AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಪ್ಪನವರ್​ಗೆ ನಿಗಮ ಮಂಡಳಿ ಸಿಕ್ಕರೂ ಅಧಿಕಾರ ವಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಕಾರಣವೇನು?

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಶಾಸಕ ವಿಜಯಾನಂದ ಕಾಶಪ್ಪನವರ್​, ಕ್ರೀಡಾ ಪ್ರಾಧಿಕಾರದ ಬೈಲಾ ಬದಲಾವಣೆ ಆದ ಮೇಲೆ ನಾನು ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಧ್ಯ. ಬೈಲಾ ಬದಲಾಗದಿದ್ದರೆ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ.

ಕಾಶಪ್ಪನವರ್​ಗೆ ನಿಗಮ ಮಂಡಳಿ ಸಿಕ್ಕರೂ ಅಧಿಕಾರ ವಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಕಾರಣವೇನು?
ವಿಜಯಾನಂದ ಕಾಶಪ್ಪನವರ್
ಪ್ರಸನ್ನ ಗಾಂವ್ಕರ್​
| Edited By: |

Updated on: Jan 31, 2024 | 7:12 PM

Share

ಬೆಂಗಳೂರು, ಜನವರಿ 31: ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar)​ ಅವರಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾ (ನಿಬಂಧನೆ ತಿದ್ದುಪಡಿ) ದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ. ಸದ್ಯ ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಶಾಸಕ ವಿಜಯಾನಂದ ಕಾಶಪ್ಪನವರ್​, ಕ್ರೀಡಾ ಪ್ರಾಧಿಕಾರದ ಬೈಲಾ ಬದಲಾವಣೆ ಆದ ಮೇಲೆ ನಾನು ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಧ್ಯ. ಬೈಲಾ ಬದಲಾಗದಿದ್ದರೆ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಬೈಲಾ ಬದಲಾದರೆ ನಾನು ಅಧ್ಯಕ್ಷ ಆಗುತ್ತೇನೆ: ಶಾಸಕ ವಿಜಯಾನಂದ ಕಾಶಪ್ಪನವರ್

ಈಗ ಅಲ್ಲಿ ಅಧ್ಯಕ್ಷರು ಸಚಿವರೇ ಇದ್ದಾರೆ. ಬೈಲಾ ಬದಲಾದರೆ ನಾನು ಅಧ್ಯಕ್ಷ ಆಗುತ್ತೇನೆ, ಹಾಗಾದರೆ ಮಾತ್ರ ಆ ಸ್ಥಾನ ಪಡೆಯುತ್ತೇನೆ. ಇಲ್ಲದೇ ಹೋದರೆ ನಾನು ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಆಗುವುದಿಲ್ಲ. ನಾನು ಶಾಸಕನಾಗಿಯೇ ಸಂತೋಷದಿಂದ ಇರುತ್ತೇನೆ. ಸಣ್ಣ ಪುಟ್ಟ ತೊಂದರೆ ಆಗಿಯೇ ಆಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ:  ಲಿಂಗಾಯತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಬೇಕು, ನಾನೂ ಸಚಿವ ಸ್ಥಾನದ ಆಕಾಂಕ್ಷಿ: ವಿಜಯಾನಂದ ಕಾಶಪ್ಪನವರ್

ನಮ್ಮ ಕುಟುಂಬದ್ದು ಸಮಸ್ಯೆ ನಾವೇ ಬಗೆಹರಿಸಿಕೊಳ್ಳಲು ರೆಡಿ ಇದ್ದೀವಲ್ಲ. ಬೇರೆ ಹೊರಗಡೆಯವರದ್ದಲ್ಲ ಇದು. ನಮ್ಮ ಮನೆಯೊಳಗೇ ನಮ್ಮ ನಾಯಕರೇ ಮಾಡಿದ ನಿರ್ಧಾರ. ನಮ್ಮವರೇ ಸರಿ ಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಕಾಯುತ್ತೇನೆ. ನನ್ನನ್ನು ಸಚಿವನನ್ನಾಗಿಯೇ ಮಾಡಿ ಎಂದು ಸಿಎಂಗೆ ಹೇಳಿದ್ದೆ. ಈಗ ತಗೋ ಅಂತ ಸಿಎಂ ಹೇಳಿದ ಮೇಲೆ ಭರವಸೆ ಇಟ್ಟಿದ್ದೇನೆ. ಈ ಜಗತ್ತಲ್ಲಿ ಯಾರಿಗೆ ಸಮಾಧಾನ ಇದೆ ಹೇಳಿ? ಸಚಿವರಾಗಬೇಕು ಅಂದುಕೊಂಡವರಿಗೆ ನಿಗಮ ಮಂಡಳಿ ಕೊಟ್ಟರೆ ಸಮಾಧಾನ ಮಾಡುವುದಕ್ಕಾಗತ್ತಾ ಎಂದು ಪ್ರಶ್ನಿಸಿದ್ದಾರೆ.

ಅದನ್ನು ಸಮಯವೇ ನಿರ್ಧಾರ ಮಾಡುತ್ತದೆ

ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರ ಈಗ ಹೇಳಲು ಸಾಧ್ಯವಿಲ್ಲ. ಅದನ್ನು ಸಮಯವೇ ನಿರ್ಧಾರ ಮಾಡುತ್ತದೆ. ಈಗಲೇ ಮಾತನಾಡಿದರೆ ಈ ಸಮಯದಲ್ಲಿ ಹೇಳಿದರೆ ಅದು ಬಹಳ ಮುಂಚಿತ ಆಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಮಂತ್ರಿ ಸ್ಥಾನ ಈಗ ಸಿಕ್ಕಿಲ್ಲ, ಆದರೆ ಮುಂದೆ ಖಂಡಿತ ಸಿಗಲಿದೆ: ವಿಜಯಾನಂದ್ ಕಾಶಪ್ಪನವರ್, ಶಾಸಕ

ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಮನಸ್ಸಿನಲ್ಲಿಯೂ ಇದೆ. ಖಂಡಿತವಾಗಿಯೂ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ. ಎರಡು ವರ್ಷದ ನಂತರವೂ ಸಚಿವರನ್ನಾಗಿ ಮಾಡಬಹುದು. ಎರಡು ವರ್ಷದ ನಂತರ ಯಾಕೆ ಮಂತ್ರಿ ಆಗಬಾರದ? ಅರ್ಹತೆ ಇಲ್ವಾ ನಮ್ಮತ್ರ ಎಂದು ಪ್ರಶ್ನಿಸಿದರು.

ನಮಗೆ ವಿಶ್ವಾಸ ಇದೆ ನಮ್ಮ ನಾಯಕರ ಮೇಲೆ ವಿಶ್ವಾಸವಿದೆ. ಕೆಲವೊಂದಿಷ್ಟು ದಿನ ಆದ ಮೇಲೆ ಸಚಿವ ಸ್ಥಾನ ನೀಡಬಹುದು. ಒಂದು ವರ್ಷ ಮಂತ್ರಿ ಆಗುತ್ತೇನೋ, 2 ವರ್ಷ ಮಂತ್ರಿ ಆಗುತ್ತೇನೋ ಒಟ್ಟಿನಲ್ಲಿ ಇದೇ ಸರ್ಕಾರದಲ್ಲಿ ಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ