AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ವಿದ್ಯುತ್ ಬೇಡ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ: ರಾಜ್ಯ ಸರ್ಕಾರಕ್ಕೆ ಪ್ರಜ್ವಲ್‌ ರೇವಣ್ಣ ಮನವಿ

200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೇನು ಫಲ? ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಆರೋಪಿಸಲು ಆರಂಭಿಸಿದ್ದಾರೆ. ಸರಿಯಾದ ರೀತಿಯಲ್ಲಿ, ಸರಿಯಾದ ಸಮಯದಲ್ಲಿ ಕರೆಂಟ್ ಕೊಡಲಿಲ್ಲ ಅಂದರೆ ನಿಮ್ಮ ಉಚಿತ ಕರೆಂಟ್ ಏನಕ್ಕೆ ಬೇಕು ಅಂತ ಸಂಸದ ಪ್ರಜ್ವಲ್ ರೇವಣ್ಣ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಉಚಿತ ವಿದ್ಯುತ್ ಬೇಡ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ: ರಾಜ್ಯ ಸರ್ಕಾರಕ್ಕೆ ಪ್ರಜ್ವಲ್‌ ರೇವಣ್ಣ ಮನವಿ
ಪ್ರಜ್ವಲ್ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on: Aug 17, 2023 | 6:30 PM

Share

ಹಾಸನ, ಆಗಸ್ಟ್ 17: ಕಾಂಗ್ರೆಸ್ ಸರ್ಕಾರ ಷರತ್ತು ವಿಧಿಸಿ 200 ಯುನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಆದರೇನು ಫಲ? ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಆರೋಪಿಸಲು ಆರಂಭಿಸಿದ್ದಾರೆ. ಸರಿಯಾದ ರೀತಿಯಲ್ಲಿ, ಸರಿಯಾದ ಸಮಯದಲ್ಲಿ ಕರೆಂಟ್ ಕೊಡಲಿಲ್ಲ ಅಂದರೆ ನಿಮ್ಮ ಉಚಿತ ಕರೆಂಟ್ (Free Electricity) ಏನಕ್ಕೆ ಬೇಕು ಅಂತ ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ನಿಮ್ಮ ಉಚಿತ ಕರೆಂಟ್ ನಮಗೆ ಬೇಡ. ರೈತರ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ. ಎಲ್ಲಾ ಕಡೆಗಳಲ್ಲಿ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದೊಂದು ಸಮಸ್ಯೆ ಆಗಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ರೈತರ ಮೇಲೆ ಕೇಸ್ ದಾಖಲಿಸಿ, ದಂಡ ವಿಧಿಸುತ್ತಿದ್ದಾರೆ ಎಂದು ಹೇಳಿದ ಪ್ರಜ್ವಲ್ ರೇವಣ್ಣ, ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ರೈತರು ಟ್ರಾನ್ಸ್‌ಫಾರ್ಮರ್ ಹಾಕಿಕೊಂಡುವಂತೆ ಹಣ ಕಟ್ಟಿದ್ದಾರೆ. ಆದರೂ ಟ್ರಾನ್ಸ್‌ಫಾರ್ಮರ್ ಆಳವಡಿಸಿಲ್ಲ. ಹೀಗಾಗಿ ರೈತರು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದರು.

ಇದನ್ನೂ ಓದಿ: ಹಾಸನ: ಆಸ್ಪತ್ರೆಗೆ ವಾಸ್ತು ಪ್ರಕಾರವೇ ವಿದ್ಯುತ್ ಸ್ಟೇಷನ್ ಅಳವಡಿಕೆಗೆ ಹೆಚ್​ಡಿ ರೇವಣ್ಣ ಸೂಚನೆ

ಜಿಲ್ಲೆಯಲ್ಲಿ ದುಡ್ಡು ಕಟ್ಟಿರುವ ಹದಿಮೂರುವರೆ ಸಾವಿರ ರೈತರಿದ್ದಾರೆ. ಬಜೆಟ್ ಇಲ್ಲಾ ಎಂದು ಪ್ರತಿ ಬಾರಿ ಐವತ್ತು, ಅರವತ್ತು ಲಕ್ಷ ಕೊಡುತ್ತೀರಾ, ಅಷ್ಟು ಹಣದಲ್ಲಿ ಎಷ್ಟು ಟ್ರಾನ್ಸ್‌ಫಾರ್ಮರ್ ಅಳವಡಿಸಲು ಆಗುತ್ತದೆ. ಹಾಸನ ತಾಲ್ಲೂಕು ಒಂದರಲ್ಲಿ 1061 ರೈತರು ಹಣ ಕಟ್ಟಿದ್ದಾರೆ. ಇದು ಹೀಗೆ ಮುಂದುವರೆದರೆ, ರೈತರ ಹಿತ ಕಾಯದಿದ್ದರೆ ನಾವೆಲ್ಲರೂ ದೊಡ್ಡಮಟ್ಟದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸರಿಯಾದ ಸಮಯದಲ್ಲಿ ವಿದ್ಯುತ್ ನೀಡದೆ ರೈತರು ಬೆಳೆದ ಬೆಳೆಗಳು ಹಾಳಾಗುತ್ತಿವೆ. ನಾಲ್ಕು ಗಂಟೆ ಅಂತ ಹೇಳಿ ಮೂರು ಗಂಟೆ ವಿದ್ಯುತ್ ನೀಡುತ್ತಿದ್ದಾರೆ. ಜೋಳ ಎಲ್ಲಾ ಒಣಗುವ ಮಟ್ಟಕ್ಕೆ ಬಂದಿದೆ. ಈ ರೈತರ ಕ್ಷೇಮ ಕಾಯದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದರು.

ನಿಮ್ಮ ಉಚಿತ ಯೋಜನೆಯನ್ನು ನಾವ್ಯಾರು ಕೇಳುತ್ತಿಲ್ಲ. ರೈತರಿಗೆ ಸರಿಯಾದ ಸಮಯಕ್ಕೆ ವಿದ್ಯುತ್, ನೀರು, ರೈತರ ಬೆಳೆಗೆ ಸರಿಯಾದ ವೈಜ್ಞಾನಿಕ ಬೆಲೆ ನೀಡಿದರೆ ಅವರೇ ಅನುದಾನ ಕೊಡುತ್ತಾರೆ ಅಂತ ದೇವೇಗೌಡ ಅವರು 2009ರಲ್ಲೇ ಹೇಳಿದ್ದರು. ಇಂತಹ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕೇ ಹೊರತು ಸರ್ಕಾರ ಬರೀ ಯೋಜನೆಗಳ ಬಗ್ಗೆ ತಲೆಕೆಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಈ ಸರ್ಕಾರ ದಿವಾಳಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಸನಕ್ಕೆ ಬಂದ ವೇಳೆ ವಿದ್ಯುತ್ ಸಮಸ್ಯೆ ಬಗ್ಗೆ ಗಮನಕ್ಕೆ ತರುತ್ತೇನೆ. ರಾಜಣ್ಣ ಅವರ ಮೇಲೆ ನನಗೆ ವಿಶ್ವಾಸವಿದೆ. ಅವರು ಅಧಿಕಾರಿಗಳನ್ನು ಕರೆದು ಚರ್ಚಿಸಿ ನಿರ್ದೇಶನ ನೀಡುತ್ತಾರೆ ಎಂದು ಭಾವಿಸಿದ್ದೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ