AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Poll 2023: ಕಾಂಗ್ರೆಸ್​ನಲ್ಲಿ ಜಾತಿವಾರು ಟಿಕೆಟ್​ ಲಾಬಿ ಶುರು, ಯಾವ ಸಮುದಾಯ ಎಷ್ಟು ಟಿಕೆಟ್​ಗೆ ಬೇಡಿಕೆ?

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಇದರ ಮಧ್ಯೆ ಕಾಂಗ್ರೆಸ್​ನಲ್ಲಿ ಟಿಕೆಟ್​ ಹಂಚಿಕೆಯಲ್ಲಿ ಜಾತಿ ಲೆಕ್ಕಾಚಾರ ಜೋರಾಗಿದೆ. ತಮ್ಮ ಸಮುದಾಯಕ್ಕೆ ಇಂತಿಷ್ಟು ಟಿಕೆಟ್​ ನೀಡಬೇಕೆಂದು ಬೇಡಿಕೆ ಇಟ್ಟಿವೆ.

Karnataka Assembly Poll 2023: ಕಾಂಗ್ರೆಸ್​ನಲ್ಲಿ ಜಾತಿವಾರು ಟಿಕೆಟ್​ ಲಾಬಿ ಶುರು, ಯಾವ ಸಮುದಾಯ ಎಷ್ಟು ಟಿಕೆಟ್​ಗೆ ಬೇಡಿಕೆ?
ಕಾಂಗ್ರೆಸ್​ ಪಕ್ಷದ ಧ್ವಜ (ಸಾಂದರ್ಭಿಕ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on:Mar 09, 2023 | 3:55 PM

Share

ಬೆಂಗಳೂರು:  ವಿಧಾನಸಭೆ ಚುನಾವಣೆಗಾಗಿ (Kazrnataka Assembly Elections 2023) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್‌ನಲ್ಲಿ (Congress)ಜಾತಿವಾರು ಟಿಕೆಟ್​ ಲಾಬಿ ಶುರುವಾಗಿದೆ. ತಮ್ಮ-ತಮ್ಮ ಸಮುದಾಯಕ್ಕೆ ಹೆಚ್ಚು ಟಿಕೆಟ್​ ನೀಡಬೇಕೆಂದು ನಾಯಕರುಗಳು ಒತ್ತಡ ಹೇರಲಾರಂಭಿಸಿದ್ದಾರೆ. ಜಾತಿವಾರು ಟಿಕೆಟ್ ಬೇಡಿಕೆ ಕಳೆದ ಬಾರಿಗಿಂತ ಈ ಸಲ ಹೆಚ್ಚಾಗಿದೆ. ಜಾತಿ ನಾಯಕರ ಸಂಖ್ಯಾ ಬಲದಿಂದ ಸಾಮಾಜಿಕ ನ್ಯಾಯದ ಹೆಸರಲ್ಲಿ ಹೆಚ್ಚುವರಿ ಟಿಕೆಟ್ ಬೇಡಿಕೆ ಹೆಚ್ಚುತ್ತಿದ್ದು, ಕಾಂಗ್ರೆಸ್​​ ಹೈಕಮಾಂಡ್​ಗೆ ದೊಡ್ಡ ತಲೆಬಿಸಿ ತಂದಿಟ್ಟಿದೆ. ಹಾಗಾದ್ರೆ, ಯಾವೆಲ್ಲ ಸಮುದಾಯಗಳು ಎಷ್ಟೆಷ್ಟು ಟಿಕೆಟ್​ಗೆ ಬೇಡಿಕೆ ಇಟ್ಟಿವೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.​

ಇದನ್ನೂ ಓದಿ: Karnataka Assembly Poll 2023: ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ, ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ 120 ಕ್ಷೇತ್ರಗಳ ಟಿಕೆಟ್​ ಅಂತಿಮ

ಕನಿಷ್ಠ 70 ಟಿಕೆಟ್​ಗೆ ಬೇಡಿಕೆ ಇಟ್ಟ ವೀರಶೈವ ಲಿಂಗಾಯತ

ವೀರಶೈವ ಲಿಂಗಾಯತ ಕರ್ನಾಟಕದಲ್ಲಿ ಪ್ರಬಲ ಸಮುದಾಯ ಎನಿಸಿಕೊಂಡಿದೆ. ಕೆಲ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಯಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ 70 ಟಿಕೆಟ್​ ತಮ್ಮ ಸಮುದಾಯದ ಅಭ್ಯರ್ಥಿಗಳಿಗೆ ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮನವಿ ಮಾಡಿದೆ. ಕಳೆದ ಅಂದರೆ 2028ರ ವಿಧಾನಸಭೆ ಚುನಾವಣೆಯಲ್ಲಿ 40ಕ್ಕೂ ಹೆಚ್ಚು ಟಿಕೆಟ್​​ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ನೀಡಲಾಗಿತ್ತು. ಇದೀಗ ಮಹಾಸಭೆಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾಗಿ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಲಿಂಗಾಯತ ಸಮುದಾಯದ ನಾಯಕರು ಬೆಂಗಳೂರಿನಲ್ಲಿ ಸಭೆ ಮಾಡಿದ್ದು, ಈ ಬಾರಿ ಕನಿಷ್ಠ 70 ಟಿಕೆಟ್​ ಲಿಂಗಾಯತರಿಗೆ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಈ ಬಗ್ಗೆ ಲಿಂಗಾಯತ ನಾಯಕರು ರಾಜ್ಯ ಚುನಾವಣೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿದ್ದಾರೆ.

ಕುರುಬ ಸಮುದಾಯದಿಂದ 40 ಟಿಕೆಟ್​ಗೆ ಬೇಡಿಕೆ

ಇನ್ನು ಲಿಂಗಾಯತ ಟಿಕೆಟ್ ಬೇಡಿಕೆ ಬೆನ್ನಲ್ಲೇ ಕುರುಬ ಸಮುದಾಯ ಕೂಡಾ ತಮ್ಮ ಸಮುದಾಯಕ್ಕೆ 40 ಟಿಕೆಟ್​ ಬೇಡಿಕೆ ಇಟ್ಟಿದೆ. ಈ ಬಗ್ಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಪತ್ರಿಕಾಗೋಷ್ಠಿ ನಡೆಸಿ, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 40 ಕ್ಷೇತ್ರಗಳಲ್ಲಿ ಕುರುಬ ಸಮುದಾಯದಕ್ಕೆ ಟಿಕೆಟ್ ನೀಡಬೇಕು ಮನವಿ ಮಾಡಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕುರುಬ ಸಮುದಾಯದ 20 ಜನರಿಗೆ ಟಿಕೆಟ್ ನೀಡಿತ್ತು. 2018 ರಲ್ಲಿ 8 ಮಂದಿ ಕುರುಬ ಸಮುದಾಯದ ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. 150 ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದು, ಈ ನಿಟ್ಟಿನಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆನ್ನುವುದು ಕುರುಬ ಸಮುದಾಯದ ಬೇಡಿಕೆ ಆಗಿದೆ.

ಹೆಚ್ಚಿನ ಟಿಕೆಟ್​ಗಾಗಿ ಸಿದ್ದು ಭೇಟಿಯಾದ ಮುಸ್ಲಿಂ ಸಮುದಾಯ

ಇನ್ನು ಮುಸ್ಲಿಮ್ ನಾಯಕರು ಸಹ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಸಮುದಾಯಕ್ಕೆ ಹೆಚ್ಚು ಟಿಕೆಟ್​ ನೀಡಬೇಕೆಂದು ಮನವಿ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಈ ಬಾರಿ ಕನಿಷ್ಠ 25 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ನಿನ್ನೆ(ಮಾ.08) ರಾತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮುಸ್ಲಿಂ ಮೌಲ್ವಿಗಳು ಸಹ ಭೇಟಿ ಮಾಡಿ ತಮ್ಮ ಸಮುದಾಯಕ್ಕೆ ಹೆಚ್ಚು ಟಿಕೆಟ್​​ ನೀಡುವಂತೆ ಮನವಿ ಮಾಡಿದ್ದಾರೆ. ಶಾಸಕರಾದ ಜಮೀರ್ ಅಹಮ್ಮದ್, ರಿಜ್ವಾನ್ ಅರ್ಷದ್, ಅಬ್ದುಲ್ ಜಬ್ಬಾರ್ ಖಾನ್ ಮತ್ತು ಮೌಲ್ವಿಗಳು ನಿನ್ನೆ(ಮಾ.08) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಜೊತೆ ಸಭೆ ಮಾಡಿದ್ದು, ಟಿಕೆಟ್ ಬೇಡಿಕೆ ಸಂಬಂಧ ಚರ್ಚೆ ಮಾಡಿದ್ದಾರೆ.

 ಯಾವ ಸಮುದಾಯ ಎಷ್ಟು ಟಿಕೆಟ್​ಗೆ​ ಬೇಡಿಕೆ?

  • ವೀರಶೈವ ಲಿಂಗಾಯತ – 70
  • ಪರಿಶಿಷ್ಟ ಜಾತಿ (ಬಲ-ಎಡ)-30
  • ಪರಿಶಿಷ್ಟ ಪಂಗಡ- 20
  • ಒಕ್ಕಲಿಗ-48
  • ಒಬಿಸಿ-52
  • ಮುಸ್ಲಿಂ-25

ಕಳೆದ ಚುನಾವಣೆಯಲ್ಲಿ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್​?

  • ಲಿಂಗಾಯತ-47
  • ಒಕ್ಕಲಿಗ 46
  • ಒಬಿಸಿ 50
  • ಮುಸ್ಲಿಂ 17
  • ಕ್ರಿಶ್ಚಿಯನ್ 2
  • ಜೈನ್​ 2
  • ಬ್ರಾಹ್ಮಣ 6
  • ಪರಿಶಿಷ್ಟ ಜಾತಿ (ಬಲ-ಎಡ) 14, 9
  • ಪರಿಶಿಷ್ಟ ಪಂಗಡ 17

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:51 pm, Thu, 9 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ