ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದು ಯಾರಿಗೂ ಅಸಮಾಧಾನವಿಲ್ಲ: ಪ್ರಹ್ಲಾದ್​ ಜೋಶಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಬೆಳಗುತ್ತಿದೆ. ಭಾರತದ ಸಂಸ್ಕೃತಿ ಕೂಡಾ ಎಲ್ಲ ಕಡೆ ಪಸರಿಸುತ್ತಿದೆ. ದೇಶದಲ್ಲಿ ರಾಮಮಂದಿರದ ನಿರ್ಮಾಣದ ಕಾರ್ಯ ಬಹಳ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಅಭಿವೃದ್ಧಿ ಜೊತೆಗೆ ಪುನರುತ್ಥಾನದ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ರಾಮಮಂದಿರ ಉದ್ಘಾಟನೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದು ಯಾರಿಗೂ ಅಸಮಾಧಾನವಿಲ್ಲ: ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Nov 14, 2023 | 2:21 PM

ಹುಬ್ಬಳ್ಳಿ ನ.14: ಬಿಎಸ್​ ಯಡಿಯೂರಪ್ಪ (BS Yediyurappa) ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದು ಯಾರಿಗೂ ಅಸಮಾಧಾನವಿಲ್ಲ. ಭಿನ್ನಾಭಿಪ್ರಾಯ ಇದ್ದರೆ ಎಲ್ಲರೂ ಮಾತನಾಡಿ ಸರಿ ಮಾಡುತ್ತೇವೆ. ಬಿಎಸ್ ​ಯಡಿಯೂರಪ್ಪ, ಬಿವೈ ವಿಜಯೇಂದ್ರ ಮತ್ತು ನಾವು ಎಲ್ಲರೂ ಸೇರಿ ಸರಿ ಮಾಡುತ್ತೇವೆ. ನನಗೆ ವಿಶ್ವಾಸ ಇದೆ ಬಿವೈ ವಿಜಯೇಂದ್ರ ಎಲ್ಲರನ್ನೂ ಭೇಟಿಯಾಗುತ್ತಾರೆ. ಪಕ್ಷದ ಮೇಲೆ ಜನರಿಗೆ ನೀರಿಕ್ಷೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಬೆಳಗುತ್ತಿದೆ. ಭಾರತದ ಸಂಸ್ಕೃತಿ ಕೂಡಾ ಎಲ್ಲ ಕಡೆ ಪಸರಿಸುತ್ತಿದೆ. ಇವತ್ತು ಜನ ಭಾರತದ ಸಂಸ್ಕ್ರತಿ ಸ್ವೀಕಾರ ಮಾಡಿದ್ದಾರೆ. ಅಮೇರಿಕಾದ ವೈಟ್ ಹೌಸ್​ನಿಂದ ಇಂಗ್ಲೆಂಡ್​ವರೆಗೂ ಅಧಿಕೃತ ಕಾರ್ಯಕ್ರಮ ಮಾಡುವ ಮಟ್ಟಿಗೆ ಸಂಸ್ಕೃತಿ ಬೆಳದಿದೆ. ದೇಶದಲ್ಲಿ ರಾಮಮಂದಿರದ ನಿರ್ಮಾಣದ ಕಾರ್ಯ ಬಹಳ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಅಭಿವೃದ್ಧಿ ಜೊತೆಗೆ ಪುನರುತ್ಥಾನದ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ರಾಮಮಂದಿರ ಉದ್ಘಾಟನೆಯಾಗಲಿದೆ ಎಂದರು.

ಇದನ್ನೂ ಓದಿ: ಮುನಿಸು ಹತ್ತಿಕ್ಕಿ ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಮನೆಯಲ್ಲಿ ಅಭಿನಂದಿಸಿದ ಸಿಟಿ ರವಿ

ನಾನು ಪೊಲೀಸರಿಗೆ ಬೈದಿರುವುದು ಆ ಸಂದರ್ಭಕ್ಕೆ ತಕ್ಕಂತೆ. ನಾನು ನಮ್ಮ ಕಾರ್ಯಕರ್ತರ ರಕ್ಷಣೆಗಾಗಿ ಮಾತಾಡಿದ್ದು. ಅದು ಮುಗಿದು ಹೋಗಿರೋ ವಿಷಯ ಎಂದು ಸ್ಪಷ್ಟನೆ ನೀಡಿದರು.

ವಿಪರೀತ ಒಳ ಜಗಳದಿಂದ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಭ್ರಷ್ಟಾಚಾರ ಮಿತಿ ಮೀರಿದೆ ಅಂತ ಸ್ವಪಕ್ಷದವರೇ ಆರೋಪಿಸುತ್ತಿದ್ದಾರೆ. ಆರು ತಿಂಗಳಲ್ಲಿಯೇ ಈ ರೀತಿಯ ಆಡಳಿತ ವಿರೋಧಿ ಅಲೆ ನಿರ್ಮಾಣ ಆಗುತ್ತೆ ಅಂದುಕೊಂಡಿರಲಿಲ್ಲ. ಡಿ.ಕೆ. ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ. ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್ ಸಿಗುತ್ತಿಲ್ಲ. ವಿಪರೀತವಾದ ಒಳಜಗಳದಿಂದ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಎರಡ್ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ ಆಗುತ್ತೆ. ರಾಷ್ಟ್ರ ನಾಯಕರ ಜೊತೆ ಚರ್ಚಿಸಿ ಸದ್ಯದಲ್ಲಿಯೇ ಎರಡೂ ಸದನಗಳ ವಿಪಕ್ಷ ನಾಯಕರನ್ನು ಆಯ್ಕೆ ಮಾಡುತ್ತೇವೆ. ಸರ್ಕಾರದ ನಿಷ್ಕ್ರೀಯತೆ, ವೈಫಲ್ಯದ ವಿರುದ್ಧ ಹೋರಾಡುತ್ತೇವೆ. ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ. ಒಂದು ವರ್ಗವನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಮನೂರು ಶಿವಶಂಕರಪ್ಪ ಅವರು ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರವಿದೆಯೆಂದು ಅವರದ್ದೇ ಪಕ್ಷದ ಶಾಸಕರು ಹೇಳಿದ್ದಾರೆ ಎಂದರು.

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿದ್ಯುತ್ ಕದ್ದ ವಿಚಾರವಾಗಿ ಮಾತನಾಡಿದ ಅವರು ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಹೆಚ್‍ಡಿ ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾದವರು. ಆ ರೀತಿ ನೇರವಾಗಿ ವಿದ್ಯುತ್ ತೆಗೆದುಕೊಂಡಿರಲಿಕ್ಕಿಲ್ಲ. ಹಾಗೊಂದು ವೇಳೆ ವಿದ್ಯುತ್ ತೆಗೆದುಕೊಂಡಿದ್ದರೆ ತಪ್ಪಾಗುತ್ತೆ. ಆದರೆ ಹೆಚ್​ಡಿ ಕುಮಾರಸ್ವಾಮಿ ಹಾಗೆ ಮಾಡಿರಲಿಕ್ಕಿಲ್ಲ. ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಆರೋಪಿಸುತ್ತಿರಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:25 pm, Tue, 14 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್