AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಸೇರಿದಂತೆ ಎಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸುತ್ತೇವೆ: ಸಚಿವ ಈಶ್ವರಪ್ಪ

ರಾಷ್ಟ್ರಧ್ವಜ ಗೌರವಿಸದವನು ರಾಷ್ಟ್ರದ್ರೋಹಿ ಆಗುತ್ತಾನೆ. ರಾಷ್ಟ್ರಧ್ವಜವನ್ನು ಹಾರಿಸುವುದಕ್ಕೂ ನಿಯಮಗಳಿವೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.

ಕೆಂಪುಕೋಟೆ ಸೇರಿದಂತೆ ಎಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸುತ್ತೇವೆ: ಸಚಿವ ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ
TV9 Web
| Edited By: |

Updated on: Feb 09, 2022 | 7:28 PM

Share

ಬೆಂಗಳೂರು: ಕೆಂಪುಕೋಟೆ ಸೇರಿದಂತೆ ಎಲ್ಲಿ ಬೇಕಾದರೂ ನಾವು ಕೇಸರಿ ಧ್ವಜ ಹಾರಿಸುತ್ತೇವೆ. ಆದರೆ ಎಲ್ಲಿಯೂ ನಾವು ರಾಷ್ಟ್ರಧ್ವಜವನ್ನು ತೆಗೆದು ಕೇಸರಿ ಧ್ವಜವನ್ನು ಹಾರಿಸಿಲ್ಲ. ಇನ್ನು ಮುಂದೆಯೂ ಹಾಗೆ ಮಾಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ರಾಷ್ಟ್ರಧ್ವಜಕ್ಕೆ ದೇಶದಲ್ಲಿರುವ ಎಲ್ಲರೂ ಗೌರವ ಕೊಡಲೇಬೇಕು. ರಾಷ್ಟ್ರಧ್ವಜ ಗೌರವಿಸದವನು ರಾಷ್ಟ್ರದ್ರೋಹಿ ಆಗುತ್ತಾನೆ. ರಾಷ್ಟ್ರಧ್ವಜವನ್ನು ಹಾರಿಸುವುದಕ್ಕೂ ನಿಯಮಗಳಿವೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಅವರು, ಬಂಡೆಯನ್ನು ಲೂಟಿ ಮಾಡಿರುವುದು ಡಿ.ಕೆ.ಶಿವಕುಮಾರ್. ನಾವು ಎಷ್ಟು ಬೇಕಾದರೂ ಕೇಸರಿ ಶಾಲು ಹಂಚುತ್ತೇವೆ. ಅದನ್ನು ಕೇಳಲು ಡಿ.ಕೆ.ಶಿವಕುಮಾರ್‌ಗೆ ಅಧಿಕಾರವಿಲ್ಲ. ಡಿಕೆಶಿ ಏನು ಹೇಳುತ್ತಿದ್ದಾರೆ ಎನ್ನುವುದನ್ನು ನೇರವಾಗಿ ಹೇಳಲಿ. ಹೀಗೆ ಸುತ್ತಿ ಬಳಸಿ ಮಾತನಾಡಿದರೆ ಪ್ರಯೋಜನವಿಲ್ಲ ಎಂದು ತಿಳಿಸಿದರು.

ಸಮವಸ್ತ್ರ ಧರಿಸಿ ಶಾಲೆಗೆ ಹೋಗಿ ಎಂದಷ್ಟೇ ನಾವು ಹೇಳುತ್ತಿದ್ದೇವೆ. ಶಾಲೆ ಹೊರತುಪಡಿಸಿ ಬೇರೆ ಕಡೆ ಅವರು ಯಾವ ವಸ್ತ್ರ ಧರಿಸಿದರೂ ನಮಗೆ ಆಕ್ಷೇಪವಿಲ್ಲ. ಅವರನ್ನು ನಾವು ತಡೆಯುತ್ತಲೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಎಲ್ಲಿಗೆ ಬೇಕಾದರೂ ಕೇಸರಿ ಶಾಲು ಧರಿಸಿ ಹೋಗುತ್ತೇವೆ. ಆದರೆ ಸಮವಸ್ತ್ರ ಧರಿಸಿ ಹೋಗಬೇಕಾದ ಜಾಗಕ್ಕೆ ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಹೋಗುವುದು ತಪ್ಪು. ಕೇಸರಿ ಧ್ವಜವನ್ನು ನಾವು ಎಲ್ಲಿ ಬೇಕಾದರೂ ಹಾರಿಸುತ್ತೇವೆ. ಕೆಂಪುಕೋಟೆ ಮೇಲೂ ನಾವು ಕೇಸರಿ ಧ್ವಜ ಹಾರಿಸುವವರೇ ಎಂದು ಸವಾಲು ಹಾಕಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಮೀರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಧ್ವಜ ಬದಲಾವಣೆ: ಅಶ್ವತ್ಥ ನಾರಾಯಣ ಸ್ಪಷ್ಟನೆ

ಬೆಂಗಳೂರು: ಭಾರತದ ರಾಷ್ಟ್ರಧ್ವಜ ಬದಲಿಸಬೇಕು ಎಂದು ಬಿಜೆಪಿ ಎಲ್ಲಿಯೂ ಹೇಳಿಲ್ಲ. ರಾಷ್ಟ್ರಧ್ವಜ ಬದಲಾವಣೆ ಮಾಡುವುದಿಲ್ಲ. ಸಚಿವ ಈಶ್ವರಪ್ಪ ಕೇವಲ ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಅವರು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದರು.

ಇದನ್ನೂ ಓದಿ: ಶಾಂತಿ ಕದಡುವ ಸುಳ್ಳು ಸುದ್ದಿ ಪೋಸ್ಟ್​ ಮಾಡಿದ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡಿದ ಬಿಜೆಪಿ

ಇದನ್ನೂ ಓದಿ: ಹಿಜಾಬ್ ಗಲಾಟೆಯ ಹಿಂದೆ SDPI ಇದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಸಂಪೂರ್ಣ ಮಾಹಿತಿ ನೀಡಿದ ಕರಾವಳಿ ಕಾಂಗ್ರೆಸ್

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!