ಜಿಎಸ್ ಪಾಟೀಲ್ಗೆ ಸಚಿವ ಸ್ಥಾನ ನೀಡದಿದ್ದರೆ ಸಮೂಹಿಕ ರಾಜೀನಾಮೆ: ರೋಣಾ ಕೈ ಮುಖಂಡರ ಎಚ್ಚರಿಕೆ
ರೋಣ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಗದಗ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ, ಡಿಸಿಎಂ ಪಟ್ಟಕ್ಕಾಗಿ ಭಾರೀ ಪೈಪೋಟಿ ನಡೆದಿತ್ತು. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ, ಡಿಕೆ ಶಿವಕುಮಾರ್ (DK Shivakumar) ಅವರು ಡಿಸಿಎಂ ಆಗುವ ಮೂಲಕ ಜಿದ್ದಾಜಿದ್ದಿ ಕೊನೆಗೊಂಡಿತು ಎನ್ನುಷ್ಟರಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಸಚಿವ ಸ್ಥಾನ ಹಂಚಿಕೆ ತಲೆನೋವಾಗಿ ಪರಿಣಮಿಸಿದೆ. ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿಯಲಾರಂಭಿಸಿದ್ದಾರೆ. ಕೆಲವೆಡೆ ಕಾರ್ಯಕರ್ತರು, ಮುಖಂಡರ ಆಗ್ರಹಗಳು ಕೇಳಿಬರುತ್ತಿವೆ. ಇದೀಗ ರೋಣ ಕ್ಷೇತ್ರ ಶಾಸಕ ಜಿಎಸ್ ಪಾಟೀಲ್ (GS Patil) ಅವರಿಗೆ ಸಚಿವ ಸ್ಥಾನ ನೀಡುವಂತೆ ಕೈ ಮುಖಂಡರು ಆಗ್ರಹಿಸುತ್ತಿದ್ದಾರೆ.
ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಕಾಂಗ್ರೆಸ್ ಮುಖಂಡರು, ಜಿಎಸ್ ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದರೆ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡುವ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಮೇ 23ರಂದು ಕೆಪಿಸಿಸಿ ಕಚೇರಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಮುಖಂಡರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಬಾರಿಯೂ ರೋಣ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗುತ್ತದೆ ಎಂದು ಕಿಡಿಕಾರಿದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ನಾಲ್ಕು ದಶಕದಿಂದ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ಬಾರಿ ಜಿಎಸ್ ಪಾಟೀಲರಿಗೆ ಸಚಿವ ಸ್ಥಾನ ನೀಡಲೇಬೇಕು ಅಂತ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಲಡಾಯಿ, 5 ಲಿಂಗಾಯತ ಶಾಸಕರಲ್ಲಿ ಯಾರಿಗೆ ಮಂತ್ರಿ ಭಾಗ್ಯ?
ಪಾಟೀಲರಿಗೆ ಸಚಿವ ಸ್ಥಾನ ಕೈತಪ್ಪಿದರೆ ಸಾಮೂಹಿಕ ರಾಜೀನಾಮೆ, ಪ್ರತಿಭಟನೆಯ ಜೊತೆಗೆ ಮುಂಬರುವ ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುವುದಾಗಿ ಎಐಸಿಸಿ, ಕೆಪಿಸಿಸಿ ವರಿಷ್ಠರಿಗೆ ರೋಣಾ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ರೋಣ ಕ್ಷೇತ್ರಕ್ಕೆ ಅಷ್ಟೊಂದು ಅನ್ಯಾಯ ಆಗಿದೆ. ಈ ಬಾರಿ ಅನ್ಯಾಯ ಸಹಿಸಲ್ಲ ಎಂದು ಹೇಳಿದ್ದಾರೆ.
ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೈಮುಗಿದು ಕೇಳಿಕೊಂಡ ಮುಖಂಡರು, ನಮ್ಮ ನಾಯಕರಿಗೆ ಮಂತ್ರಿ ಸ್ಥಾನ ಕೊಟ್ಟರೆ ಸಾಕು, ನಮಗೆ ಯಾವುದೇ ಸ್ಥಾನಮಾನ ಬೇಡ. ಈ ಬಾರಿ ಯಾವುದೇ ಕಾರಣಕ್ಕೂ ರೋಣ ಕ್ಷೇತ್ರಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ