ಯತೀಂದ್ರನನ್ನು ಎಂಎಲ್​​ಸಿ ಮಾಡ್ತೀವಿ ಅಂತ ವರಿಷ್ಠರು ಹೇಳಿದ್ದರು: ಸಿದ್ದರಾಮಯ್ಯ

Vidhan Parishad Election: ವರುಣ ಕ್ಷೇತ್ರ ತಂದೆಗೆ ಬಿಟ್ಟು ಕೊಟ್ಟ ಮೇಲೆ ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್​ ನೀಡಲಾಗುತ್ತದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿತ್ತು. ಆದರೆ ಇದು ಹುಸಿಯಾಗಿದೆ. ಇದೀಗ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಯತೀಂದ್ರನನ್ನು ಎಂಎಲ್​​ಸಿ ಮಾಡ್ತೀವಿ ಅಂತ ವರಿಷ್ಠರು ಹೇಳಿದ್ದರು: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:May 24, 2024 | 2:46 PM

ಮೈಸೂರು, ಮೇ 24: ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah), ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ವರುಣ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಹೀಗಾಗಿ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ. ಆದರೆ ಯತೀಂದ್ರ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಪ್ರಶ್ನೆ ಮೂಡಿತ್ತು. ಲೋಕಸಭೆ ಚುನಾವಣೆಯಲ್ಲಿ (Lok Sabha Election) ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್​ ನೀಡಲಾಗುತ್ತದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿತ್ತು. ಆದರೆ ಇದು ಹುಸಿಯಾಗಿದೆ. ಇದೀಗ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. “ಯತೀಂದ್ರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್​​ನವರು ಎಂಎಲ್​ಸಿ ಮಾಡ್ತೇನೆ ಅಂದಿದ್ದರು. ಹೈಕಮಾಂಡ್​ ಏನು ಮಾಡುತ್ತೇವೆ ಅಂದಿದ್ದಾರೆ. ಕಾದು ನೋಡಬೇಕು” ಎಂದು ಹೇಳಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಕೋಲಾರದಿಂದ ಸ್ಪರ್ಧಿಸಬೇಕು ಅಂದುಕೊಂಡಿದ್ದೆ. ಇಲ್ಲ ನೀವು ವರುಣಾದಿಂದ ಸ್ಪರ್ಧೆ ಮಾಡಿ ಅಂತ ಹೇಳಿದರು. ನೀನು ನಿಮ್ಮ ಅಪ್ಪನಿಗೆ ಕ್ಷೇತ್ರ ಬಿಟ್ಟು ಕೊಡಿ ಅಂತ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು. ವರಿಷ್ಠರ ಮಾತಿಗೆ ತಲೆ ಬಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಎಂಎಲ್​ಸಿ ಮಾಡುತ್ತೇನೆ ಅಂತ ವರಿಷ್ಠರು ಹೇಳಿದ್ದರು. ನೋಡಬೇಕು ಏನು ಮಾಡುತ್ತಾರೆ ಎಂದು ಹೇಳಿದರು.

ನಮ್ಮ ಸುತ್ತಮುತ್ತಲಿನ 40 ಪೋನ್​ಗಳನ್ನು ಸರ್ಕಾರ ಟ್ಯಾಪ್​ ಮಾಡಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು. ಪ್ರಜ್ವಲ್​ ರೇವಣ್ಣ ಅವರ ಪ್ರಕರಣವನ್ನು ಡೈವರ್ಟ್​ ಮಾಡಲು ಕುಮಾರಸ್ವಾಮಿ ಅವರು ಏನೇನೋ ಹೇಳುತ್ತಿದ್ದಾರೆ. ಕುಮಾರಸ್ವಾಮಿ ಈ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದರು.

ಸಂಸದ ಪ್ರಜ್ವಲ್​ ರೇವಣ್ಣ ಅವರ ಪಾಸ್​​ಪೋರ್ಟ್​ ರದ್ದು ಮಾಡುವಂತೆ ನಾನು ಪ್ರಧಾನಿ ಮೋದಿಯವರಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ. ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನನ್ನ ಪತ್ರಕ್ಕಂತೂ ಈವರೆಗೂ ಪ್ರಧಾನಿ ಉತ್ತರವನ್ನ ಕೊಟ್ಟಿಲ್ಲ. ಒಬ್ಬ ಸಿಎಂ ಪತ್ರ ಬರೆದಾಗ ಉತ್ತರ ಕೊಡುತ್ತಾರೆಂದು ವಿಶ್ವಾಸವಿದೆ. ನೋಡೋಣ ಎರಡನೇ ಪತ್ರಕ್ಕಾದರೂ ಉತ್ತರ ಕೊಡುತ್ತಾರಾ ಅಂತ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಬಾರಿಗೆ ತಮ್ಮ ಒನ್‌ಸೈಡ್ ಲವ್‌ ಸ್ಟೋರಿ ರಿವೀಲ್ ಮಾಡಿದ ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳಿವೆ. ಈ ವಿಚಾರವನ್ನು ಡೈವರ್ಟ್ ಮಾಡಲು ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್​ ಅವರ ಹೆಸರು ಹೇಳುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣರನ್ನು ನಾನು ಅಪರಾಧಿ ಅಂತ ಎಲ್ಲೂ ಹೇಳಿಲ್ಲ. ನಾನು ಸಹ ಆರೋಪಿ ಅಂತಲೇ ಹೇಳುತ್ತಿರುವುದು ಎಂದು ತಿರುಗೇಟು ನೀಡಿದರು.

ಹೆಚ್​ಡಿ ದೇವೇಗೌಡರ ಕುಟುಂಬದಿಂದ ಪ್ರಜ್ವಲ್ ಹೊರಹಾಕುವ ವಿಚಾರ‌ವಾಗಿ ಮಾತನಾಡಿದ ಅವರು, ಪ್ರಜ್ವಲ್​ ರೇವಣ್ಣ ದೇವೇಗೌಡರು ಹಾಗೂ ಅವರ‌ ಮನೆಯವರಿಗೆ ಗೊತ್ತಿಲ್ಲದೇ ಮನೆಯಿಂದ ಹೋಗಿದ್ದಾನಾ? ಪ್ರಜ್ವಲ್ ಅವರ ಕುಟುಂಬದವರ ಸಂಪರ್ಕದಲ್ಲಿ ಇಲ್ಲವಾ? ಮೊದಲಿನಿಂದ ಪ್ರಜ್ವಲ್ ನನ್ನ ಸಂಪರ್ಕದಲ್ಲಿ ಇಲ್ಲ. ಪ್ರಜ್ವಲ್ ಪರ ಪ್ರಚಾರಕ್ಕೆ ಹೋದಾಗ ನನ್ನ ಮಗ ಎಂದಿದ್ದರು. ಆ ಹೇಳಿಕೆ ಅವರ ಸಂಪರ್ಕದಲ್ಲಿ ಇದ್ದ ಹಾಗೆ ಅಲ್ವಾ? ಪ್ರಜ್ವಲ್ ವಿಚಾರ ಅವರ ಕುಟುಂಬಕ್ಕೆ ಎಲ್ಲವೂ ಗೊತ್ತಿದೆ ಎಂದು ಟಾಂಗ್​ ಕೊಟ್ಟರು.

ಲೋಕಸಭೆ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡನೆ ಆಗುತ್ತದೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ನನ್ನ ಬಳಿ ಬಂದ ನೋಡಿಕೊಳ್ಳುತ್ತೇನೆ: ಖರ್ಗೆ

ವಿಧಾನ್​ ಪರಿಷತ್ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ಬಗ್ಗೆ ರಾಜ್ಯ ನಾಯಕರು ನೋಡಿಕೊಳ್ಳುತ್ತಾರೆ. ಇಲ್ಲಿಂದ ನನ್ನ ಬಳಿ ಬಂದ ಮೇಲೆ ನಾನು ನೋಡಿಕೊಳ್ಳುತ್ತೆನೆ ಎಂದು ಎಐಸಿಸಿ ಮಲ್ಲಿಕಾರ್ಜು ಖರ್ಗೆ ಹೇಳಿದರು.

ಮೈಲಾರಿ ಹೋಟೆಲ್​ನಲ್ಲಿ ದೋಸೆ ಸವಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಾ. ಹೆಚ್​​.ಸಿ‌.ಮಹದೇವಪ್ಪ, ಕೆ.ವೆಂಕಟೇಶ್, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಮುಡಾ ಅಧ್ಯಕ್ಷ ಮರಿಗೌಡ ಮೈಸೂರಿನ ಮೈಲಾರಿ ಹೋಟೆಲ್​ನಲ್ಲಿ ಬೆಳಗಿನ ತಿಂಡಿ ಸೇವಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:31 pm, Fri, 24 May 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?