ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ನಾವೆಲ್ಲರೂ ಪಕ್ಷದ ಕಾರ್ಯಕರ್ತರಂತೆ ಕೆಲಸ ಮಾಡಬೇಕು, ಪಕ್ಷದಲ್ಲಿ ದೊಡ್ಡವರು, ಚಿಕ್ಕವರು ಯಾರೂ ಇಲ್ಲ. ಕೋಮುವಾದದ ವೇಷದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿರುವ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ..

ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 19, 2022 | 6:27 PM

ದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನನ್ನ ನಿಲುವಿಗಾಗಿ ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಫಲಿತಾಂಶ ಪ್ರಕಟವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಸೋಮವಾರ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಶಶಿ ತರೂರ್ (Shashi Tharoor) ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದರು. 80 ವರ್ಷ ವಯಸ್ಸಿನ ಗಾಂಧಿ ಕುಟುಂಬದ ನಿಷ್ಠಾವಂತ ಖರ್ಗೆ ಅವರು ತರೂರ್ ವಿರುದ್ಧದ ಸ್ಪರ್ಧೆಯಲ್ಲಿ 84 ಪ್ರತಿಶತ ಮತಗಳನ್ನು ಗಳಿಸಿದರು. ಪ್ರಸ್ತುತ ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಖರ್ಗೆ ಕೃತಜ್ಞತೆ ಸಲ್ಲಿಸಿದರು. ರಾಹುಲ್ ನನಗೆ ಕರೆ ಮಾಡಿ ಶುಭ ಹಾರೈಸಿದರು. ನಾನು ಪಕ್ಷದ ಸಿಪಾಯಿ ಮತ್ತು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಸೋನಿಯಾ ಗಾಂಧಿ ಅವರಿಗೆ ಧನ್ಯವಾದಗಳು. ಅವರ ನೇತೃತ್ವದಲ್ಲಿ ನಾವು ಎರಡು ಬಾರಿ ಕೇಂದ್ರದಲ್ಲಿ ಸರ್ಕಾರ ರಚಿಸಿದ್ದೇವೆ. ರಾಜ್ಯಗಳಲ್ಲೂ ನಾವು ಬಲಿಷ್ಠರಾಗಿದ್ದೆವು. ಅವರ ಪಾತ್ರ ನೆನಪಿನಲ್ಲಿ ಉಳಿಯುತ್ತದೆ ಎಂದು ಖರ್ಗೆ ಹೇಳಿದ್ದಾರೆ.

ನಾವೆಲ್ಲರೂ ಪಕ್ಷದ ಕಾರ್ಯಕರ್ತರಂತೆ ಕೆಲಸ ಮಾಡಬೇಕು, ಪಕ್ಷದಲ್ಲಿ ದೊಡ್ಡವರು, ಚಿಕ್ಕವರು ಯಾರೂ ಇಲ್ಲ. ಕೋಮುವಾದದ ವೇಷದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿರುವ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ನಾವು ಒಗ್ಗಟ್ಟಿನಿಂದ ಹೋರಾಡಬೇಕಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಖರ್ಗೆ ಮನೆಗೆ ಸೋನಿಯಾ ಭೇಟಿ

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಘೋಷಿಸಲ್ಪಟ್ಟ ನಂತರ 10, ಜನಪಥ್ ಮನೆಗೆ ಹೋಗಿ ಸೋನಿಯಾ ಗಾಂಧಿಯವನ್ನು ಭೇಟಿ ಮಾಡಲು ನಿರ್ಧರಿಸಿದ್ದರು.ಈ ಭೇಟಿಗಾಗಿಗ ವರು ಅಪಾಯಿಂಟ್‌ಮೆಂಟ್‌ಗೆ ವಿನಂತಿಸಿದರೂ ಸಿಗಲಿಲ್ಲ. ಆದರೆ ಕಾಂಗ್ರೆಸ್ ಯೋಜನೆ ಬೇರೆಯಾಗಿತ್ತು. ಅದೇನೆಂದರೆ ಸೋನಿಯಾಗಾಂಧಿ ಅವರ ಮನೆಗೆ ಖರ್ಗೆ ಭೇಟಿ ನೀಡುವ ಬದಲು ಸೋನಿಯಾ ಗಾಂಧಿ ಅವರೇ ಖರ್ಗೆ ಅವರ 10 ರಾಜಾಜಿ ಮಾರ್ಗದಲ್ಲಿರುವ ಮನೆಗೆ ಭೇಟಿ ನೀಡಿದ್ದಾರೆ. ಈ ಮೂಲಕ ಸೋನಿಯಾ ಗಾಂಧಿ ಇಲ್ಲಿಯವರೆಗೆ ನಡೆದು ಬರುತ್ತಿದ್ದ ಕಾಂಗ್ರೆಸ್ ‘ಸಂಪ್ರದಾಯವನ್ನು’ ಮುರಿದಿದ್ದಾರೆ.

ಕಾಂಗ್ರೆಸ್ ನಾಯಕತ್ವ ಯಾವುದೇ ಪಕ್ಷದ ನಾಯಕರ ಮನೆಗೆ ಭೇಟಿ ನೀಡಿದ್ದು ಅಪರೂಪ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮನೆಗೂ ಸೋನಿಯಾ ಭೇಟಿ ನೀಡಿದ್ದರು.

2015 ರಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಎರಡು ಬಾರಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರಿಗೆ ಸಮನ್ಸ್ ಬಂದಾಗ ಸಿಂಗ್ ಅವರಿಗೆ ಬೆಂಬಲ ಸೂಚಿಸುವುದಕ್ಕಾಗಿ ಸೋನಿಯಾ ಗಾಂಧಿ ಅವರು ಪಕ್ಷದ ಕಚೇರಿಯಿಂದ ಮನಮೋಹನ್ ಸಿಂಗ್ ಅವರ ಮನೆಗೆ ಕಾಂಗ್ರೆಸ್ ಮೆರವಣಿಗೆ ನಡೆಸಿದ್ದರು ಖರ್ಗೆಯವರ ಮನೆಗೆ ಸೋನಿಯಾ ಗಾಂಧಿಯವರ ಮನೆಯಿಂದ 10 ನಿಮಿಷದ ದಾರಿ. ಅಲ್ಲಿಗೆ ಹೋಗಿ ಸೋನಿಯಾ ಗಾಂಧಿ ಖರ್ಗೆಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.