ಮುಂಬರುವ ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ: ರಾಹುಲ್ ಗಾಂಧಿ
ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ತನ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ 'ಭಾರತ್ ಜೋಡೋ ಯಾತ್ರೆ'ಯ ಸಮಯದಲ್ಲಿ ಜನರು ಎತ್ತಿದ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆಯೇ ಹೊರತು ನಾಯಕರನ್ನು ತೋರಿಸಿ ಅಲ್ಲ ಎಂದು ಕಾಂಗ್ರೆಸ್ ಹೇಳಿದೆ.
ದೆಹಲಿ: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ (Madhya Pradesh) ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ನಾವು ಸುದೀರ್ಘ ಚರ್ಚೆ ನಡೆಸಿದ್ದೇವೆ, ನಮ್ಮ ಆಂತರಿಕ ಮೌಲ್ಯಮಾಪನದ ಪ್ರಕಾರ ನಾವು ಕರ್ನಾಟಕದಲ್ಲಿ 136 ಸ್ಥಾನಗಳನ್ನು ಪಡೆದಿದ್ದೆವು, ನಾವು ಮಧ್ಯಪ್ರದೇಶದಲ್ಲಿ 150 ಸ್ಥಾನಗಳನ್ನು ಗಳಿಸಲಿದ್ದೇವೆ ಎಂದು ದೆಹಲಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಹೇಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಮಧ್ಯಪ್ರದೇಶದ ಪ್ರಮುಖ ಕಾಂಗ್ರೆಸ್ ನಾಯಕರು ಇಂದು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾದರು.
ಸಭೆಯಲ್ಲಿ ರಾಜ್ಯ ಘಟಕದ ಮುಖ್ಯಸ್ಥ ಕಮಲ್ ನಾಥ್ ಮತ್ತು ಮಧ್ಯಪ್ರದೇಶದ ಪಕ್ಷದ ಉಸ್ತುವಾರಿ ಕೂಡ ಭಾಗವಹಿಸಿದ್ದರು. ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸಲು ಮತ್ತು ಚುನಾವಣೆಗೆ ಸಿದ್ಧಪಡಿಸುವ ಕಾಂಗ್ರೆಸ್ ಪ್ರಯತ್ನಗಳ ಭಾಗವಾಗಿ ಈ ಸಭೆ ನಡೆದಿದೆ. ಮಧ್ಯಪ್ರದೇಶದಲ್ಲಿ ಚುನಾವಣೆಗೆ ಸುಮಾರು 4 ತಿಂಗಳುಗಳು ಉಳಿದಿವೆ. ಮಧ್ಯಪ್ರದೇಶದ ಭವಿಷ್ಯ ಮತ್ತು ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಭೆಯ ನಂತರ ಮಾತನಾಡಿದ ಕಮಲ್ ನಾಥ್ ಹೇಳಿದರು.
#WATCH | We had a detailed meeting right now and our internal assessment says that since we got 136 seats in Karnataka, we are now going to get 150 seats in Madhya Pradesh: Congress leader Rahul Gandhi pic.twitter.com/9rQgiJBumY
— ANI (@ANI) May 29, 2023
ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ತನ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ಯ ಸಮಯದಲ್ಲಿ ಜನರು ಎತ್ತಿದ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆಯೇ ಹೊರತು ನಾಯಕರನ್ನು ತೋರಿಸಿ ಅಲ್ಲ ಎಂದು ಕಾಂಗ್ರೆಸ್ ಹೇಳಿದೆ.
ರಾಹುಲ್ ಗಾಂಧಿಯವರ ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ ಪಾದಯಾತ್ರೆಯ ಸಂದರ್ಭದಲ್ಲಿ ಅವರು ರಾಜ್ಯದಾದ್ಯಂತ ಜನರೊಂದಿಗೆ ಹಲವಾರು ಸಂವಾದಗಳನ್ನು ನಡೆಸಿದರು. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಮತ್ತು ಮಹಿಳೆಯರ ಸುರಕ್ಷತೆಯಂತಹ ವಿಷಯಗಳನ್ನು ಜನರು ಅವರ ಜತೆ ಹಂಚಿಕೊಂಡಿದ್ದಾರೆ. ರಾಜಕೀಯ ಪಕ್ಷಗಳು ತಮ್ಮನ್ನು ಕಾಡುವ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಬೇಕೆಂದು ಜನರು ನಿರೀಕ್ಷಿಸುತ್ತಾರೆ ಎಂದು ಪಕ್ಷದ ನಾಯಕ ಪವನ್ ಖೇರಾ ಹೇಳಿದ್ದಾರೆ.
ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವೇನು? ಹಿರಿಯ ನಾಯಕರೊಬ್ಬರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ
ಮಧ್ಯಪ್ರದೇಶದಲ್ಲಿ 2018 ರ ಚುನಾವಣೆಯಲ್ಲಿ ಬಿಜೆಪಿ ಸೋತಿತು ಆದರೆ 2020 ರಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದ ನಂತರವೂ ಮತ್ತೆ ಅಧಿಕಾರಕ್ಕೆ ಬರಲು ಯಶಸ್ವಿಯಾಯಿತು. ನವೆಂಬರ್ 29, 2005 ರಿಂದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಮತ್ತೊಂದು ಅವಧಿಯನ್ನು ಗೆಲ್ಲಲು ಬಿಜೆಪಿ ಉತ್ಸುಕವಾಗಿದೆ, ಡಿಸೆಂಬರ್ 18, 2018 ರಿಂದ ಮಾರ್ಚ್ 2020 ರ ಅವಧಿಯನ್ನು ಹೊರತುಪಡಿಸಿ ಕಮಲ್ ನಾಥ್ ಅವರು ಕಾಂಗ್ರೆಸ್ ಸರ್ಕಾರದ ನೇತೃತ್ವ ವಹಿಸಿದ್ದರು.
ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ