ಡಿಎಂಕೆ ಪಕ್ಷವನ್ನು ತೃಪ್ತಿ ಪಡಿಸಲು ನೀರು ಹರಿಸಲಾಗುತ್ತಿದೆ; ಸರ್ಕಾರದ ವಿರುದ್ಧ ಬಿಎಸ್​ ಯಡಿಯೂರಪ್ಪ ಆರೋಪ

ರಾಜ್ಯದಲ್ಲಿ ನೀರಿಲ್ಲ, ಮೇವಿಲ್ಲ, ಜನರು ಕಷ್ಟದಲ್ಲಿ ಇದ್ದಾರೆ. ಕಾವೇರಿ ನೀರಿನ ವಿಚಾರದಲ್ಲೂ ಸರ್ಕಾರ ರಾಜಕೀಯ ಮಾಡುತ್ತಿದೆ. ಈ ಹಿನ್ನಲೆ ಇಂಡಿಯಾ ಮೈತ್ರಿಕೂಟ ಬಲಪಡಿಸಲು ಸರ್ಕಾರ ನೀರು ಹರಿಸುತ್ತಿದೆ. ಸುಪ್ರೀಂಕೋರ್ಟ್​​ಗೆ ಮನವರಿಕೆ ಮಾಡಿಕೊಡಲು ಸರ್ಕಾರ ವಿಫಲವಾಗಿದೆ ಎಂದು ಬಿಎಸ್​ ಯಡಿಯೂರಪ್ಪ ಆರೋಪಿಸಿದರು.

ಡಿಎಂಕೆ ಪಕ್ಷವನ್ನು ತೃಪ್ತಿ ಪಡಿಸಲು ನೀರು ಹರಿಸಲಾಗುತ್ತಿದೆ; ಸರ್ಕಾರದ ವಿರುದ್ಧ ಬಿಎಸ್​ ಯಡಿಯೂರಪ್ಪ ಆರೋಪ
ಬಿಎಸ್​ ಯಡಿಯೂರಪ್ಪ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 15, 2023 | 3:34 PM

ಬೆಂಗಳೂರು, ಸೆ.15: ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗಿಲ್ಲ. ಈ ಮಧ್ಯೆ ರೈತರಿಗೆ ಆಧಾರವಾಗಿದ್ದ ಕಾವೇರಿ (Cauvery)  ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಈ ಹಿನ್ನಲೆ ಈಗಾಗಲೇ ವಿವಿಧ ರೈತ ಸಂಘಟನೆಗಳು ಸರ್ಕಾರದ ವಿರುದ್ಧ ಹೋರಾಟಕ್ಕೀಳಿದಿದೆ. ಈ ಕುರಿತು ಬೆಂಗಳೂರಿನಲ್ಲಿ ‘ಡಿಎಂಕೆ ಪಕ್ಷವನ್ನು ತೃಪ್ತಿ ಪಡಿಸಲು ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ (BS Yadiyurappa) ಅವರು ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನೀರಿಲ್ಲ, ಮೇವಿಲ್ಲ, ಜನರು ಕಷ್ಟದಲ್ಲಿ ಇದ್ದಾರೆ. ಕಾವೇರಿ ನೀರಿನ ವಿಚಾರದಲ್ಲೂ ಸರ್ಕಾರ ರಾಜಕೀಯ ಮಾಡುತ್ತಿದೆ. ಈ ಹಿನ್ನಲೆ ಇಂಡಿಯಾ ಮೈತ್ರಿಕೂಟ ಬಲಪಡಿಸಲು ಸರ್ಕಾರ ನೀರು ಹರಿಸುತ್ತಿದೆ. ಸುಪ್ರೀಂಕೋರ್ಟ್​​ಗೆ ಮನವರಿಕೆ ಮಾಡಿಕೊಡಲು ಸರ್ಕಾರ ವಿಫಲವಾಗಿದೆ. ಇನ್ನಾದರೂ ಸುಪ್ರೀಂಕೋರ್ಟ್​ಗೆ ಸರ್ಕಾರ ಮನವರಿಕೆ ಮಾಡಲಿ, ರಾಜ್ಯ ಕಾಂಗ್ರೆಸ್​ ಸರ್ಕಾರ ಪರೋಕ್ಷವಾಗಿ ಡಿಎಂಕೆಗೆ ಸಹಕರಿಸುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ; ರಾಜ್ಯದ ಎಲ್ಲಾ ಸಂಸದರು ನರಸತ್ತವರು ಎಂದ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ

ಇನ್ನು ಈ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿ ‘ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ಮಾಡಿದೆ. ಕೇಂದ್ರ ಬಳಿ ಸರ್ವಪಕ್ಷ ನಿಯೋಗ ಹೋಗುವ ಅಗತ್ಯವಿಲ್ಲ. ಕಾವೇರಿ ನೀರು ವಿಚಾರದಲ್ಲಿ ಕೇಂದ್ರದ ಮಧ್ಯಸ್ಥಿಕೆಯ ಅಗತ್ಯವೇನಿದೆ? ಕೇಂದ್ರದ ಮೇಲೆ ಆರೋಪ ಮಾಡುವ ಮೂಲಕ ಕುಂಟು ನೆಪ ಹುಡುಕುತ್ತಿದೆ. ಕೇಂದ್ರದ ಬದಲು ಸ್ಟಾಲಿನ್ ಜತೆ ಈ ಸರ್ಕಾರ ಪತ್ರ ವ್ಯವಹಾರ ನಡೆಸಲಿ ಎಂದರು.

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷ ಡಿಎಂಕೆ ಜೊತೆ ಪತ್ರ ವ್ಯವಹಾರ ನಡೆಸಲಿ, ಕಾವೇರಿ ವಿಚಾರಕ್ಕೆ ಸ್ಟಾಲಿನ್​​ಗೆ ಕಾಂಗ್ರೆಸ್​ ಪತ್ರ ಬರೆಯಲಿ ನೋಡೋಣ. ರಾಜ್ಯ ಸರ್ಕಾರ ನೀರು ಬಿಡದಿದ್ದರೆ ನಾವು ಜೊತೆ ನಿಲ್ಲುತ್ತೇವೆ. ಸರ್ಕಾರ ಕಾನೂನು ತಂಡದ ಜೊತೆ ಚರ್ಚೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ನಮಗೆ ಅನುಮಾನ ಹುಟ್ಟಿಸಿದೆ ಎಂದು ಬೆಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ