ಪ್ರಧಾನಿ ಮೋದಿಗೆ ಮಂಡ್ಯದ ವಿಶೇಷ ಆರ್ಗಾನಿಕ್ ಬೆಲ್ಲವನ್ನ ಕೊಡುತ್ತೇನೆ: ಸಂಸದೆ ಸುಮಲತಾ

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12ರಂದು ಮಂಡ್ಯಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲಿದ್ದೇವೆ. ನಮ್ಮ ಬೆಂಬಲಿಗರು ರೋಡ್ ಶೋಗೆ ಸಾಥ್ ನೀಡಲಿದ್ದಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಮಂಡ್ಯದ ವಿಶೇಷ ಆರ್ಗಾನಿಕ್ ಬೆಲ್ಲವನ್ನ ಕೊಡುತ್ತೇನೆ: ಸಂಸದೆ ಸುಮಲತಾ
ಸಂಸದೆ ಸುಮಲತಾ ಅಂಬರೀಷ್ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
Rakesh Nayak Manchi
|

Updated on:Mar 11, 2023 | 11:15 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರು ಮೈಸೂರು ಎಕ್ಸ್​​​ಪ್ರೆಸ್​ ವೇ (Bengaluru-Mysuru Expressway)ಯನ್ನು ಮಾರ್ಚ್ 12ರಂದು ಮಂಡ್ಯದ ಮದ್ದೂರು ತಾಲೂಕಿನಲ್ಲಿ ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh), ಪ್ರಧಾನಿ ಮೋದಿಯವರಿಗೆ ಮಂಡ್ಯ ನಗರದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಿದ್ದೇವೆ. ಇದಕ್ಕಾಗಿ ಜಿಲ್ಲಾಡಳಿತ ತಯಾರಿ ನಡೆಸಿದೆ. ಹಿಂದೆಂದು ನೋಡಿಲ್ಲದಂತೆ, ಮೆಗಾ ಇವೆಂಟ್​ಗಾಗಿ ಮಂಡ್ಯದಲ್ಲಿ ಎಲ್ಲರೂ ಒಂಥರಾ ಕಾತುರದಿಂದ ಕಾಯುತ್ತಿದ್ದಾರೆ. ಮಾತ್ರವಲ್ಲದೆ, ಮೋದಿಯವರ ರೋಡ್ (Modi Road Show) ಶೋಗೆ ನಮ್ಮ ಬೆಂಬಲಿಗರು ಸಾಥ್ ನೀಡಲಿದ್ದಾರೆ. ಮೋದಿಗೆ ನಾನು ಮಂಡ್ಯದ ವಿಶೇಷವಾದ ಆರ್ಗಾನಿಕ್ ಬೆಲ್ಲವನ್ನ ಕೊಡಲಿದ್ದೇನೆ. ಒಟ್ಟಾರೆಯಾಗಿ 41 ವರ್ಷದ ನಂತರ ಪ್ರಧಾನಿಯೊಬ್ಬರು ಜಿಲ್ಲೆಗೆ ಬರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಬಿಜೆಪಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಬೆನ್ನಲ್ಲೇ ಇಂದು ಸುಮಲತಾ ಅವರು ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸುಮಲತಾ, ಯುಡಿಯೂರಪ್ಪ ಅವರು ನನ್ನ ನಿರ್ಧಾರ ಚನ್ನಾಗಿದೆ ಅಂದಿದ್ದಾರೆ. ನಮ್ಮ ಬೆಂಬಲ ಇರುತ್ತದೆ, ಕೆಲವರದ್ದು ನಿಷ್ಠೂರ ಇರುತ್ತದೆ, ಧೈರ್ಯವಾಗಿ ಮುನ್ನುಗ್ಗಿ ಅಂತಾ ಸಲಹೆ ನೀಡಿದ್ದಾರೆ. ಮಂಡ್ಯದ ರಾಜಕೀಯದ ಬಗ್ಗೆ ಮಾತನಾಡಿದರು. ನಾನು ಮಂಡ್ಯದವನೇ ಮುನ್ನುಗ್ಗಿ ಅಂತ ಹೇಳಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Sumalatha Ambareesh: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ಮೋದಿ; ಸುಮಲತಾ ಬಣ್ಣನೆ

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ತಾರಾ? ಈ ಚುನಾವಣೆಯಲ್ಲೇ ಬಿಜೆಪಿಯಿಂದ ವಿಧಾನಸಭಾ ಅಖಾಡಕ್ಕೆ ಧುಮುಕುತ್ತಾರಾ? ಹೀಗೆ ನಾನಾ ಪ್ರಶ್ನೆಗಳು ಮಂಡ್ಯ ರಾಜಕೀಯದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸುಮಲತಾ, ವಿಧಾನಸಭೆ ಚುನಾವಣೆಯಲ್ಲಿ ನಿಲ್ಲುವ ಬಗ್ಗೆ ಚರ್ಚೆ ಮಾಡಿಲ್ಲ, ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಬಿಜೆಪಿಯನ್ನ ಮಂಡ್ಯದಲ್ಲಿ ಬಲಿಷ್ಟಗೊಳಿಸಲು ನನ್ನ ಕಮಿಟ್ ಮೆಂಟ್ ಶೇ. 100ರಷ್ಟು ಇರುತ್ತದೆ. ನನ್ನ ಜಿಲ್ಲೆಗೆ ಅಗತ್ಯವಾದ ಬೆಡಿಕೆಗಳಿವೆ, ಅದನ್ನ ಪೂರೈಸುವುದೇ ನನ್ನ ಉದ್ದೇಶವಾಗಿದೆ ಎಂದರು.

ಕರ್ನಾಟಕ ರಾಜ್ಯವು ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿದ್ದು, ಅಖಾಡದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯಲು ಟೊಂಕ ಕಟ್ಟಿ ನಿತ್ತಿದ್ದು, ಈ ಸಂಬಂಧ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಈಗ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್​ 12 ರಂದು ಧಾರವಾಡ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 pm, Sat, 11 March 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ