Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಬಿಜೆಪಿ ಸಭೆಯಲ್ಲಿ ಯತ್ನಾಳ್ – ನಿರಾಣಿ ಪರೋಕ್ಷ ವಾಗ್ದಾಳಿ, ಕಾರ್ಯಕರ್ತರ ಜಟಾಪಟಿ

ಕಾರ್ಯಕರ್ತರ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ಬೆಂಬಲಿಗರ ಮಧ್ಯೆ ಜಟಾಪಟಿಯಾಗಿದೆ. ಇಷ್ಟಕ್ಕೇ ನಿಲ್ಲದೆ, ಇಬ್ಬರೂ ನಾಯಕರು ಪರೋಕ್ಷವಾಗಿ ವೇದಿಕೆಯಲ್ಲೇ ಆರೋಪ-ಪ್ರತ್ಯಾರೋಪ ಮಾಡಿಕೊಂಡ ಘಟನೆ ನಡೆದಿದೆ.

Follow us
Ganapathi Sharma
|

Updated on:Jun 26, 2023 | 9:36 PM

ವಿಜಯಪುರ: ವಿಧಾನಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನಿಂದಾಗಿ ಬಿಜೆಪಿ ಕಾರ್ಯಕರ್ತರ ಹಾಗೂ ನಾಯಕರ ಮಧ್ಯೆ ವಾಕ್ಸಮರ ನಡೆದ ಬಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವರದಿಯಾಗಿದೆ. ಈ ಮಧ್ಯೆ, ವಿಜಯಪುರದಲ್ಲಿ (Vijayapura) ಸೋಮವಾರ ನಡೆದ ಕಾರ್ಯಕರ್ತರ (BJP Workers Meet) ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ಬೆಂಬಲಿಗರ ಮಧ್ಯೆ ಜಟಾಪಟಿಯಾಗಿದೆ. ಇಷ್ಟಕ್ಕೇ ನಿಲ್ಲದೆ, ಇಬ್ಬರೂ ನಾಯಕರು ಪರೋಕ್ಷವಾಗಿ ವೇದಿಕೆಯಲ್ಲೇ ಆರೋಪ-ಪ್ರತ್ಯಾರೋಪ ಮಾಡಿಕೊಂಡ ಘಟನೆ ನಡೆದಿದೆ. ನಂತರ ನಿರಾಣಿ ಅವರು ವೇದಿಕೆಯಿಂದ ಎದ್ದುಹೋಗಿದ್ದಾರೆ. ಯತ್ನಾಳ್ ವಿರುದ್ಧ ಮುರುಗೇಶ ನಿರಾಣಿ, ಮಾಜಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಯತ್ನಾಳ್ ಅವರ ಧಿಮಾಕಿನ ಮಾತು ಇನ್ನು ಮುಂದೆ ನಡೆಯದು. ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಿದೆ. ಮತ್ತೊಬ್ಬರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು. 2018ರಲ್ಲಿ ಕಾರಜೋಳರ ಪುತ್ರನನ್ನು ಸೋಲಿಸಿದ್ದು ಯಾರು? ವಿಜುಗೌಡ ಪಾಟೀಲ್ ಮೂರು ಸಾರಿ ಸೋತಿದ್ದಾರೆ, ಅವರನ್ನು ಸೋಲಿಸುವ ಪ್ರಯತ್ನ ಯಾರು ಮಾಡಿದ್ದಾರೆ ಎಂದು ಮುರುಗೇಶ ನಿರಾಣಿ ವಾಗ್ದಾಳಿ ನಡೆಸಿದ್ದಾರೆ.

ನಾನೇ ಹಿಂದೂ ಹುಲಿ, ನಾನೇ ಹಿಂದೂ ಹುಲಿ ಎಂದು ಜಂಭ ಕೊಚ್ಚಿಕೊಂಡವರು ಪಾರ್ಟಿ ಬಿಟ್ಟು ಹೋಗಿ ಟೋಪಿ ಹಾಕಿ ನಮಾಜ್ ಮಾಡಿದ್ದಾರೆ. ಇದನ್ನು ವಿಜುಯಪುರದ ಜನರು ಮರೆತಿಲ್ಲ, ಮಾತನಾಡಲು ಬಹಳ ಇದೆ. ಮಾಳಿಗೆ ಏರಿದ ಮೇಲೆ ಏಣಿ ಒದ್ದರು ಅನ್ನೋ ಹಾಗೇ ಆಗಬಾರದು ಎಂದು ನಿರಾಣಿ ಕಿಡಿಕಾರಿದ್ದಾರೆ.

ಇಲ್ಲಿಗೆ ಚುನಾವಣೆ ಮುಗಿದಿಲ್ಲ, ನಾವಷ್ಟೇ ಸೋತಿರುವುದೂ ಅಲ್ಲ. ವಾಜಪೇಯಿಯವರು, ಯಡಿಯೂರಪ್ಪ ಕೂಡ ಈ ಹಿಂದೆ ಸೋತಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ತಲೆತಗ್ಗಿಸುವ ಹಾಗೆ ಮಾಡುತ್ತಿದ್ದಾರೆ. ಯತ್ನಾಳ್​​ಗೆ ತಲೆಯಲ್ಲಿ ಕೋಡು (ಕೊಂಬು) ಬಂದಿವೆ. ನಾನೊಬ್ಬನೇ ಗೆದ್ದಿದ್ದೇನೆ ಎನ್ನುವ ಧಿಮಾಕು, ಅಹಂ ಬಂದಿದೆ ಎಂದು ನಿರಾಣಿ ಟೀಕಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ಬಿಜೆಪಿ ಸಭೆಯಲ್ಲಿ ಜಟಾಪಟಿ, ಬೊಮ್ಮಾಯಿ, ಯತ್ನಾಳ್ ಭಾಗವಹಿಸಿದ್ದ ಸಭೆಯಲ್ಲೇ ಕಾರ್ಯಕರ್ತರ ಗಲಾಟೆ

ಮಾಜಿ ಶಾಸಕ ನಡಹಳ್ಳಿ ಆಕ್ರೊಶ ವ್ಯಕ್ತಪಡಿಸಿ, ಜಿಲ್ಲೆಯಲ್ಲಿ ಬಿಜೆಪಿ ಸತ್ತಿಲ್ಲ, ನಾವು ಸೋತ್ತಿದ್ದೇವೆ. ನಾವು ಏಳು ಜನ ಸೋತಿದ್ದೇವೆ ಆದರೆ ಬಿಜೆಪಿ ಸತ್ತಿಲ್ಲ. ನಾವೆಲ್ಲ ವಾಪಸ್ ಬಿಜೆಪಿ ಕಟ್ಟಿ ತೋರಿಸುತ್ತೇವೆ, ಆ ತಾಕತ್ ನಮಗೆ ಇದೆ. ಎಂಟಕ್ಕೆ ಎಂಟು ಸ್ಥಾನಗಳನ್ನು ಗೆದ್ದು ತೋರಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆ ಗೆಲ್ಲಿಸಿ ತೋರಿಸುತ್ತೇವೆ. ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಿ ತೋರಿಸುತ್ತೇವೆ. ಇವತ್ತಿನಿಂದ ಮನಗೆ ಹೋಗಲ್ಲ, ಹೆಂಡತಿ ಮಕ್ಕಳ ಮುಖ ನೋಡಲ್ಲ. ಲೋಕಸಭೆ ಚುನಾವಣೆ ಗೆದ್ದು ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಹೋದಲ್ಲೆಲ್ಲ ಗಲಾಟೆ ಆಗುತ್ತಿಲ್ಲ; ಬೊಮ್ಮಾಯಿ

ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಗದ್ದಲವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿ ವಿಜಯಪುರ ನಗರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಹೋದಲೆಲ್ಲಾ ಗಲಾಟೆ ಆಗುತ್ತಿಲ್ಲ. ಬೆಳಗಾವಿ ಹಾಗೂ ಚಿಕ್ಕೋಡಿಯಲ್ಲಿ ಉತ್ತಮ ಕಾರ್ಯಕ್ರಮಗಳಾದವು. ಬಾಗಲಕೋಟೆಯ ಕಾರ್ಯಕ್ರಮದಲ್ಲಿ ಓರ್ವ ಕಾರ್ಯಕರ್ತನ ಗಲಾಟೆ ಮಾತ್ರ ಆಗಿದೆ. ಅದೇನು ದೊಡ್ಡ ವಿಚಾರವಲ್ಲ ಎಂದು ಹೇಳಿದ್ದಾರೆ.

ವಿಜಯಪುರ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲೂ ಗಲಾಟೆ.. ಶಾಸಕಿ ಶಶಿಕಲಾ ಜೊಲ್ಲೆ ಭಾಷಣ ಮುಕ್ತಾಯವಾಗುತ್ತಿದ್ದಂತೆ ಗಲಾಟೆ.. ರಮೇಶ್​ ಜಿಗಜಿಣಗಿ ಮರು ಆಯ್ಕೆ ಮಾಡಬೇಕು ಎಂದಿದ್ದಕ್ಕೆ ಆಕ್ಷೇಪ.. ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ಬೆಂಬಲಿಗರ ಆಕ್ಷೇಪ.. ಬಸನಗೌಡ ಪಾಟೀಲ್​ ಯತ್ನಾಳ್​ ಪರ ಬೆಂಬಲಿಗರಿಂದ ಘೋಷಣೆ.. ಪೊಲೀಸರು ಮಧ್ಯಪ್ರವೇಶ ಮಾಡಿದರೂ ಸುಮ್ಮನಿರದ ಕಾರ್ಯಕರ್ತರು.. ಗಲಾಟೆ ಆಗ್ತಿದ್ದರೂ ಮೂಕ ಪ್ರೇಕ್ಷಕರಾದ ಮಾಜಿ ಸಿಎಂ ಬೊಮ್ಮಾಯಿ.. ವಿಜಯಪುರ ಪಾಲಿಕೆ ಸದಸ್ಯರು, ಯತ್ನಾಳ್ ಬೆಂಬಲಿಗರಿಂದ ಗಲಾಟೆ. ಬೇಸರಗೊಂಡು ಸಭೆಯಿಂದ ಹೊರನಡೆದ ಸಂಸದ ರಮೇಶ ಜಿಗಜಿಣಗಿ, ಮುರುಗೇಶ್ ನಿರಾಣಿ, ಎ.ಎಸ್.ಪಾಟೀಲ್‌ ನಡಹಳ್ಳಿ, ವಿಜುಗೌಡ ಪಾಟೀಲ್..
0 seconds of 3 minutes, 4 secondsVolume 90%
Press shift question mark to access a list of keyboard shortcuts
00:00
03:04
03:04
 
ನಗರದಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕರ್ತರ ಕಾರ್ಯಕ್ರಮಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗಮಿಸಿಲ್ಲ. ಅವರಿಗೆ ಬೇರೆ ಕೆಲಸ ಇರುವ ಕಾರಣ ಕಾರ್ಯಕ್ರಮಕ್ಕೆ ಬಂದಿಲ್ಲ. ಬೇರೆ ಕೆಲಸವಿದೆ ಎಂದು ಈ ಮೊದಲೇ ಯತ್ನಾಳ್ ನನಗೆ ಹೇಳಿದ್ದರು, ಅವರು ವಿಜಯಪುರದಲ್ಲಿಲ್ಲ. ಯತ್ನಾಳ್ ಕಾರ್ಯಕ್ರಮಕ್ಕೆ ಬರಬೇಕೆಂದು ಅವರ ಅಭಿಮಾನಿಗಳು ಒತ್ತಾಸೆ ಮಾಡಿದ್ದಾರೆ. ಅದನ್ನು ಬಿಟ್ಟರೆ ಯಾವುದೇ ನಾಯಕರ ಬಗ್ಗೆ ವ್ಯತ್ಯಾಸ ಇಲ್ಲ. ಇದೆಲ್ಲವನ್ನು ಸರಿಪಡಿಸಿ ಮತ್ತೊಮ್ಮೆ ವಿಜಯಪುರದಲ್ಲಿ ದೊಡ್ಡ ಸಮಾವೇಶ ಮಾಡುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಯತ್ನಾಳ್ ವಿರುದ್ಧ ಮುರುಗೇಶ್ ನಿರಾಣಿ, ನಡಹಳ್ಳಿ ತೀವ್ರ ವಾಗ್ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿ, ಅವರೇನೇ ಹೇಳಿದರೂ ಕೂಡ ಎಲ್ಲರನ್ನು ಒಗ್ಗೂಡಿಸಿಕೊಂಡು ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ರಮೇಶ್ ಜಿಗಜಿಣಗಿ ಅವರಿಗೆ ಟಿಕೆಟ್ ನೀಡಲಾಗುತ್ತದೆಯೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅದೆಲ್ಲಾ ಸಂಸದೀಯ ಮಂಡಳಿಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 pm, Mon, 26 June 23

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ