Vijaya Sankalp Yatra: ನಡ್ಡಾ ಕಾರ್ಯಕ್ರಮಕ್ಕೆ ಗೈರಾದ ವಿ ಸೋಮಣ್ಣ, ಕುತೂಹಲ ಮೂಡಿಸಿತು ಸಚಿವರ ನಡೆ

ಬಿಜೆಪಿಯ ವಿಜಯಸಂಕಲ್ಪ ಯಾತ್ರೆಗೆ ಸ್ವತಃ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಗಮಿಸಿದ್ದರೂ ಜಿಲ್ಲೆಯ ಉಸ್ತುವಾರಿ ಸಚಿವ ವಿ.ಸೋಮಣ್ಣ ಗೈರಾಗಿದ್ದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ.

Vijaya Sankalp Yatra: ನಡ್ಡಾ ಕಾರ್ಯಕ್ರಮಕ್ಕೆ ಗೈರಾದ ವಿ ಸೋಮಣ್ಣ, ಕುತೂಹಲ ಮೂಡಿಸಿತು ಸಚಿವರ ನಡೆ
ಸಚಿವ ವಿ ಸೋಮಣ್ಣ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 01, 2023 | 7:31 PM

ಚಾಮರಾಜನಗರ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿಯ (bjp) ವಿಜಯಸಂಕಲ್ಪ ಯಾತ್ರೆಗೆ (Vijaya Sankalp Yatra) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿದ್ದಾರೆ. ಆದರೆ ಜಿಲ್ಲೆಯ ಉಸ್ತುವಾರಿ ಸಚಿವ ಆಗಿರುವ ವಿ.ಸೋಮಣ್ಣ ಮಾತ್ರ ಯಾತ್ರೆಗೆ ಗೈರಾಗಿದ್ದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ. ಸ್ವತಃ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಂದರೂ, ಯಾತ್ರೆಗೆ ಆಗಮಿಸದ ಸಚಿವ ವಿ.ಸೋಮಣ್ಣ ನಡೆ ಸದ್ಯ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆ ಇಂದಿನಿಂದ ಆರಂಭವಾಗಿದ್ದು, 20ರವರೆಗೆ ನಡೆಯಲಿದೆ.

ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಕೂಡ ಗೈರು

ಸಚಿವ ಸೋಮಣ್ಣ ನಂತರ ಕೊಳ್ಳೇಗಾಲ ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಕೂಡ ಯಾತ್ರೆಗೆ ಗೈರಾಗಿದ್ದಾರೆ. ಈಗಾಗ್ಲೇ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕ್ಷೇತ್ರದಲ್ಲಿ ಮಾತು ಕೇಳಿಬಂದಿತ್ತು. ಇದೀಗ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಭಾಗಿಯಾದ್ರು ಸಮಾವೇಶದಿಂದ ದೂರವುಳಿದ್ದಾರೆ. ಪ್ರಜಾಧ್ವನಿ ಯಾತ್ರೆ ವೇಳೆ ಜಿಎನ್ ನಂಜುಂಡಸ್ವಾಮಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಡಿ.ಕೆ. ಶಿವಕುಮಾರ ಹೇಳಿದ್ದರು.

ಅರಣ್ಯ ಕಾಯ್ದೆಯಡಿ ಬೇಡಗಂಪಣ, ಸೋಲಿಗ ಸಮುದಾಯದವರಿಗೆ ಜಮೀನು ನೀಡುವುದಾಗಿ ಘೋಷಿಸಿದ ಸಿಎಂ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಬಹಳ ವರ್ಷಗಳಿಂದ ಬೆಟ್ಟದಲ್ಲಿ ಬೇಡಗಂಪಣ, ಸೋಲಿಗರು ಸಮುದಾಯದವರು ವಾಸಿಸುತ್ತಿದ್ದಾರೆ. ಆದರೆ ಅವರಿಗೆ ಜಮೀನಿನ ಹಕ್ಕಿಲ್ಲ. ಅರಣ್ಯ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ಆರೋಗ್ಯ ಸಮಸ್ಯೆ ಆದರೆ ಪರಿಹಾರವಾಗಿ ಪಿಎಚ್​ಸಿ ಸ್ಥಾಪನೆ ಮಾಡುತ್ತೇವೆ. ಸ್ತ್ರೀಶಕ್ತಿ ಸಂಘಕ್ಕೆ ವಿಶೇಷ ಅನುದಾನ ನೀಡುತ್ತಿದ್ದೇವೆ. ಬೇಡಗಂಪಣ ಸಮುದಾಯ ಎಸ್​ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಸಿಗಲಿ ಎಂದು ಮಾದಪ್ಪನಿಗೆ ನಡ್ಡಾ ಅವರು ಸಂಕಲ್ಪ ಮಾಡಿದ್ದಾರೆ ಎಂದರು.

ಇದನ್ನೂ ಓದಿ: Vijaya Sankalp Yatra: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ; ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ನಡ್ಡಾ ಹೇಳಿಕೆ

ತಳಸಮುದಾಯದ ದ್ರೌಪದಿ ಮುರ್ಮುಗೆ ಬಿಜೆಪಿ ಉನ್ನತ ಸ್ಥಾನ ನೀಡಿದೆ. ರೈತರಿಗೆ ವಿಶೇಷ ಅನುದಾನ, ಬಾಲಕಿಯರಿಗೆ ಉಚಿತ ಶಿಕ್ಷಣ ನೀಡುತ್ತೇವೆ. ಮಾದಪ್ಪನ ಆಶೀರ್ವಾದದೊಂದಿಗೆ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಿದ್ದು, ಯಾತ್ರೆ ಮುಗಿಯುವವರೆಗೆ ಬಿಜೆಪಿ ದಿಗ್ವಿಜಯ ಸಾಧಿಸುತ್ತೆ ಎಂದು ಹೇಳಿದರು.

ಕಾಂಗ್ರೆಸ್​ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ

ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಬೇಕು. ನಾವು ಅಧಿಕಾರಕ್ಕೆ ಬಂದು ಚಾಮರಾಜನಗರ ಅಭಿವೃದ್ಧಿ ಮಾಡಿದ್ದೇವೆ. ನಮ್ಮ ಸರ್ಕಾರ ಜನರಿಗೆ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಎಲ್ಲಾ ವರ್ಗದ ಜನರಿಗೂ‌ ನ್ಯಾಯ ಒದಗಿಸಿದ್ದೇವೆ. ಇನ್ನೊಂದು ವಾರದಲ್ಲಿ ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ಯಾಕೇಜ್ ನೀಡ್ತೇನೆ ಎಂದರು.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಗೆದ್ದರೆ ಅವರು ಹೇಳಿದಂತೆ ಕೇಳುತ್ತೇನೆ; ಕೆಎಸ್​​ ಈಶ್ವರಪ್ಪ

ಭ್ರಷ್ಟಾಚಾರದ ಗಂಗೋತ್ರಿ ಎಂದರೆ ಕಾಂಗ್ರೆಸ್. ಆ ಭಾಗ್ಯ ಈ ಭಾಗ್ಯ ಎಂದು ಎಲ್ಲಾ ಕಡೆ ಭ್ರಷ್ಟಾಚಾರ ‌ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಚಾಮರಾಜನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡಲಿಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಿರಿ. BSY ಕಟ್ಟಿರುವ ಭವ್ಯ ಕರ್ನಾಟಕವನ್ನು ನವ ಕರ್ನಾಟಕ ಮಾಡೋಣ. ಚಂಗಡಿ ಗ್ರಾಮದ ಪುನರ್ವಸತಿ ಕಾರ್ಯದ ಯೋಜನೆ ಸಿದ್ಧವಾಗಿದೆ. ಕೆಲವೇ ದಿನಗಳಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು.

BSY ಕೊಂಡಾಡಿದ ಸಿಎಂ ಬೊಮ್ಮಾಯಿ

ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಉಚಿತ ವಿದ್ಯುತ್​ ತಂದಿದ್ದರು. ನೆರೆ ಸಂದರ್ಭದಲ್ಲಿ ಪ್ರವಾಸ ಮಾಡಿ ಪರಿಹಾರ ಘೋಷಣೆ ಮಾಡಿದರು. ಭಾಗ್ಯಲಕ್ಷ್ಮೀ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಜಾರಿಗೆ ತಂದರು. ಬಿಎಸ್​ವೈ ಸಿಎಂ ಆಗಿದ್ದಾಗ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ಯಡಿಯೂರಪ್ಪರನ್ನು ಸಿಎಂ ಬೊಮ್ಮಾಯಿ ಕೊಂಡಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:24 pm, Wed, 1 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ