ಸಿಎಂ ಸಿದ್ದರಾಮಯ್ಯ ಮಂಡಿಸಿದ 14ನೇ ಬಜೆಟ್ಗೆ ವೀರೇಂದ್ರ ಹೆಗ್ಗಡೆ ಅಭಿನಂದನೆ: ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ
ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ದಾಖಲೆಯ 14ನೇ ರಾಜ್ಯ ಬಜೆಟ್ನ್ನು ಮಂಡಿಸಿದ್ದಾರೆ. ಸದ್ಯ ಈ ಕುರಿತಾಗಿ ಸಿದ್ಧರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ ಪತ್ರ ಬರೆಯುವ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ದಾಖಲೆಯ 14ನೇ ರಾಜ್ಯ ಬಜೆಟ್ನ್ನು ಮಂಡಿಸಿದ್ದಾರೆ. ಸದ್ಯ ಈ ಕುರಿತಾಗಿ ಸಿದ್ಧರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ (Veerendra Heggade) ಪತ್ರ ಬರೆಯುವ ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿದ್ದಾರೆ. ತಮ್ಮ ಹೆಸರಿನಲ್ಲಿ ಮಂಜುನಾಥೇಶ್ವರನಿಗೆ ಮಹಿಳೆಯರು ಸೇವೆ ಮತ್ತು ಕಾಣಿಕೆಗಳನ್ನ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ.
ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ, ಪ್ರೋತ್ಸಾಹ ನೀಡಿರುವುದು ಸಮುದಾಯಕ್ಕೆ ಸಂತೋಷ ತಂದಿದೆ. ಅವಕಾಶ ಸಿಕ್ಕಾಗ ಮಂಜುನಾಥ ಸ್ವಾಮಿಯ ದರ್ಶನ ಪಡೆಯುವಂತೆ ಅಪೇಕ್ಷಿಸಿದ್ದಾರೆ.
ಇದನ್ನೂ ಓದಿ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ: ಸಿಎಂ ಸಿದ್ಧರಾಮಯ್ಯ
ಸಿದ್ಧರಾಮಯ್ಯಗೆ ಬರೆದ ಪತ್ರದಲ್ಲಿ ಏನಿದೆ?
ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ: Mukyamanthri Chandru: ಎಎಪಿ ಪಕ್ಷದ ನೂತನ ರಾಜ್ಯಾಧಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ
ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆ. ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಪತ್ರ ಬರೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.