ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದುಃಖದಲ್ಲಿ ಮಾತಾಡಿದ್ದಾರೆ. ಅವರ ಹೇಳಿಕೆಗೆ ನಾನ್ಯಾಕೆ ಬೇಸರ ಮಾಡಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು. ಬಿಜೆಪಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂಬ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರು ಸಿಟಿ ರೌಂಡ್ಸ್ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿದ್ಯುತ್ ದರ ಸಂಬಂಧ ನಮ್ಮ ಬಳಿ ಎಲ್ಲಾ ದಾಖಲೆಗಳಿವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸಂಚಾರ ನಿರ್ವಹಣೆ ಬಗ್ಗೆ ಹೆಚ್ಚು ಗಮನಹರಿಸಿದ್ದೇನೆ. ಟ್ರಾಫಿಕ್ ವಿಚಾರವಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಸಾರ್ವಜನಿಕರಿಂದಲೂ ಮಾಹಿತಿ ಪಡೆಯುತ್ತೇನೆ. ಟ್ರಾಫಿಕ್ ವಿಚಾರವಾಗಿ ಸಾರ್ವಜನಿಕರು, ತಜ್ಞರ ಸಭೆ ನಡೆಸುವೆ ಎಂದರು.
ಇದನ್ನೂ ಓದಿ: ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ; ಇಂಧನ ಸಚಿವರ ಆರೋಪಕ್ಕೆ ಮಾಜಿ ಸಿಎಂ ಬೊಮ್ಮಾಯಿ ತಿರುಗೇಟು
ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದ್ದಾರೆ. ವಿದ್ಯುತ್ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ವರದಿಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ವಿದ್ಯುತ್ ದರ ಹೆಚ್ಚಳವಾಗಿದೆ ಎನ್ನುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
ಇದನ್ನೂ ಓದಿ: ಹುಸಿ ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುವುದು ನಿಶ್ಚಿತ: ಸುನಿಲ್ ಕುಮಾರ್
ಗ್ಯಾರಂಟಿ ಯೋಜನೆ ವಿಚಾರದಲ್ಲಿ ಕಾದುನೋಡುವ ತಂತ್ರ ನಮ್ಮದು. ಉಚಿತ ಪ್ರಯಾಣ ವಿಚಾರದಲ್ಲಿ ಸರ್ಕಾರ ಆರಂಭ ಶೂರತ್ವ ತೋರುತ್ತಿದೆ. ಗ್ಯಾರಂಟಿ ಜಾರಿಗೆ ಹಣಕಾಸಿನ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಹೇಳುತ್ತಿಲ್ಲ. ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಒಂದು ಕೈಯಲ್ಲಿ ಕಿತ್ತುಕೊಂಡು ಮತ್ತೊಂದು ಕೈಯಲ್ಲಿ ಕೂಡುವಂತಾಗಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.