Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?

ಚೆನ್ನೈನಲ್ಲಿ ನಡೆದ ಕ್ಷೇತ್ರ ವಿಂಗಡಣೆ ಸಭೆಯಲ್ಲಿ ಡಿಕೆ ಶಿವಕುಮಾರ್​ ಭಾಗವಹಿಸಿದ್ದರು. ಮೇಕೆದಾಟು ಯೋಜನೆ ವಿರೋಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ I.N.D.I ಮೈತ್ರಿಕೂಟದ ನಾಯಕರು ಭಾಗಿಯಾಗಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಡಿಕೆ ಶಿವಕುಮಾರ್​ ಹಾಸ್ಯಮಯವಾಗಿ ಉತ್ತಿರಿಸಿದ್ದಾರೆ.

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?
ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 22, 2025 | 3:33 PM

ಬೆಂಗಳೂರು, ಮಾರ್ಚ್​ 22: ಚೆನ್ನೈನಲ್ಲಿ ಕ್ಷೇತ್ರ ವಿಂಗಡಣೆ ವಿಚಾರವಾಗಿ ನಡೆದ ಸಭೆಯಲ್ಲಿ ಕರ್ನಾಟಕದಿಂದ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇತ್ತ ಮೇಕೆದಾಟು ಯೋಜನೆ ವಿರೋಧಿಸಿ, ಕ್ಷೇತ್ರ ಮರುವಿಂಗಡಣೆ ಕುರಿತ ಸಭೆಗೆ ಬಂದಿರುವ ಡಿಕೆ ಶಿವಕುಮಾರ್​​ ವಿರುದ್ಧ ಕಪ್ಪು ಬಟ್ಟೆ ಧರಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆಯುತ್ತಿರುವ ಐಎನ್​ಡಿಐ (INDI) ಮೈತ್ರಿಕೂಟದ ನಾಯಕರನ್ನು ಯಾಕೆ ಸಭೆಗೆ ಕರೆದಿದ್ದೀರಿ ಎಂದು ಬಿಜೆಪಿ ಕಿಡಿಕಾರಿದ್ದು, ಇದಕ್ಕೆ ಡಿಕೆ ಶಿವಕುಮಾರ್​ ಹಾಸ್ಯಮಯವಾಗಿ ಉತ್ತರ ನೀಡಿದ್ದಾರೆ.

ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್ ಎಂದ ಡಿಕೆ ಶಿವಕುಮಾರ್

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್​, ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್​. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅವರಿಗೆ ನನ್ನ ಶಕ್ತಿ ಬಗ್ಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ, ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರಿಗೆ ಶುಭವಾಗಲಿ ಎಂದು ಕಿಡಿಕಾರಿದ್ದಾರೆ.

ಇತ್ತ ಅಣ್ಣಾಮಲೈ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಡಿಕೆ ಶಿವಕುಮಾರ್​ಗೆ ತಿರುಗೇಟು ಕೊಟ್ಟಿದ್ದಾರೆ. ಹೌದು. ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಇದನ್ನು ನೆನಪಿಸಿಕೊಂಡಿದ್ದಕ್ಕೆ ನಿಮಗೆ ಧನ್ಯವಾದಗಳು ಡಿಕೆ ಶಿವಕುಮಾರ್​​ ಅವರೇ ಎಂದು ಹೇಳಿದ್ದಾರೆ.

ಅಲ್ಲದೆ, ಸಿಎಂ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಿಗೆ ಈ ಬಡವನಿಂದ ನಿಮಗೆ ಶುಭಾಶಯಗಳು ಎಂದು ಹಾಸ್ಯಮಯವಾಗಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:30 pm, Sat, 22 March 25