ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?

ಚೆನ್ನೈನಲ್ಲಿ ನಡೆದ ಕ್ಷೇತ್ರ ವಿಂಗಡಣೆ ಸಭೆಯಲ್ಲಿ ಡಿಕೆ ಶಿವಕುಮಾರ್​ ಭಾಗವಹಿಸಿದ್ದರು. ಮೇಕೆದಾಟು ಯೋಜನೆ ವಿರೋಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ I.N.D.I ಮೈತ್ರಿಕೂಟದ ನಾಯಕರು ಭಾಗಿಯಾಗಿದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಡಿಕೆ ಶಿವಕುಮಾರ್​ ಹಾಸ್ಯಮಯವಾಗಿ ಉತ್ತಿರಿಸಿದ್ದಾರೆ.

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?
ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?

Updated on: Mar 22, 2025 | 3:33 PM

ಬೆಂಗಳೂರು, ಮಾರ್ಚ್​ 22: ಚೆನ್ನೈನಲ್ಲಿ ಕ್ಷೇತ್ರ ವಿಂಗಡಣೆ ವಿಚಾರವಾಗಿ ನಡೆದ ಸಭೆಯಲ್ಲಿ ಕರ್ನಾಟಕದಿಂದ ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇತ್ತ ಮೇಕೆದಾಟು ಯೋಜನೆ ವಿರೋಧಿಸಿ, ಕ್ಷೇತ್ರ ಮರುವಿಂಗಡಣೆ ಕುರಿತ ಸಭೆಗೆ ಬಂದಿರುವ ಡಿಕೆ ಶಿವಕುಮಾರ್​​ ವಿರುದ್ಧ ಕಪ್ಪು ಬಟ್ಟೆ ಧರಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆಯುತ್ತಿರುವ ಐಎನ್​ಡಿಐ (INDI) ಮೈತ್ರಿಕೂಟದ ನಾಯಕರನ್ನು ಯಾಕೆ ಸಭೆಗೆ ಕರೆದಿದ್ದೀರಿ ಎಂದು ಬಿಜೆಪಿ ಕಿಡಿಕಾರಿದ್ದು, ಇದಕ್ಕೆ ಡಿಕೆ ಶಿವಕುಮಾರ್​ ಹಾಸ್ಯಮಯವಾಗಿ ಉತ್ತರ ನೀಡಿದ್ದಾರೆ.

ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್ ಎಂದ ಡಿಕೆ ಶಿವಕುಮಾರ್

ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್​, ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್​. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅವರಿಗೆ ನನ್ನ ಶಕ್ತಿ ಬಗ್ಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ, ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರಿಗೆ ಶುಭವಾಗಲಿ ಎಂದು ಕಿಡಿಕಾರಿದ್ದಾರೆ.


ಇತ್ತ ಅಣ್ಣಾಮಲೈ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಡಿಕೆ ಶಿವಕುಮಾರ್​ಗೆ ತಿರುಗೇಟು ಕೊಟ್ಟಿದ್ದಾರೆ. ಹೌದು. ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಇದನ್ನು ನೆನಪಿಸಿಕೊಂಡಿದ್ದಕ್ಕೆ ನಿಮಗೆ ಧನ್ಯವಾದಗಳು ಡಿಕೆ ಶಿವಕುಮಾರ್​​ ಅವರೇ ಎಂದು ಹೇಳಿದ್ದಾರೆ.

ಅಲ್ಲದೆ, ಸಿಎಂ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಿಗೆ ಈ ಬಡವನಿಂದ ನಿಮಗೆ ಶುಭಾಶಯಗಳು ಎಂದು ಹಾಸ್ಯಮಯವಾಗಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:30 pm, Sat, 22 March 25

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us