಪಾರ್ಟಿ. ಯಾವುದೇ ನಾಯಕರು ಬಹಿರಂಗವಾಗಿ ಮಾತನಾಡಬಾರದು. ಪಕ್ಷ ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕು. ಶೀಘ್ರದಲ್ಲೇ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆಯಾಗಲಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us