ಚುನಾವಣೆ ಹೊಸ್ತಿಲಲ್ಲೇ ಮೋದಿಯನ್ನು ಭೇಟಿಯಾದ ಸ್ಪೀಕರ್​ ಕಾಗೇರಿ: ರಾಜ್ಯ ಬಿಜೆಪಿಯಲ್ಲಿ ಸಂಚಲನ

| Updated By: ರಮೇಶ್ ಬಿ. ಜವಳಗೇರಾ

Updated on: Feb 07, 2023 | 5:16 PM

ವಿಧಾನಸಭೆ ಸ್ಫೀಕರ್ ಕಾಗೇರಿ ಇಂದು (ಫೆ.7) ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿದ್ದಾರೆ.

ಚುನಾವಣೆ ಹೊಸ್ತಿಲಲ್ಲೇ ಮೋದಿಯನ್ನು ಭೇಟಿಯಾದ ಸ್ಪೀಕರ್​ ಕಾಗೇರಿ: ರಾಜ್ಯ ಬಿಜೆಪಿಯಲ್ಲಿ ಸಂಚಲನ
ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ
Follow us on

ದೆಹಲಿ/ ಬೆಂಗಳೂರು: ಚುನಾವಣೆ ಸಮೀಪಿಸುತ್ತಿದೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಅದರಲ್ಲೂ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಬೀಡುಬಿಟ್ಟು ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಮಾಡುತ್ತಿದ್ದಾರೆ. ಇದರ ಮಧ್ಯೆ ವಿಧಾನಸಭೆ ಸ್ಫೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಇಂದು (ಫೆ.7) ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಗೇರಿ ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಹೌದು…ಕರ್ನಾಟಕ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು (ಫೆಬ್ರವರಿ 07) ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. (ಫೆ.6) ಅಷ್ಟೇ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ವಾಪಸ್ ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಇಂದು ವಿಧಾನಸಭೆ ಸ್ಪೀಕರ್​​ ವಿಶ್ವೇಶ್ವರ ಹೆಗಡೆ ಕಾಗೇರಿ ದೆಹಲಿಗೆ ಹೋಗಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದ ಕುತೂಹಲ ಮೂಡಿಸಿದೆ.

ಇನ್ನು ಈ ಭೇಟಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಬದಲಾಗಿ ಇದು ಸೌಹಾರ್ದಯುತ ಭೇಟಿ ಎಂದು  ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಒಂದಂತೂ ಸತ್ಯ ಕಾಗೇರಿ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯ ಬಿಜೆಪಿಯಲ್ಲಿ ನಾನಾ ಆಯಾಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

Published On - 4:28 pm, Tue, 7 February 23