ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಾಯಾವತಿ ಸ್ಪರ್ಧಿಸುವುದಿಲ್ಲ; ಬಿಎಸ್​ಪಿ ಸಂಸದ ಮಾಹಿತಿ

ಸಮಾಜವಾದಿ ಪಕ್ಷವಾಗಲಿ ಅಥವಾ ಬಿಜೆಪಿಯಾಗಲಿ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ ಬಿಎಸ್‌ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಾಯಾವತಿ ಸ್ಪರ್ಧಿಸುವುದಿಲ್ಲ; ಬಿಎಸ್​ಪಿ ಸಂಸದ ಮಾಹಿತಿ
ಮಾಯಾವತಿ

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ (Mayawati) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Assembly Elections 2022) ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (BSP) ಸಂಸದ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಮಾಯಾವತಿ ಮತ್ತು ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಎಸ್‌ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ಹೇಳಿದ್ದಾರೆ.

ಮಾಜಿ ಸಿಎಂ ಮಾಯಾವತಿ ಈ ಹಿಂದೆ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಸಮಾಜವಾದಿ ಪಕ್ಷ 400 ಅಭ್ಯರ್ಥಿಗಳನ್ನು ಹೊಂದಿಲ್ಲ ಎಂದಮೇಲೆ ಅವರು 400 ಸ್ಥಾನಗಳನ್ನು ಹೇಗೆ ಗೆಲ್ಲಲು ಸಾಧ್ಯ? ಎಂದು ಮಿಶ್ರಾ ಪ್ರಶ್ನಿಸಿದ್ದಾರೆ. ಸಮಾಜವಾದಿ ಪಕ್ಷವಾಗಲಿ ಅಥವಾ ಬಿಜೆಪಿಯಾಗಲಿ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ ಬಿಎಸ್‌ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10ರಿಂದ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಫೆಬ್ರವರಿ 14ರಂದು ಮತ್ತು ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 6 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 403 ಸ್ಥಾನಗಳಲ್ಲಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಹಿಂದಿನವರು 298 ಸ್ಥಾನಗಳಲ್ಲಿ ಮತ್ತು ನಂತರದವರು ಉಳಿದ 105 ಸ್ಥಾನಗಳಲ್ಲಿ ಸ್ಪರ್ಧಿಸುವುದರೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಎಸ್‌ಪಿ ಕೇವಲ 47 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಮತ್ತು ಕಾಂಗ್ರೆಸ್ ಏಳು ಸ್ಥಾನಗಳನ್ನು ಗೆದ್ದಿದೆ. ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) 19 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: ಅಯೋಧ್ಯೆ ಭೂ ಒಪ್ಪಂದ: ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಮಾಯಾವತಿ, ಪ್ರಿಯಾಂಕಾ ಗಾಂಧಿ ಆಗ್ರಹ

ಉತ್ತರ ಪ್ರದೇಶ: ಕಾಂಗ್ರೆಸ್​​ನ ಎಲ್ಲ ಪ್ರಚಾರ ಕಾರ್ಯಕ್ರಮ ರದ್ದು, ನೋಯ್ಡಾ ಕಾರ್ಯಕ್ರಮ ರದ್ದು ಮಾಡಿದ ಯೋಗಿ ಆದಿತ್ಯನಾಥ

Click on your DTH Provider to Add TV9 Kannada