ಬಿಜೆಪಿಗೆ ಮತ್ತೆ ಯಡಿಯೂರಪ್ಪ ಅನಿವಾರ್ಯವಾದರೇ? ಅಚ್ಚರಿ ಮೂಡಿಸಿದ ಕಟೀಲ್ ಹೇಳಿಕೆ

ಕರ್ನಾಟಕದಲ್ಲಿ ಪ್ರಭಾವಿ ನಾಯಕ ಬಿಎಸ್​​​​ ಯಡಿಯೂರಪ್ಪ (BS Yediyurappa) ಅವರು ಬಿಜೆಪಿಗೆ (BJP) ಮತ್ತೆ ಅನಿವಾರ್ಯವಾದರೇ? ಕಳೆದ ಕೆಲವು ದಿನಗಳ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ಹೀಗೊಂದು ಪ್ರಶ್ನೆ ಮೂಡಿಸುತ್ತಿದೆ. ಅಲ್ಲದೇ ಇದೀಗ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ. ಹಾಗಾದ್ರೆ, ಕಟೀಲ್ ಏನೆಲ್ಲ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಬಿಜೆಪಿಗೆ ಮತ್ತೆ ಯಡಿಯೂರಪ್ಪ ಅನಿವಾರ್ಯವಾದರೇ? ಅಚ್ಚರಿ ಮೂಡಿಸಿದ ಕಟೀಲ್ ಹೇಳಿಕೆ
ಕರ್ನಾಟಕ ಬಿಜೆಪಿ
Follow us
ರಮೇಶ್ ಬಿ. ಜವಳಗೇರಾ
|

Updated on: Sep 17, 2023 | 4:52 PM

ಕೋಲಾರ, (ಸೆಪ್ಟೆಂಬರ್ 17): ಕರ್ನಾಟಕ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ(BJP) ಗುಂಪುಗಾರಿಕೆ ಶುರುವಾಗಿದ್ದು, ಯಡಿಯೂರಪ್ಪ (BS Yediyurappa) ಹಾಗೂ ಬಿಎಲ್​ ಸಂತೋಷ್​ ಬೆಂಬಲಿಗರ ನಡುವೆ ಬಹಿರಂಗ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ವಿಧಾನಸಭೆ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ಹೈಕಮಾಂಡ್​, ಮುಂಬರುವ ಲೋಕಸಭಾ ಚುನಾವಣೆಗೆ ಮತ್ತೆ ಯಡಿಯೂಪ್ಪನವರ ಮುಂದೆ ಬಿಡಲು ಮುಂದಾಗಿದೆ. ವಿಧಾನಸಭಾ ಸೋಲಿನಿಂದ ಚೇತರಿಸಿಕೊಳ್ಳುತ್ತಿರುವ ಬಿಜೆಪಿಗೆ ಯಡಿಯೂಪ್ಪ ಅನಿವಾರ್ಯ ಎಂಬ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಪೂರಕವೆಂಬಂತೆ ಈಗಾಗಲೇ ಯಡಿಯೂರಪ್ಪನವರೊಂದಿಗೆ ಅಮಿತ್ ಶಾ, ನಡ್ಡಾ, ಮೋದಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇದರ ಮಧ್ಯೆ ಇದೀಗ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಹ ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಪ್ರವಾಸ ಮಾಡಿ ಯಶಸ್ವಿಯಾತ್ತೇವೆ ಎಂದಿದ್ದಾರೆ. ಇದರೊಂದಿಗೆ ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ ಎನ್ನುವುದನ್ನು ಒತ್ತಿ ಹೇಳಿದಂತಿದೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಪ್ರವಾಸ ಮಾಡಿ ಯಶಸ್ವಿಯಾಗುತ್ತೇವೆ. ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನವನ್ನೂ ಗೆಲ್ಲಲು ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭ ಮಾಡಿದ್ದೇವೆ. ಉಚಿತ ವಿದ್ಯುತ್ ಕೊಡುತ್ತೇವೆ ಅಂತಹೇಳಿ ವಿದ್ಯುತ್ ಕಡಿತ ಮಾಡ್ತಿದ್ದಾರೆ. ರಾಜ್ಯ ಸರ್ಕಾರ ರೈತರ ಹೊಟ್ಟೆ ಹೊಡೆಯುವ ಕೆಲಸ ಮಾಡುತ್ತಿದೆ. ಕದ್ದು ಮುಚ್ಚಿ ನೀರು ಬಿಡುವ ಮೂಲಕ ಕಾಂಗ್ರೆಸ್​​ ತನ್ನ ಬುದ್ಧಿ ತೋರಿಸಿದೆ. ಇಬ್ಬರು ಮಂತ್ರಿಗಳ ಮೇಲೆ ಕೇಸ್ ದಾಖಲಾದ್ರೂ ರಾಜೀನಾಮೆ ಪಡೆದಿಲ್ಲ. ದೂರು ನೀಡಿದವರ ಮೇಲೆಯೇ ಪ್ರಕರಣ ದಾಖಲು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಜನವರಿಗೆ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕ ಆಯ್ಕೆ ಮಾಡಿಲ್ಲ: ಯತ್ನಾಳ್ ಬಾಂಬ್​

ಚುನಾವಣೆ ಮುಗಿದು ಮೂರು ತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆಯೂ ಆಗಿಲ್ಲ. ಜೊತೆಗೆ ರಾಜ್ಯಾಧ್ಯಕ್ಷರ ಬದಲಾವಣೆಯೂ ಆಗದೇ ನಾಯಕತ್ವದ ಕೊರತೆಯನ್ನು ಬಿಜೆಪಿ ಎದುರಿಸುತ್ತಿದೆ. ಈ ವೇಳೆ ಬಿಎಸ್‌ ಯಡಿಯೂರಪ್ಪ ಮತ್ತೆ ಅಖಾಡಕ್ಕೆ ಧುಮುಕಿದ್ದಾರೆ. ಬಿಜೆಪಿಗೆ ವಲಸೆ ಬಂದ ಪ್ರಮುಖ ನಾಯಕರು ಪಕ್ಷ ತ್ಯಜಿಸದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಕೂಡ ಅವರೇ ಹೊತ್ತುಕೊಂಡಂತೆ ಕಾಣುತ್ತಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಇನ್ನು ಇನ್ನೊಂದೆಜ್ಜೆ ಮುಂದೆ ಹೋಗಿ ಕರ್ನಾಟಕದಾದ್ಯಂತ ಪ್ರವಾಸ ಮಾಡಲು ಮುಂದಾಗಿದ್ದಾರೆ. ಇದರೊಂದಿಗೆ ಕರ್ನಾಟಕ ಬಿಜೆಪಿಗೆ ಬಿಎಸ್‌ ಯಡಿಯೂರಪ್ಪ ಅನಿವಾರ್ಯ ಎಂಬುದು ಸ್ಪಷ್ಟವಾಗಿದೆ.

ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಯಶಸ್ವಿಯಾಗುತ್ತೇವೆ ಎನ್ನುವ ನಳಿನ್ ಕುಮಾರ್ ಕಟೀಲ್ ಅವರ ಈ ಮಾತುಗಳು ಬೇರೆ ಬೇರೆ ಆಯಾಮಗಳ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಲೋಕಸಸಭೆ ಚುನಾವಣೆಗೆ ಹೋಗಲು ಮುಂದಾಗಿದ್ಯಾ? ಯಡಿಯೂರಪ್ಪ ಫೇಸ್​ ಬಿಜೆಪಿಗೆ ಅನಿವಾರ್ಯ ಎನ್ನುವುದು ಹೈಕಮಾಂಡ್​ ನಾಯಕರಿಗೆ ಮನವರಿಕೆಯಾಗಿದ್ಯಾ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಗೊಂದಲಗಳು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಹೈಕಮಾಂಡ್ ಜೊತೆ ಯಡಿಯೂರಪ್ಪ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಹೈಕಮಾಂಡ್​ ಸಹ ತಾವೇ ಮುಂದಾಳತ್ವ ಬಹಿಸಿಕೊಳ್ಳುವಂತೆ ಯಡಿಯೂರಪ್ಪಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಯಡಿಯೂರಪ್ಪ ಕರ್ನಾಟಕ ಪ್ರವಾಸ ಕೈಗೊಳ್ಳುವುದರ ಜೊತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್