ಸಭಾಧ್ಯಕ್ಷರಾದ ಬಳಿಕ ಸ್ವಕ್ಷೇತ್ರಕ್ಕೆ ಯುಟಿ ಖಾದರ್: ಹಿಜಾಬ್​​ ಸೇರಿ ಅನೇಕ ವಿಷಯಗಳ ಬಗ್ಗೆ ನೂತನ ಸ್ಪೀಕರ್ ಹೇಳಿದ್ದಿಷ್ಟು

|

Updated on: May 25, 2023 | 1:24 PM

ಯು.ಟಿ.ಖಾದರ್ ಸಭಾಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದ, ಈ ವೇಳೆ ಮಾತನಾಡಿದ ಅವರು ‘ನಾನು ಸಭಾಧ್ಯಕ್ಷ ಸ್ಥಾನದಲ್ಲಿ ಇದ್ದರೂ, ಉಳ್ಳಾಲ ಕ್ಷೇತ್ರದ ಸೇವೆ ಮಾಡ್ತೇನೆ. ಕ್ಷೇತ್ರದ ಜನರ, ಕಾರ್ಯಕರ್ತರ ಜೊತೆ ನಿಕಟ ಸಂಪರ್ಕ ಇರಲಿದೆ ಎಂದಿದ್ದಾರೆ.

ಸಭಾಧ್ಯಕ್ಷರಾದ ಬಳಿಕ ಸ್ವಕ್ಷೇತ್ರಕ್ಕೆ ಯುಟಿ ಖಾದರ್:  ಹಿಜಾಬ್​​ ಸೇರಿ ಅನೇಕ ವಿಷಯಗಳ ಬಗ್ಗೆ ನೂತನ ಸ್ಪೀಕರ್ ಹೇಳಿದ್ದಿಷ್ಟು
ಯು.ಟಿ ಖಾದರ್​
Follow us on

ಮಂಗಳೂರು: ವಿಧಾನಸಭೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್​, ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಯು.ಟಿ.ಖಾದರ್(U T Khader), ಸಭಾಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ನಾನು ಸಭಾಧ್ಯಕ್ಷ ಸ್ಥಾನದಲ್ಲಿ ಇದ್ದರೂ, ಉಳ್ಳಾಲ ಕ್ಷೇತ್ರದ ಸೇವೆ ಮಾಡ್ತೇನೆ. ಕ್ಷೇತ್ರದ ಜನರ, ಕಾರ್ಯಕರ್ತರ ಜೊತೆ ನಿಕಟ ಸಂಪರ್ಕ ಇರಲಿದೆ. ಈ ಸ್ಥಾನ ನನ್ನ ಸೇವೆಗೆ ಅಡ್ಡಿ ಬರಲ್ಲ, ನಾನು ಅದಕ್ಕೆ ಅಡ್ಡಿ ಪಡಿಸಲ್ಲ. ಈ ಹಂತಕ್ಕೆ ಬರಲು ಎಲ್ಲರ ಸಹಕಾರ, ಮಾರ್ಗದರ್ಶನವೇ ಕಾರಣ. ಈ ಗೌರವ ಉಳಿಸಿಕೊಂಡು ಜಿಲ್ಲೆಗೆ ಮತ್ತು ಕ್ಷೇತ್ರಕ್ಕೆ ಗೌರವ ತರುತ್ತೇನೆ ಎಂದು ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ನೂತನ ಸ್ಪೀಕರ್ ಯು.ಟಿ ಖಾದರ್ ‘ವಿಧಾನಸಭೆಯಲ್ಲಿ ದ್ವೇಷ, ಆವೇಶ ಇಲ್ಲದೇ ಸದಸ್ಯರ ಜೊತೆ ಇರಬೇಕು. ಸಭಾಧ್ಯಕ್ಷ ಸ್ಥಾನದಲ್ಲಿ ಜನರ ಜೊತೆ ಒಡನಾಟದ ಜೊತೆ ಸ್ಥಾನದ ಘನತೆ ಕೂಡ ಉಳಿಸಬೇಕಿದೆ. ಈ ಹೊತ್ತಲ್ಲಿ‌ ಕ್ಷೇತ್ರದ ಜನತೆ ಕೂಡ ನನಗೆ ಬೆಂಬಲ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಮಂತ್ರಿ ಸ್ಥಾನದ ಬಗ್ಗೆ ಹೆಚ್ಚು ತಿಳುವಳಿಕೆ ಇದೆ. ಆದರೆ, ಸಭಾಧ್ಯಕ್ಷ ಸ್ಥಾನದ ಬಗ್ಗೆ ಹೆಚ್ಚಿನವರಿಗೆ ಗೊತ್ತಿರಲ್ಲ. ಇದರಿಂದ ನಾನು ಅವರ ಕೈಗೆ ಸಿಗಲ್ಲ, ಎಂಬ ಪ್ರೀತಿಯ ಆತಂಕ ಇದೆ. ಆದರೆ ಕೆಲವೇ ತಿಂಗಳುಗಳಲ್ಲಿ ಈ ಬಗ್ಗೆ ಅವರಿಗೆ ಅರಿವಾಗಲಿದೆ ಎಂದರು.

ಇದನ್ನೂ ಓದಿ:CM congratulates the Speaker: ವಿಧಾನಸಭಾಧ್ಯಕ್ಷರ ಸ್ಥಾನ ಅಲಂಕರಿಸಿದ ಯುಟಿ ಖಾದರ್​ರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇನ್ನು ಇದು ಪಕ್ಷದ ಹೈಕಮಾಂಡ್ ತೀರ್ಮಾನ, ಅದಕ್ಕೆ ನಾನು‌ ಬದ್ದನಾಗಿದ್ದಾನೆ. ವಯಸ್ಸಿನಲ್ಲಿ ನಾನು ಕಿರಿಯ, ಆದರೆ ಅನುಭವದಲ್ಲಿ ‌ನಾನು ಹಿರಿಯ. ನಾನು ಮಂತ್ರಿಯಾಗಿದ್ದರೆ ಒಂದು ಇಲಾಖೆಗೆ ಮಾತ್ರ ಮಂತ್ರಿಯಾಗಿರುತ್ತಿದ್ದೆ. ಈಗ ಎಲ್ಲಾ ಇಲಾಖೆಯ ಮಂತ್ರಿಗಳು ಕೂಡ ನನ್ನ ವ್ಯಾಪ್ತಿಗೆ ಬರುತ್ತಾರೆ. ಆ ಮೂಲಕ ನಾನು ಕೆಲಸ ಮಾಡಿಸೋದನ್ನ ಮಾಡುತ್ತೇನೆ. ಈ ಮೂಲಕ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಉಳಿಸಿಕೊಂಡು, ಅಭಿವೃದ್ದಿ ಮಾಡುತ್ತೇನೆ ಎಂದಿದ್ದಾರೆ.

ಹಿಜಾಬ್​ ಕುರಿತು ಮಾತನಾಡಿದ ಖಾದರ್​

ಇನ್ನು ಇದೇ ವೇಳೆ ಹಿಜಾಬ್​​ ಸೇರಿ ಅನೇಕ ವಿಷಯಗಳ ಬಗ್ಗೆ ಸರ್ಕಾರದ ನಿಲುವು ವಿಚಾರ ‘ ಕೆಲವು ಸಂವಿಧಾನಬದ್ಧ ವಿಷಯಗಳು ಸುಪ್ರೀಂಕೋರ್ಟ್​ನಲ್ಲಿವೆ. ನಾನು ಸರ್ಕಾರ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡಲ್ಲ. ಸ್ಪೀಕರ್​ ಆದ ಹಿನ್ನೆಲೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಹೀಗಾಗಿ ಸಂವಿಧಾನ ಬದ್ಧವಾಗಿ ನನ್ನ ಅಭಿಪ್ರಾಯ ಹಂಚಿಕೊಳ್ಳುವೆ. ಸಭಾಧ್ಯಕ್ಷ ಸ್ಥಾನ ಉತ್ಸವ ಮೂರ್ತಿ ಅಲ್ಲ. ಪೀಠದಲ್ಲಿ ಕೂರುವವರು ಸರಿ ಇದ್ರೆ, ಎಲ್ಲವೂ ಸರಿ ಇರುತ್ತದೆ. ಶಿಷ್ಟಾಚಾರ ಎಂದೆನಿಲ್ಲ. ಜನರ ಪ್ರೀತಿಯೇ ಪ್ರೋಟೋಕಾಲ್, ಜನರಿಗೆ ನನ್ನನ್ನು ಭೇಟಿ ಮಾಡಲು ಅವಕಾಶ ಕೊಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇನ್ನು ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು, ಹೊಸ 70 ಶಾಸಕರಿಗೆ 3 ದಿನ ತರಬೇತಿ ಕಾರ್ಯಾಗಾರ ಇದೆ. ವಿಧಾನಸಭೆಯ ಕಾರ್ಯವೈಖರಿ, ಜನರ ಜೊತೆಗಿನ ಸಂಪರ್ಕ, ಹಲವು ವಿಚಾರಗಳ ಬಗ್ಗೆ ಹೊಸ ಶಾಸಕರಿಗೆ ಮಾರ್ಗದರ್ಶನ ನೀಡಲಾಗುತ್ತದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Thu, 25 May 23