ವಾಲ್ಮೀಕಿ ಸಮುದಾಯದವರು ಸಿಎಂ ಆಗಬೇಕು ಎಂದ ಸ್ವಾಮೀಜಿ, ಸತೀಶ್ ಜಾರಕಿಹೊಳಿಗೆ ಅರ್ಹತೆ ಇದೆ ಎಂದ ಸಚಿವ ಕೆಎನ್ ರಾಜಣ್ಣ

ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದವರು ಮುಖ್ಯಮಂತ್ರಿ ಆಗಬೇಕು ಅಂತ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಪ್ರಸನ್ನಾನಂದಪುರಿಶ್ರೀ ಹೇಳಿದರೆ, ಇತ್ತ ಅದೇ ಮಠದಲ್ಲಿ ಮಾತನಾಡಿದ ಸಚಿವ ಕೆಎನ್ ರಾಜಣ್ಣ, ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಅರ್ಹತೆ ಇದೆ ಅಂತ ಹೇಳಿದ್ದಾರೆ.

ವಾಲ್ಮೀಕಿ ಸಮುದಾಯದವರು ಸಿಎಂ ಆಗಬೇಕು ಎಂದ ಸ್ವಾಮೀಜಿ, ಸತೀಶ್ ಜಾರಕಿಹೊಳಿಗೆ ಅರ್ಹತೆ ಇದೆ ಎಂದ ಸಚಿವ ಕೆಎನ್ ರಾಜಣ್ಣ
ಪ್ರಸನ್ನಾನಂದಪುರಿ ಶ್ರೀ ಮತ್ತು ಕೆಎನ್ ರಾಜಣ್ಣ
Follow us
|

Updated on:Jun 18, 2023 | 5:30 PM

ದಾವಣಗೆರೆ: ಸಿದ್ದರಾಮಯ್ಯ (Siddaramaiah) ಅವರ ಮುಖ್ಯಮಂತ್ರಿ ಸ್ಥಾನದ ಬಗೆಗಿನ ರಾಜಕೀಯ ಹೇಳಿಕೆಗಳ ನಡುವೆ ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದವರು ಮುಖ್ಯಮಂತ್ರಿ ಆಗಬೇಕು. ಇದಕ್ಕಾಗಿ ನಮ್ಮ ಸಮುದಾಯದ ನಾಯಕರು ಶ್ರಮಿಸಬೇಕಾಗಿದೆ ಅಂತ ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಶ್ರೀ ಹೇಳಿದ್ದಾರೆ. ಅಲ್ಲದೆ, ಇದೇ ಮಠದಲ್ಲಿ ಮಾತನಾಡಿದ ಸಚಿವ ಕೆಎನ್​ ರಾಜಣ್ಣ (KN Rajanna), ಮುಂದೆ ಕರ್ನಾಟಕದ ಸಿಎಂ ಆಗಲು ಸತೀಶ್ ಜಾರಕಿಹೊಳಿಗೆ ಅರ್ಹತೆ ಇದೆ ಅಂತ ಹೇಳಿದ್ದಾರೆ.

ಹಿಂದಿನ ಸರ್ಕಾರ ಎಸ್​ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿದೆ. ಆದರೆ ಎಸ್​ಟಿ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್​ನಲ್ಲಿ ಸೇರಿಸಬೇಕು. ಈ ಬಗ್ಗೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆಯಬೇಕು ಅಂತ ಹೇಳಿದ ಶ್ರೀಗಳು, ಚಿತ್ರದುರ್ಗ ಜಿಲ್ಲೆಯಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ‌ ಆಗಬೇಕು ಎಂದು ಹೇಳಿದರು.

ಇದನ್ನೂ ಓದಿ: Karnataka News live Updates: ಗ್ಯಾರಂಟಿಯಾಗಿ ಹೇಳುತ್ತೇನೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ: ಆರ್​ ಅಶೋಕ್​

ಸಿಎಂ ಆಗುವ ಅರ್ಹತೆ ಸತೀಶ್​ ಜಾರಕಿಹೊಳಿಗೆ ಇದೆ: ಕೆಎನ್ ರಾಜಣ್ಣ

ಮುಂದೆ ರಾಜ್ಯದ ಮುಖ್ಯಮಂತ್ರಿ ಆಗುವ ಅರ್ಹತೆ ಸತೀಶ್​ ಜಾರಕಿಹೊಳಿಗೆ ಇದೆ ಎಂದು ಸಚಿವ ಕೆಎನ್​ ರಾಜಣ್ಣ ಹೇಳಿದ್ದಾರೆ. ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದವರು ಒಮ್ಮೆ ಮುಖ್ಯಮಂತ್ರಿ ಆಗಬೇಕು. ಅಧಿಕಾರ ಸಿಗದೇ ಇದ್ದರೇ ಕಿತ್ತುಕೊಳ್ಳಬೇಕು. ಈಗಲೇ ಡಿಸಿಎಂ ಸ್ಥಾನ‌ ಕೇಳುವ ಯೋಜನೆ ಇತ್ತು, ಆದರೆ ಆಗಿಲ್ಲ ಎಂದರು.

ಮಗು ಅತ್ತರೆ ತಾನೇ ತಾಯಿ ಹಾಲು ಕೊಡುವುದು. ಹಾಗೇ ನ್ಯಾಯಯುತ ವಾದ ಬೇಡಿಕೆಯನ್ನು ಏಕೆ ಕೇಳಬಾರದು, ಕೇಳಿದರೆ ತಪ್ಪೇನಿದೆ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ಪಡೆದುಕೊಂಡು ಸಮಾಜವನ್ನು ಬೆಳವಣಿಗೆ ಸಹಕಾರಿಯಾಗಬೇಕು. ಮುಂದಿನ ದಿನಮಾನಗಳಲ್ಲಿ ನಾವು ಕೂಡ ವಾಲ್ಮೀಕಿ ಸಮುದಾಯದಿಂದ ಸಿಎಂ ಬೇಡಿಕೆ ಇಡುತ್ತೇವೆ‌. ಇದು ಇಡೀ ರಾಜ್ಯದ ಸಮುದಾಯದ ಮಹಾದಾಸೆಯಾಗಿದೆ. ಅದನ್ನು ಬಿಟ್ಟು ನನಗೆ ಮಾಡಿ ಎಂದು ಕೇಳುತ್ತಿಲ್ಲ. ಈ ಅವಧಿಯಲ್ಲಿ ಡಿಸಿಎಂ ಸ್ಥಾನಕ್ಕೆ ಕೂಡ ಒತ್ತಾಯ ಮಾಡುತ್ತೇವೆ ಎಂದರು.

ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಕೆಎನ್ ರಾಜಣ್ಣ

ಮುಂದಿನ ಯಾವುದೇ ಚುನಾವಣೆಗೆ ಸ್ಪರ್ಧಿಸದಿರಲು ಕೆಎನ್ ರಾಜಣ್ಣ ನಿರ್ಧರಿಸಿದ್ದಾರೆ. ನಾನು‌ ಮಾತ್ರ ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ ಅಂತ ಹೇಳಿದ್ದಾರೆ. ಅಲ್ಲದೆ, ಚುನಾವಣೆ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ನಡೆಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಬಿಜೆಪಿ ಪರ ನಟ ಸುದೀಪ್ ಪ್ರಚಾರ ಮಾಡಿದ್ದಕ್ಕೆ ಬೇಸರವಾಯಿತು. ಎಸ್​ಟಿ ಮೀಸಲು ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡಬೇಕಿತ್ತು. ಏಕೆಂದರೆ, ಎಸ್​ಟಿ ಮೀಸಲು ಕ್ಷೇತ್ರದಲ್ಲಿ ಇಬ್ಬರು ವಾಲ್ಮೀಕಿ ಸಮಾಜದವರೇ ಅಭ್ಯರ್ಥಿಗಳು ಇರುತ್ತಾರೆ. ಇರಲಿ ಇನ್ನೂ ಸಣ್ಣ ವಯಸ್ಸು. ಆದರೂ ನಮ್ಮ ಸಮಾಜದವರು ಎಂದು ಅಭಿಮಾನದಿಂದ ನೋಡುತ್ತೇವೆ ಎಂದರು.

ಡಾ.ರಾಜ್ ರಾಜಕೀಯಕ್ಕೆ ಬಂದು ಏನು ಬೇಕಾದರೂ ಆಗಬಹುದಿತ್ತು. ರಾಜಕೀಯದಿಂದ ದೂರ ಇದ್ದಿದ್ದಕ್ಕೆ ದೇವತಾಮನುಷ್ಯ ಎಂದು ಹೇಳುತ್ತಾರೆ. ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ. ಒಂದು ಸಮುದಾಯದ ಅಭ್ಯರ್ಥಿ ಪರ, ವಿರುದ್ಧ ಪ್ರಚಾರ ಮಾಡಿದರೆ ಅ ಸಮುದಾಯದವರೇ ನಿಮ್ಮ ಪರ, ವಿರುದ್ಧ ಆಗುತ್ತಾರೆ. ಹೀಗಾಗಿ ಅದಕ್ಕೆ ಅವಕಾಶ ಕೊಡಬೇಡಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Sun, 18 June 23

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು