Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಚುನಾವಣೆಯಲ್ಲೇ ಅಣ್ಣನ ದಾಖಲೆ ಮುರಿದ ಪ್ರಿಯಾಂಕಾ ಗಾಂಧಿ; ವಯನಾಡಿನಲ್ಲಿ 4 ಲಕ್ಷ ಮತಗಳ ಮುನ್ನಡೆ 

ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ದಾಖಲೆಯ 4 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಈ ವರ್ಷದ ರಾಹುಲ್ ಗಾಂಧಿಯವರ ಲೋಕಸಭಾ ಗೆಲುವಿನ ಅಂತರವನ್ನು ಮೀರಿಸಿ ಪ್ರಿಯಾಂಕಾ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಎದುರಾಳಿಯನ್ನು 3,64,422 ಮತಗಳಿಂದ ಸೋಲಿಸಿ 6,47,445 ಮತಗಳೊಂದಿಗೆ ವಯನಾಡ್ ಕ್ಷೇತ್ರದಲ್ಲಿ ಗೆದ್ದಿದ್ದರು.

ಮೊದಲ ಚುನಾವಣೆಯಲ್ಲೇ ಅಣ್ಣನ ದಾಖಲೆ ಮುರಿದ ಪ್ರಿಯಾಂಕಾ ಗಾಂಧಿ; ವಯನಾಡಿನಲ್ಲಿ 4 ಲಕ್ಷ ಮತಗಳ ಮುನ್ನಡೆ 
ಪ್ರಿಯಾಂಕಾ ಗಾಂಧಿ ವಾದ್ರಾ
Follow us
ಸುಷ್ಮಾ ಚಕ್ರೆ
|

Updated on: Nov 23, 2024 | 3:16 PM

ವಯನಾಡ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡ್‌ನಿಂದ ಸ್ಪರ್ಧಿಸುತ್ತಿರುವ ಮೊದಲ ಚುನಾವಣೆಯಲ್ಲಿಯೇ ನಿರೀಕ್ಷೆಗಿಂತ ಉತ್ತಮ ಪ್ರದರ್ಶನ ನೀಡಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್​ಬರೇಲಿ ಹಾಗೂ ಕೇರಳದ ವಯನಾಡು ಕ್ಷೇತ್ರಗಳಲ್ಲಿ ಗೆದ್ದಿದ್ದ ಅವರ ಸಹೋದರ ರಾಹುಲ್ ಗಾಂಧಿ ವಯನಾಡನ್ನು ತೊರೆದು ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಯನಾಡಿನಲ್ಲಿ ಉಪಚುನಾವಣೆ ಘೋಷಣೆಯಾಗಿತ್ತು. ವಯನಾಡಿನ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ 4 ಲಕ್ಷ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಇದು ಅದೇ ಕ್ಷೇತ್ರದಿಂದ ಗೆದ್ದ ಅವರ ಸಹೋದರ ರಾಹುಲ್ ಗಾಂಧಿ ಗೆದ್ದ ಅಂತರಕ್ಕಿಂತ ಹೆಚ್ಚಿನ ಮತಗಳಾಗಿವೆ.

2024 ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಎದುರಾಳಿಯನ್ನು 3,64,422 ಮತಗಳಿಂದ ಸೋಲಿಸಿ 6,47,445 ಮತಗಳೊಂದಿಗೆ ವಯನಾಡ್ ಅನ್ನು ಗೆದ್ದರು. ಸದ್ಯಕ್ಕೆ ಪ್ರಿಯಾಂಕಾ ಅವರು 6,17,942 ಮತಗಳನ್ನು ಪಡೆದಿದ್ದು, ಮತ ಎಣಿಕೆ ಮುಂದುವರಿದಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)ಯ ಸತ್ಯನ್ ಮೊಕೇರಿ 2,02,261 ಮತಗಳನ್ನು ಪಡೆದು ತೀರಾ ಹಿಂದುಳಿದಿದ್ದರೆ, ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ 1,06,724 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಜೋ ಬೈಡೆನ್‌ನಂತೆ ಪ್ರಧಾನಿ ಮೋದಿಗೂ ನೆನಪಿನ ಶಕ್ತಿಯ ಸಮಸ್ಯೆಯಿದೆ; ರಾಹುಲ್ ಗಾಂಧಿ ಟೀಕೆ

ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಿಯಾಂಕಾ ಸ್ಪರ್ಧಿಸಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ಸಂಸದರಾಗಿದ್ದ ವಯನಾಡ್ ಕ್ಷೇತ್ರವು ಪ್ರಿಯಾಂಕಾ ಗಾಂಧಿ ವಾದ್ರಾ ರೇಸ್‌ಗೆ ಕಾಲಿಡುತ್ತಿದ್ದಂತೆ ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ಚಲಾವಣೆಯಾದ 9.52 ಲಕ್ಷ ಮತಗಳಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸುಮಾರು 6 ಲಕ್ಷ ಮತಗಳನ್ನು ಗಳಿಸಬಹುದು ಎಂದು ಸ್ಥಳೀಯ ಕಾಂಗ್ರೆಸ್ ನಾಯಕರು ಭವಿಷ್ಯ ನುಡಿದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ