ಕಾರ್ಕಳ ಸಚಿವ ಸುನೀಲಕುಮಾರ್ ಕ್ಷೇತ್ರ, ಅಲ್ಲಿ ಬೇರೆಯವರಿಗೆ ಅವಕಾಶವಿಲ್ಲ ಎಂದು ಶ್ರೀರಾಮಸೇನೆಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕಾರ್ಕಾಳ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಒತ್ತಾಯಿಸಿದ್ದಾರೆ. ಆದರೆ ಈ ಹೇಳಿಕೆಗೆ ಸಿಎಂ ಬೊಮ್ಮಾಯಿ ಅವರು ನೇರವಾಗಿ ಟಾಂಗ್ ಕೊಟ್ಟಿದ್ದಾರೆ.

ಕಾರ್ಕಳ ಸಚಿವ ಸುನೀಲಕುಮಾರ್ ಕ್ಷೇತ್ರ, ಅಲ್ಲಿ ಬೇರೆಯವರಿಗೆ ಅವಕಾಶವಿಲ್ಲ ಎಂದು ಶ್ರೀರಾಮಸೇನೆಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
Follow us
| Updated By: Rakesh Nayak Manchi

Updated on:Feb 04, 2023 | 3:13 PM

ವಿಜಯಪುರ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಅವರು ಕಾರ್ಕಾಳ (Karkala) ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಒತ್ತಾಯಿಸಿದ್ದಾರೆ. ಆದರೆ ಈ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನೇರವಾಗಿ ಟಾಂಗ್ ಕೊಟ್ಟಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಅವರು ಮನವಿ ಮಾಡಿದ್ದಾರೆ, ಮಾಡಲಿ. ನಮ್ಮದು ರಾಷ್ಟ್ರೀಯ ಪಕ್ಷ. ಹೀಗಾಗಿ 224 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಹಾಕುತ್ತೇವೆ. ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಸುನಿಲ್ ಕುಮಾರ್ (Sunil Kumar)​ ಮೂರು ಬಾರಿ ಗೆದ್ದು ಸಚಿವರಾಗಿದ್ದಾರೆ. ಅದು ಅವರದ್ದೇ ಕ್ಷೇತ್ರ ಎಂದು ಹೇಳುವ ಮೂಲಕ ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸುನಿಲ್ ಕುಮಾರ್ ಕಾರ್ಕಾಳ ಕ್ಷೇತ್ರದಿಂದಲೇ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ. ಅದರಂತೆ ಕಾರ್ಕಾಳ ತಾಲೂಕಿನ ಹಿಂದೂ ಮತದಾರರಿಗೆ ಎರಡು ಹಿಂದುತ್ವದ ಮುಖಗಳು ಕಾಣಿಸಿಕೊಳ್ಳಲಿವೆ.

ಇನ್ನು, ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ, ಅವರು ಮೊದಲು ತಮ್ಮ ಕಾಂಗ್ರೆಸ್ ಶಾಸಕರನ್ನು ಗಟ್ಟಿಯಾಗಿ ಇಟ್ಟುಕೊಳ್ಳಲಿ, ಅವರು ಹೋದಲ್ಲೆಲ್ಲ ಇರುವ ಕಾಂಗ್ರೆಸ್ ಶಾಸಕರನ್ನು ಗಟ್ಟಿಯಾಗಿ ಇಟ್ಟುಕೊಳ್ಳಲಿ. ಅವರಂತೆ ನಾನು ಏನೇನೋ ಮಾತನಾಡಲ್ಲ ಎಂದರು.

ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ 3 ಲಕ್ಷ ಕೋಟಿ ಸಾಲ ಆಗಿದೆ ಎನ್ನುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಆ ಸಾಲ ಮಾಡಿದ್ದೇ ಕಾಂಗ್ರೆಸ್. ಕೋವಿಡ್ ಅವಧಿ ಬಿಟ್ಟರೆ, ರಾಜ್ಯದ ಇತಿಹಾಸದಲ್ಲಿ ಐದು ವರ್ಷದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಖ್ಯಾತಿ ಸಿದ್ದರಾಮಯ್ಯ ಸರ್ಕಾರದ್ದಾಗಿದೆ ಎಂದರು. ಬಜೆಟ್ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬಜೆಟ್​ನಲ್ಲಿ ಎಷ್ಟು ಅನುಷ್ಠಾನ ಆಗಿದೆ ಏನು ಅಂತ ವಿಧಾನಸಭೆಯಲ್ಲಿ ರಿಪೋರ್ಟ್ ಕೊಡುತ್ತೇವೆ ಎಂದರು.

ಇದನ್ನೂ ಓದಿ: BJP PM Candidate: ಯಾರಾಗಲಿದ್ದಾರೆ ನರೇಂದ್ರ ಮೋದಿ ಉತ್ತರಾಧಿಕಾರಿ?; ಪ್ರಧಾನಿ ಅಭ್ಯರ್ಥಿ ಸ್ಥಾನದ ಬಗ್ಗೆ ಯೋಗಿ ಆದಿತ್ಯನಾಥ್ ಸ್ಪಷ್ಟನೆ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭರವಸೆಗಳ ಮಹಾಪುರದ ಬಗ್ಗೆ ಮಾಜಿ ಸಚಿವ ಡಾ.ಜಿ.ಪರಮೇಶ್ವರ ಅಸಮಧಾನ ವಿಚಾರಕ್ಕೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ, ಇದು ಅವರ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪರಮೇಶ್ವರ ಬಹಳ ಬುದ್ದಿವಂತರಿದ್ದಾರೆ. ಎಲ್ಲವನ್ನು ಕೂಡ ಅರ್ಥ ಮಾಡಿಕೊಂವರಾಗಿದ್ದಾರೆ. ಅವರು ಈ ರೀತಿ ವ್ಯಕ್ತಪಡುಸಿದ್ದಾರೆ ಅಂದರೆ ಅವರಲ್ಲಿ ಏನೂ ಸರಿ ಇದೆ, ಏನು ಸರಿಯಿಲ್ಲ ಅಂತ ನೀವು ಅರ್ಥ ಮಾಡಿಕೊಳ್ಳಬೇಕು ಎಂದರು.

ಇನ್ನು ರಾಜ್ಯ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ತೊಡೆ ತಟ್ಟಿದ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಪಟ್ಟು ಹಿಡಿದಿದ್ದಾರೆ. ಅದರಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕೂಡ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಪ್ರಶ್ನೆ ಎತ್ತಿದಾದ ಮುಖ್ಯಮಂತ್ರಿಯವರು ಯಾವುದೇ ಪ್ರತಿಕ್ರಿಯೆ ನೀಡದೆ ಹೋದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Sat, 4 February 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!