AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ, I.N.D.I.A ಮೈತ್ರಿಕೂಟದ ಒತ್ತಡಕ್ಕೆ ಮಣಿದು ತಮಿಳುನಾಡಿಗೆ ನೀರು; ಕಾಂಗ್ರೆಸ್ ವಿರುದ್ಧ ರಾಜೀವ್ ಚಂದ್ರಶೇಖರ್ ವಾಗ್ದಾಳಿ

Rajeev Chandrasekhar Accused Karnataka Congress Government on Cauvery Dispute; ಕರ್ನಾಟಕ ಕಾಂಗ್ರೆಸ್ ಸರ್ಕಾರ ಯಾವುದೇ ರಾಜಕೀಯ ಪಕ್ಷದ ಜತೆ ಸಮಾಲೋಚನೆ ನಡೆಸದೆ ಕಾವೇರಿ ನೀರು ಬಿಡುಗಡೆ ಮಾಡಿದೆ. ಸರ್ಕಾರವು ಈ ವಿಷಯದ ಬಗ್ಗೆ ಸರ್ವಪಕ್ಷ ಸಮಾಲೋಚನೆ ನಡೆಸಲಿಲ್ಲ ಎಂದು ಚಂದ್ರಶೇಖರ್ ದೂರಿದ್ದಾರೆ.

ಡಿಎಂಕೆ, I.N.D.I.A ಮೈತ್ರಿಕೂಟದ ಒತ್ತಡಕ್ಕೆ ಮಣಿದು ತಮಿಳುನಾಡಿಗೆ ನೀರು; ಕಾಂಗ್ರೆಸ್ ವಿರುದ್ಧ ರಾಜೀವ್ ಚಂದ್ರಶೇಖರ್ ವಾಗ್ದಾಳಿ
ರಾಜೀವ್ ಚಂದ್ರಶೇಖರ್
Ganapathi Sharma
|

Updated on: Sep 26, 2023 | 9:42 PM

Share

ನವದೆಹಲಿ, ಸೆಪ್ಟೆಂಬರ್ 26: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು I.N.D.I.A ಮೈತ್ರಿಕೂಟದ ಒತ್ತಡಕ್ಕೆ ಮಣಿದು ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಮಂಗಳವಾರ ಆರೋಪಿಸಿದ್ದಾರೆ. ತಮಿಳುನಾಡಿನಲ್ಲಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (DMK) ಇಲ್ಲದೆ ಕಾಂಗ್ರೆಸ್ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ತಿಳಿದಿದ್ದರಿಂದ ಸಿದ್ದರಾಮಯ್ಯ ಸರ್ಕಾರ ನೀರು ಬಿಡುಗಡೆ ಮಾಡಿದೆ ಎಂದು ಅವರು ಟೀಕಿಸಿದ್ದಾರೆ.

ರೋಜ್‌ಗಾರ್ ಮೇಳ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರ್, ‘ಕಾಂಗ್ರೆಸ್ ಯಾವ ರಾಜಕೀಯ ಒತ್ತಡಕ್ಕೆ ಮಣಿದಿದೆಯೋ ಆ ರಾಜಕೀಯ ಒತ್ತಡ ಕರ್ನಾಟಕದ ಜನರ ಮೇಲೆ ಪರಿಣಾಮ ಬೀರಲು ಬಿಜೆಪಿ ಬಿಡುವುದಿಲ್ಲ ಮತ್ತು ಪ್ರಬಲ ಹೋರಾಟ ನಡೆಸಲಿದೆ’ ಎಂದು ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಯಾವುದೇ ರಾಜಕೀಯ ಪಕ್ಷದ ಜತೆ ಸಮಾಲೋಚನೆ ನಡೆಸದೆ ಕಾವೇರಿ ನೀರು ಬಿಡುಗಡೆ ಮಾಡಿದೆ. ಸರ್ಕಾರವು ಈ ವಿಷಯದ ಬಗ್ಗೆ ಸರ್ವಪಕ್ಷ ಸಮಾಲೋಚನೆ ನಡೆಸಲಿಲ್ಲ ಎಂದು ಚಂದ್ರಶೇಖರ್ ದೂರಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಆದೇಶ, ಯಾರು ಏನಂದ್ರು?

ನಮ್ಮ ರೈತರು ಮತ್ತು ನಾಗರೀಕರ ಹಕ್ಕುಗಳಿಗಾಗಿ ನಾವು ಹೋರಾಟ ನಡೆಸಲಿದ್ದೇವೆ ಎಂದು ಕರ್ನಾಟಕದ ಬಿಜೆಪಿ ಸ್ಪಷ್ಟವಾಗಿ ಹೇಳಿದೆ. ಕರ್ನಾಟಕದ ಜನರ ಹಿತಾಸಕ್ತಿಗೆ ಅಡ್ಡಿಯಾಗಲು ಅವಕಾಶವಾದಿ ರಾಜಕಾರಣಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಕರೆಕೊಟ್ಟಿದ್ದ ಬೆಂಗಳೂರು ಬಂದ್ ಶಾಂತಿಯುತವಾಗಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ