ವಿದ್ಯುತ್ ದರ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ: ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದುಃಖದಲ್ಲಿ ಮಾತಾಡಿದ್ದಾರೆ. ಅವರ ಹೇಳಿಕೆಗೆ ನಾನ್ಯಾಕೆ ಬೇಸರ ಮಾಡಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು.

ವಿದ್ಯುತ್ ದರ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ: ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 13, 2023 | 6:35 PM

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದುಃಖದಲ್ಲಿ ಮಾತಾಡಿದ್ದಾರೆ. ಅವರ ಹೇಳಿಕೆಗೆ ನಾನ್ಯಾಕೆ ಬೇಸರ ಮಾಡಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar)​ ಹೇಳಿದರು. ಬಿಜೆಪಿ ಸರ್ಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ ಎಂಬ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರು ಸಿಟಿ ರೌಂಡ್ಸ್​ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿದ್ಯುತ್ ದರ ಸಂಬಂಧ ನಮ್ಮ ಬಳಿ ಎಲ್ಲಾ ದಾಖಲೆಗಳಿವೆ ಎಂದು ಹೇಳಿದರು.

ನಾನು ಟ್ರಾಫಿಕ್ ಬಗ್ಗೆ ಹೆಚ್ಚು ಗಮನ‌ಹರಿಸಿದ್ದೇನೆ

ಬೆಂಗಳೂರಿನಲ್ಲಿ ಸಂಚಾರ ನಿರ್ವಹಣೆ ಬಗ್ಗೆ ಹೆಚ್ಚು ಗಮನ‌ಹರಿಸಿದ್ದೇನೆ. ಟ್ರಾಫಿಕ್ ವಿಚಾರವಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಸಾರ್ವಜನಿಕರಿಂದಲೂ ಮಾಹಿತಿ ಪಡೆಯುತ್ತೇನೆ. ಟ್ರಾಫಿಕ್ ವಿಚಾರವಾಗಿ ಸಾರ್ವಜನಿಕರು, ತಜ್ಞರ ಸಭೆ ನಡೆಸುವೆ ಎಂದರು.

ಇದನ್ನೂ ಓದಿ: ನಮ್ಮ ಸರ್ಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ; ಇಂಧನ ಸಚಿವರ ಆರೋಪಕ್ಕೆ ಮಾಜಿ ಸಿಎಂ ಬೊಮ್ಮಾಯಿ ತಿರುಗೇಟು

ವಿದ್ಯುತ್​ ದರ ಹೆಚ್ಚಳ ಆರೋಪ ತಳ್ಳಿ ಹಾಕಿದ ಮಾಜಿ ಸಿಎಂ ಬೊಮ್ಮಾಯಿ

ನಮ್ಮ ಸರ್ಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದ್ದಾರೆ. ವಿದ್ಯುತ್​ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ವರದಿಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ವಿದ್ಯುತ್​ ದರ ಹೆಚ್ಚಳವಾಗಿದೆ ಎನ್ನುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ಹುಸಿ ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುವುದು ನಿಶ್ಚಿತ: ಸುನಿಲ್ ಕುಮಾರ್

ಕಾದುನೋಡುವ ತಂತ್ರ ನಮ್ಮದು

ಗ್ಯಾರಂಟಿ ಯೋಜನೆ ವಿಚಾರದಲ್ಲಿ ಕಾದುನೋಡುವ ತಂತ್ರ ನಮ್ಮದು. ಉಚಿತ ಪ್ರಯಾಣ ವಿಚಾರದಲ್ಲಿ ಸರ್ಕಾರ ಆರಂಭ ಶೂರತ್ವ ತೋರುತ್ತಿದೆ. ಗ್ಯಾರಂಟಿ ಜಾರಿಗೆ ಹಣಕಾಸಿನ ಬಗ್ಗೆ ಸರ್ಕಾರ‌ ಸ್ಪಷ್ಟವಾಗಿ ಹೇಳುತ್ತಿಲ್ಲ. ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಒಂದು ಕೈಯಲ್ಲಿ ಕಿತ್ತುಕೊಂಡು ಮತ್ತೊಂದು ಕೈಯಲ್ಲಿ ಕೂಡುವಂತಾಗಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ